ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್ ಅವರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದ ಮುಂಬೈನ ಬಾಂದ್ರಾದಲ್ಲಿ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.
ಮುಂಬೈ ಟ್ರಾಫಿಕ್ ಪೊಲೀಸರಿಗೆ ಅಪರಿಚಿತ ವ್ಯಕ್ತಿಯೊಬ್ಬ 2 ಕೋಟಿ ರೂ.ಗಳಷ್ಟು ಹಣ ನೀಡದಿದ್ದರೆ ಸಲ್ಮಾನ್ ಖಾನ್ ಅವರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ ಸಂದೇಶ ಬಂದಿತ್ತು. ಬೆದರಿಕೆ ಸಂದೇಶ ಬಂದ ಒಂದು ದಿನದ ನಂತರ ಬುಧವಾರ ಆ ವ್ಯಕ್ತಿಯನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಯನ್ನು ಬಾಂದ್ರಾ ಪೂರ್ವದ ನಿವಾಸಿ ಅಜಮ್ ಮೊಹಮ್ಮದ್ ಮುಸ್ತಫಾ ಎಂದು ಗುರುತಿಸಲಾಗಿದೆ.
ಸಲ್ಮಾನ್ ಖಾನ್ ಮತ್ತು ಬಾಂದ್ರಾ ಪೂರ್ವ ಎನ್‌ಸಿಪಿ ಶಾಸಕ ಜೀಶನ್ ಸಿದ್ದಿಕಿ ಅವರಿಗೆ ಬೆದರಿಕೆ ಹಾಕಿದ್ದಕ್ಕಾಗಿ 20 ವರ್ಷದ ವ್ಯಕ್ತಿಯನ್ನು ಮಂಗಳವಾರ ನೋಯ್ಡಾದಲ್ಲಿ ಬಂಧಿಸಲಾಗಿತ್ತು. ಮೊಹಮ್ಮದ್ ತಯ್ಯಬ್ ಎಂದು ಗುರುತಿಸಲಾದ ಆರೋಪಿಗಳು ಜೀಶನ್ ಸಿದ್ದಿಕಿ ಮತ್ತು ಸಲ್ಮಾನ್ ಖಾನ್ ಅವರಿಂದ ಹಣಕ್ಕೆ ಬೇಡಿಕೆಯಿಟ್ಟು ಬೆದರಿಕೆ ಹಾಕಿದ್ದ.
ಸಲ್ಮಾನ್ ಖಾನ್ ಗೆ ಜೀವ ಬೆದರಿಕೆ ಬಂದಿರುವುದು ಇದೇ ಮೊದಲಲ್ಲ. 2022 ರಲ್ಲಿ, ಬಾಂದ್ರಾ ವೆಸ್ಟ್‌ನಲ್ಲಿರುವ ಮುಂಬೈನ ಗ್ಯಾಲಕ್ಸಿ ಅಪಾರ್ಟ್‌ಮೆಂಟ್‌ನಲ್ಲಿರುವ ಅವರ ನಿವಾಸದ ಬಳಿಯ ಬೆಂಚ್ ಮೇಲೆ ಅವರಿಗೆ ಬೆದರಿಕೆ ಹಾಕಿದ್ದ ಪತ್ರವೊಂದು ಪತ್ತೆಯಾಗಿತ್ತು. ನಟನಿಗೆ ಮಾರ್ಚ್ 2023 ರಲ್ಲಿ ಗ್ಯಾಂಗ್‌ಸ್ಟರ್ ಗೋಲ್ಡಿ ಬ್ರಾರ್ ಕಳುಹಿಸಿದ್ದ ಎಂದು ಹೇಳಲಾದ ಇಮೇಲ್ ಕೂಡ ಸಿಕ್ಕಿತು.
ಈ ವರ್ಷದ ಆರಂಭದಲ್ಲಿ, ಇಬ್ಬರು ಅಪರಿಚಿತ ವ್ಯಕ್ತಿಗಳು ನಕಲಿ ಗುರುತಿನ ಮೂಲಕ ಪನ್ವೇಲ್‌ನಲ್ಲಿರುವ ನಟನ ಫಾರ್ಮ್‌ಹೌಸ್‌ಗೆ ಅತಿಕ್ರಮಣಕ್ಕೆ ಯತ್ನಿಸಿದ್ದ. ಏಪ್ರಿಲ್‌ನಲ್ಲಿ ಬಿಷ್ಣೋಯ್ ಗ್ಯಾಂಗ್‌ನ ಶಂಕಿತ ಸದಸ್ಯರು ಸಲ್ಮಾನ್ ಖಾನ್ ಅವರ ಬಾಂದ್ರಾ ಮನೆಯ ಹೊರಗೆ ಗುಂಡಿನ ದಾಳಿ ನಡೆಸಿದ್ದರು.
ನಿಮ್ಮ ಕಾಮೆಂಟ್ ಬರೆಯಿರಿ