ಹಾಸನ : ಹಾಸನದ ಅಧಿದೇವತೆಯಾದ ಹಾಸನಾಂಬೆಯ ದರ್ಶನ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ. ತಾಯಿ ಹಾಸನಾಂಬೆಗೆ ಖಡ್ಗಮಾಲಾ ಸ್ತೋತ್ರದ ಅರ್ಚನೆ ಮಾಡಿಸಿದ್ದಾರೆ ಎಂದು ವರದಿಯಾಗಿದೆ.
ಹಾಸನಾಂಬೆ ದೇವಿ ದರ್ಶನ ಪಡೆಯುವಾಗ ಅಷ್ಟೋತ್ತರದಿಂದ ಪೂಜೆ ಮಾಡುವುದು ವಾಡಿಕೆಯಾಗಿದೆ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖಡ್ಗಮಾಲಾ ಸ್ತೋತ್ರದ ಮೂಲಕ ದೇವಿಯನ್ನು ಅರ್ಚಿಸಿದ್ದು ವಿಶೇಷವಾಗಿತ್ತು. ಖಡ್ಗಮಾಲಾ ಸ್ತೋತ್ರ ಶಕ್ತಿ ದೇವಿಯ ಅತ್ಯಂತ ಪವಿತ್ರ ಮತ್ತು ಶಕ್ತಿಯುತ ಮಂತ್ರವಾಗಿದ್ದು. ಈ ಮಂತ್ರವನ್ನು ಪಠಿಸುವುದರಿಂದ ಅತೀಂದ್ರಿಯ ಆಯುಧಗಳ ರಕ್ಷಣಾತ್ಮಕ ಮಾಲೆ ಸಿಗುತ್ತದೆ ಹಾಗೂ ಎಲ್ಲಾ ರೀತಿಯ ಸಮಸ್ಯೆಗಳಿಂದ ಇದು ಮುಕ್ತಿ ನೀಡುತ್ತದೆ ಎನ್ನುವ ನಂಬಿಕೆ ಇದೆ.
ಮುಡಾ ಹಗರಣ ಸೇರಿದಂತೆ ಅನೇಕ ವಿಚಾರಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಕಷ್ಟ ಎದುರಿಸುತ್ತಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ