ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮತ್ತೆ ಮೂರ್ನಾಲ್ಕು ದಿನಗಳ ಕಾಲ ಮಳೆ ಬೀಳಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಂಗಳವಾರ (ಅ. 29) ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಹಾಸನ, ಚಿಕ್ಕಮಗಳೂರು, ಮಂಡ್ಯ ಮತ್ತು ರಾಮನಗರ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಳಿದಂತೆ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಒಣ ಹವಾಮಾನ ಇರಲಿದೆ ಎಂದುಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬುಧವಾರ (ಅ.30) ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಹಲವೆಡೆ ಸಾಧಾರಣ ಮಳೆಯಾಗುವ ಸಂಭವವಿದೆ. ದಕ್ಷಿಣ ಕನ್ನಡ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ ಮತ್ತು ನಗರ, ಕೋಲಾರ, ಬೆಳಗಾವಿ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಲ್ಲಿ ಒಣ ಹವಾಮಾನವು ಮುಂದುವರಿಯುವ ಸಾಧ್ಯತೆಯಿದೆ.
ಗುರುವಾರ (ಅ.31) ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ, ಕೊಪ್ಪಳ, ಗದಗ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಒಂದೆರಡು ಕಡೆಗಳಲ್ಲಿ ಹಾಗೂ ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಂಭವವಿದೆ.
ಶುಕ್ರವಾರ (ನವೆಂಬರ್ 1) ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡು ಉಳಿದ ಜಿಲ್ಲೆಗಳಲ್ಲಿ ಅನೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಅಲ್ಲಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇದೇ ರೀತಿಯ ಹವಾಮಾನ ಅಕ್ಟೋಬರ್ 3ರವರೆಗೂ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.


ನಿಮ್ಮ ಕಾಮೆಂಟ್ ಬರೆಯಿರಿ