ವೀಡಿಯೊ..| ಕೇರಳ ಸಿಎಂ ಬೆಂಗಾವಲು ವಾಹನಗಳ ಸರಣಿ ಡಿಕ್ಕಿ ; ಪಿಣರಾಯಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ

ತಿರುವನಂತಪುರಂ : ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ (Pinarayi Vijayan) ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ. ತಿರುವನಂತಪುರದಲ್ಲಿ ಈ ಘಟನೆ ನಡೆದಿದ್ದು, ದ್ವಿಚಕ್ರ ವಾಹನ ಸವಾರರಿಗೆ ಡಿಕ್ಕಿ ಹೊಡೆದುವುದನ್ನು ತಪ್ಪಿಸಲು ಹೋಗಿ ಒಮ್ಮೆಲೇ ಬ್ರೇಕ್‌ ಹಾಕಿದ ಪರಿಣಾಮ ಅವರ ಬೆಂಗಾವಲು ಕಾರುಗಳು ಸರಣಿಯಾಗಿ ಡಿಕ್ಕಿ ಹೊಡೆದುಕೊಂಡಿವೆ.
ಈ ಅಪಘಾತದ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್‌ ಆಗುತ್ತಿದೆ. ಸೋಮವಾರ ಸಂಜೆ ದ್ವಿಚಕ್ರ ವಾಹನ ಚಾಲಕನನ್ನು ರಕ್ಷಿಸಲು ಪೈಲಟ್ ಕಾರು ಏಕಾಏಕಿ ನಿಲ್ಲಿಸಿದಾಗ ಪಿಣರಾಯಿ ವಿಜಯನ್ ಅವರ ಬೆಂಗಾವಲು ಪಡೆಯ ಭಾಗವಾಗಿದ್ದ ಹಲವಾರು ವಾಹನಗಳು ಒಂದಕ್ಕೊಂದು ಡಿಕ್ಕಿ ಹೊಡೆದುಕೊಂಡಿವೆ.

ಮುಖ್ಯಮಂತ್ರಿಯವರ ವಾಹನಕ್ಕೆ ಸಣ್ಣಪುಟ್ಟ ಹಾನಿಯಾಗಿದೆ. ಅಪಘಾತದಲ್ಲಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರಿಗೆ ಯಾವುದೇ ಗಾಯಗಳಾಗಿಲ್ಲ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ವಿಜಯನ್ ಅವರು ಕೊಟ್ಟಾಯಂಗೆ ಭೇಟಿ ನೀಡಿದ ನಂತರ ರಾಜ್ಯ ರಾಜಧಾನಿಗೆ ಹಿಂದಿರುಗುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಸಿಎಂ ಜೊತೆಗೆ ಚಲಿಸುತ್ತಿದ್ದ ಸುಮಾರು ಏಳು ಬೆಂಗಾವಲು ವಾಹನಗಳು ಸರಣಿಯಾಗಿ ಡಿಕ್ಕಿ ಹೊಡೆದುಕೊಂಡಿವೆ. ಈ ಬೆಂಗಾವಲು ವಾಹನಗಳು ಬರುತ್ತಿರುವಾಗಲೇ ಮಹಿಳೆಯೊಬ್ಬರು ರಸ್ತೆಯಲ್ಲಿ ದಿಢೀರನೆ ಬಲಕ್ಕೆ ತಿರುಗಿಸಿದ್ದಾರೆ. ಹಾಗಾಗಿ ಮುಂದೆ ಹೋಗುತ್ತಿದ್ದ ಭದ್ರತಾ ವಾಹನಗಳು ಅವರನ್ನು ಪಾರು ಮಾಡಲು ಬ್ರೇಕ್‌ ಹಾಕಿವೆ.
ಈ ವೇಳೆ ಹಿಂದೆಯೇ ವೇಗವಾಗಿ ಬರುತ್ತಿದ್ದ ಸಿಎಂ ವಾಹನ ಸೇರಿದಂತೆ ಕೊನೆಯ ಆಂಬುಲೆನ್ಸ್‌ ಸೇರಿ ಏಳು ವಾಹನಗಳು ಒಂದಕ್ಕೊಂದು ಡಿಕ್ಕಿ ಹೊಡೆದುಕೊಂಡಿವೆ. ಅದೃಷ್ಟವಶಾತ್‌ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಕ್ಷೇಮವಾಗಿದ್ದಾರೆ.

ಪ್ರಮುಖ ಸುದ್ದಿ :-   ವೀಡಿಯೊ..| ತರಗತಿಯಲ್ಲಿ ಪಾಠ ಕೇಳುತ್ತಿದ್ದಾಗಲೇ ಕುಸಿದು ಬಿದ್ದು ವಿದ್ಯಾರ್ಥಿನಿ ಸಾವು ; ಶಾಕಿಂಗ್‌ ದೃಶ್ಯ ಸಿಸಿಟಿವಿಯಲ್ಲಿ ಸೆರೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement