ಮುಡಾ ಹಗರಣದ ತನಿಖೆ ಚುರುಕು : ಬೆಂಗಳೂರು ಸೇರಿ ರಾಜ್ಯದ 9 ಕಡೆ ‘ಇ.ಡಿ.’ ದಾಳಿ

ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದದಲ್ಲಿ ನಡೆದಿದೆ ಎನ್ನಲಾದ ಹಗರಣಕ್ಕೆ (MUDA scam) ಸಂಬಂಧಿಸಿದಂತೆ ತನಿಖೆ ಚುರುಕುಗೊಂಡಿದ್ದು, ಸೋಮವಾರ ಜಾರಿ ನಿರ್ದೇಶನಾಲಯದ (ED) ಅಧಿಕಾರಿಗಳು ಬೆಂಗಳೂರುಸೇರಿದಂತೆ ರಾಜ್ಯದ 9 ಸ್ಥಳಗಳಲ್ಲಿ ದಾಳಿ ನಡೆಸಿದ್ದಾರೆ ಎಂದು ವರದಿಯಾಗಿದೆ.
ಮುಡಾ ಸೈಟ್ ಅಕ್ರಮ ಪ್ರಕರಣ ಸಂಬಂಧ ಸೋಮವಾರ ಇಡಿ ಅಧಿಕಾರಿಗಳು ಬೆಂಗಳೂರು ಸೇರಿದಂತೆ ಮುಂಜಾನೆಯೇ ರಾಜ್ಯದ 9 ಕಡೆ ಮನೆ, ಕಚೇರಿಗಳ ಮೇಲೆ ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.
ಇಡಿ ಅಧಿಕಾರಿಗಳು ಅಕ್ಟೋಬರ್​ 18 ಮುಡಾ ಕಚೇರಿ ಸೇರಿದಂತೆ ಮೈಸೂರಿನ ಇತರ ಕೆಲವು ಸ್ಥಳಗಳ ಮೇಲೆ ದಾಳಿ ಮಾಡಿದ್ದರು.

ದಾಳಿ ಬಳಿಕ ಇ.ಡಿ. ಅಧಿಕಾರಿಗಳು ಮುಡಾದ ಆರು ಅಧಿಕಾರಿಗಳನ್ನು ವಿಚಾರಣೆಗೆ ಒಳಪಡಿಸಿದ್ದರುರು. ಬೆಂಗಳೂರಿನ ಇಡಿ ಕಚೇರಿಯಲ್ಲಿ ಮುಡಾದ ಕೆಲವು ಕೆಳಹಂತದ ಅಧಿಕಾರಿಗಳನ್ನು ವಿಚಾರಣೆ ನಡೆಸಿದ್ದರು. ಅದರ ನಂತರ ನಂತರ ಈ ದಾಳಿ ನಡೆದಿದೆ. ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಬಿಲ್ಡರ್ ಒಬ್ಬರ ನಿವಾಸದ ಮೇಲೆ ಇ.ಡಿ. ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ. ಬೆಂಗಳೂರು, ಮೈಸೂರು ಸೇರಿದಂತೆ 9 ಸ್ಥಳಗಳಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಹಲವರ ಮನೆ, ಕಚೇರಿಗಳ ಮೇಲೆ ದಾಳಿ ನಡೆಸಲಾಗಿದ್ದು, ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ. ಸಿದ್ದರಾಮಯ್ಯ ಅವರು ತಮ್ಮ ಪತ್ನಿಗೆ ಮುಡಾದಿಂದ 14 ನಿವೇಶನ ಹಂಚಿಕೆಯಲ್ಲಿ ನಡೆದಿರುವ ಅಕ್ರಮಗಳ ಕುರಿತು ಲೋಕಾಯುಕ್ತ ಹಾಗೂ ಇಡಿ ತನಿಖೆ ಎದುರಿಸುತ್ತಿದ್ದಾರೆ. ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರನ್ನು ಇತ್ತೀಚೆಗೆ ಲೋಕಾಯುಕ್ತ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದರು.

ಪ್ರಮುಖ ಸುದ್ದಿ :-   ಏರ್ ಇಂಡಿಯಾ ವಿಮಾನದಲ್ಲಿ 7 ಮಂದಿ ಅಸ್ವಸ್ಥ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement