ಮಂಡ್ಯ | ಸರ್ಕಾರಿ ಶಾಲೆಯ ಭೂಮಿಯ ಪಹಣಿಯಲ್ಲೂ ವಕ್ಫ್​ ಹೆಸರು…!

ಮಂಡ್ಯ : ಮಂಡ್ಯ ಜಿಲ್ಲೆಯಲ್ಲಿ ವಕ್ಫ್ ಆಸ್ತಿ ವಿವಾದ ಕಾಣಿಸಿಕೊಂಡಿದೆ. ರೈತರ ಜಮೀನು, ಹಿಂದೂ ದೇಗುಲದ ಬಳಿಕ ಸರ್ಕಾರಿ ಶಾಲೆ ಜಾಗದ ಮೇಲೂ ವಕ್ಫ್‌ ಹೆಸರು ನಮೂದಾಗಿರುವುದು ಈಗ ಆಕ್ರೋಶಕ್ಕೆ ಕಾರಣವಾಗಿದೆ.
ಶ್ರೀರಂಗಪಟ್ಟಣ ತಾಲೂಕಿನ ಚಂದಗಾಲು ಗ್ರಾಮದ ಸರ್ಕಾರಿ ಶಾಲೆ ಜಾಗದ ಪಹಣಿಯಲ್ಲಿ ವಕ್ಫ್‌ ಎಂದು ನಮೂದಾಗಿದೆ. ಸರ್ವೆ ನಂ.215ರ 30 ಗುಂಟೆ ಜಾಗದಲ್ಲಿ ಸರ್ಕಾರಿ ಶಾಲೆ ಇದ್ದು, ಜಾಗದ ಪಹಣಿ ಪತ್ರದಲ್ಲಿ ವಕ್ಫ್ ಆಸ್ತಿ ನಮೂದಾಗಿದೆ ಎಂದು ವರದಿಯಾಗಿದೆ.
ಇದರ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಹದೇವಪುರ ಗ್ರಾಮದಲ್ಲಿ 6 ಗುಂಟೆ ವ್ಯಾಪ್ತಿಯಲ್ಲಿರುವ ಚಿಕ್ಕಮ ದೇವಿ ಎಂಬ ದೇವಸ್ಥಾನದ ಜಾಗಕ್ಕೂ ವಕ್ಫ್‌ ಹೆಸರು ನಮೂದಾಗಿದೆ ಎಂದು ಆರೋಪಿಸಲಾಗಿದೆ. ಹಲವು ವರ್ಷಗಳ ಹಿಂದೆಯೇ ಈ ದೇವಸ್ಥಾನ ಕಟ್ಟಿಸಿ ಗ್ರಾಮದ ಜನರು ಪೂಜಿಸುತ್ತಿದ್ದಾರೆ, 2023 ಜುಲೈ 17ರ ವರೆಗೆ ಈ ದೇವಸ್ಥಾನದ 6 ಗುಂಟೆ ಜಾಗದ ಆರ್‌ಟಿಸಿಯಲ್ಲಿ ಬಂಜರು ಎಂದು ಉಲ್ಲೇಖವಾಗಿದೆ, ಅಂದರೆ ಇದು ಸರ್ಕಾರಿ ಜಮೀನು ಎಂದರ್ಥ. ಸಾಗುವಳಿ ಕಾಲಂನಲ್ಲಿ ಚಿಕ್ಕಮನ ದೇವಸ್ಥಾನ ಎಂದು ಹೆಸರಿತ್ತು. ಆದರೆ ಈಗ ಈ ದೇವಸ್ಥಾನ ಹಾಗೂ ಜಾಗವನ್ನು ವಕ್ಫ್‌ ಆಸ್ತಿ ಎಂದು ನಮೂದು ಮಾಡಲಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಪ್ರಮುಖ ಸುದ್ದಿ :-   ಡಿಸೆಂಬರ್ 17 ರಿಂದ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮತ್ತೆ ಮಳೆ : ಮುನ್ಸೂಚನೆ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement