ಮುಡಾ ಪ್ರಕರಣದಲ್ಲಿ ಬೆಳವಣಿಗೆ: ಮುಡಾ ಮಾಜಿ ಆಯುಕ್ತ ನಟೇಶ ವಶಕ್ಕೆ ಪಡೆದ ಇ.ಡಿ.ಅಧಿಕಾರಿಗಳು…

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (MUDA) ನಿವೇಶನ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯಾಗಿದ್ದು, ಮುಡಾ ಮಾಜಿ ಆಯುಕ್ತ ನಟೇಶ ಅವರನ್ನು ಜಾರಿ ನಿರ್ದೇಶನಾಲಯದ (ED) ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ.
ವಿಚಾರಣೆಗೆ ಸಹಕರಿಸದ ಹಿನ್ನೆಲೆಯಲ್ಲಿ ನಟೇಶ ಅವರನ್ನು ಶಾಂತಿನಗರದ ಇ.ಡಿ ಕಚೇರಿಗೆ ಅಧಿಕಾರಿಗಳು ಕರೆದೊಯ್ದಿದ್ದಾರೆ ಎನ್ನಲಾಗಿದೆ.
ಮುಡಾದಿಂದ 50:50 ಅನುಪಾತದಲ್ಲಿ 928 ನಿವೇಶನಗಳ ಅಕ್ರಮ ಹಂಚಿಕೆಯಾಗಲು ಪ್ರಾಧಿಕಾರದ ಹಿಂದಿನ ಆಯುಕ್ತರಾಗಿದ್ದ ಡಿ.ಬಿ.ನಟೇಶ ಅವರ ಪಾತ್ರದ ಬಗ್ಗೆ ಆರೋಪಿಸಲಾಗಿತ್ತು.

ಮುಡಾ ಸೈಟ್ ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಮಲ್ಲೇಶ್ವರಂ 10ನೇ ಕ್ರಾಸ್ ನಲ್ಲಿರುವ ಮಾಜಿ ಮುಡಾ ಆಯುಕ್ತ ನಟೇಶ್ ಮನೆ ಮೇಲೆ ಸೋಮವಾರ ಇ.ಡಿ. ಅಧಿಕಾರಿಗಳು ದಾಳಿ ನಡೆಸಿ ದಾಖಲೆ ಪರಿಶೀಲನೆ ನಡೆಸಿದ್ದರು. ನಂತರ ಇ.ಡಿ. ಅಧಿಕಾರಿಗಳು ದಾಖಲೆಗಳನ್ನ ಕೊಂಡೊಯ್ದಿದ್ದಾರೆ. ಈ ಮಧ್ಯೆ ವಿಚಾರಣೆಗೆ ಸಹಕರಿಸದ ಹಿನ್ನೆಲೆಯಲ್ಲಿ ನಟೇಶ ಅವರನ್ನು ವಶಕ್ಕೆ ಪಡೆದ ಇ.ಡಿ. ಅಧಿಕಾರಿಗಳು ಶಾಂತಿನಗರದ ಕಚೇರಿಗೆ ಕರೆದೊಯ್ದಿದ್ದಾರೆ ಎನ್ನಲಾಗಿದೆ. ಮಂಗಳವಾರ ಬೆಳಗ್ಗೆ ಯಿಂದ ನಾಲ್ಕು ಜನ ಇಡಿ ಅಧಿಕಾರಿಗಳ ತಂಡ ಮನೆಯಲ್ಲಿ ದಾಖಲೆಗಳ ಪರಿಶೀಲನೆ ನಡೆಸಿತು.
ಸೋಮವಾರ ಮಾಜಿ ಆಯುಕ್ತ ನಟೇಶ ಮನೆ ಸೇರಿದಂತೆ ನಾಲ್ಕು ಕಡೆಗಳಲ್ಲಿ ಇ.ಡಿ. ಅಧಿಕಾರಿಗಳು ದಾಳಿ ನಡೆಸಿದ್ದರು. ನಟೇಶ ಮುಡಾ ಆಯುಕ್ತರಾಗಿದ್ದಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿಗೆ ಸೈಟ್ ಹಂಚಿಕೆಯಾಗಿತ್ತು ಎಂದು ಆರೋಪಿಸಲಾಗಿದೆ.

ಪ್ರಮುಖ ಸುದ್ದಿ :-   ಶಿರಸಿ | ಮನೆಯ ಅಂಗಳಕ್ಕೇ ಬಂದ ಚಿರತೆ ; ದೃಶ್ಯ ಸಿಸಿಟಿವಿಯಲ್ಲಿ ಸೆರೆ

5 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement