“ದೇವಸ್ಥಾನದಲ್ಲಿ ಕ್ಷಮೆಯಾಚಿಸಿ ಅಥವಾ ₹ 5 ಕೋಟಿ ಪಾವತಿಸಿ”: ಸಲ್ಮಾನ್ ಖಾನಗೆ ಮತ್ತೊಂದು ಬೆದರಿಕೆ

ನವದೆಹಲಿ: ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ನಿಂದ ನಟ ಸಲ್ಮಾನ್ ಖಾನ್ ವಿರುದ್ಧ ಮುಂಬೈ ಪೊಲೀಸರಿಗೆ ಬೆದರಿಕೆ ಸಂದೇಶ ಬಂದಿದೆ ಎಂದು ಮೂಲಗಳು ತಿಳಿಸಿವೆ. ಜೀವಂತವಾಗಿರಬೇಕಾದರೆ ದೇವಸ್ಥಾನದಲ್ಲಿ ಕ್ಷಮೆಯಾಚಿಸಿ ಅಥವಾ ₹ 5 ಕೋಟಿ ಪಾವತಿಸಿ ಎಂದು ಬೆದರಿಕೆ ಸಂದೇಶದಲ್ಲಿ ನಟ ಸಲ್ಮಾನ್‌ ಖಾನ್‌ಗೆ ಎರಡು ಆಯ್ಕೆಗಳನ್ನು ನೀಡಲಾಗಿದೆ.
ಒಂದು ವಾರದಲ್ಲಿ ಸಲ್ಮಾನ್ ಖಾನ್ ಗೆ ಬಂದ ಎರಡನೇ ಕೊಲೆ ಬೆದರಿಕೆ ಇದಾಗಿದೆ. ಮುಂಬೈ ಪೊಲೀಸ್ ಟ್ರಾಫಿಕ್ ಕಂಟ್ರೋಲ್ ರೂಂಗೆ ಸೋಮವಾರ ರಾತ್ರಿ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಹೆಸರಿನಲ್ಲಿ ವಾಟ್ಸಾಪ್ ಮೂಲಕ ಬೆದರಿಕೆ ಸಂದೇಶ ಬಂದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಟ್ರಾಫಿಕ್ ಕಂಟ್ರೋಲ್ ರೂಂಗೆ ಕಳುಹಿಸಲಾದ ಸಂದೇಶದಲ್ಲಿ “ಲಾರೆನ್ಸ್ ಬಿಷ್ಣೋಯ್ ಅವರ ಸಹೋದರ ಮಾತನಾಡುತ್ತಿದ್ದಾರೆ ಮತ್ತು ಸಲ್ಮಾನ್ ಖಾನ್ ಬದುಕಬೇಕಾದರೆ, ಅವರು ನಮ್ಮ ದೇವಸ್ಥಾನಕ್ಕೆ ಹೋಗಿ ಕ್ಷಮೆಯಾಚಿಸಬೇಕು ಅಥವಾ ₹ 5 ಕೋಟಿ ನೀಡಬೇಕು, ಹಾಗೆ ಮಾಡದಿದ್ದರೆ ನಾವು ಅವರನ್ನು ಕೊಲ್ಲುತ್ತೇವೆ. ನಮ್ಮ ಗ್ಯಾಂಗ್ ಇನ್ನೂ ಸಕ್ರಿಯವಾಗಿದೆ ಎಂದು ಬೆದರಿಕೆ ಸಂದೇಶ ಕಳುಹಿಸಲಾಗಿದೆ.
ಬೆದರಿಕೆ ಸಂದೇಶದ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಕಳೆದ ವಾರ, ಅಕ್ಟೋಬರ್ 30 ರಂದು ಮುಂಬೈ ಟ್ರಾಫಿಕ್‌ ಕಂಟ್ರೋಲ್‌ ವಿಭಾಗವು ಸಲ್ಮಾನ್‌ ಖಾನ್ ವಿರುದ್ಧ ಇದೇ ರೀತಿಯ ಬೆದರಿಕೆಯನ್ನು ಸ್ವೀಕರಿಸಿತು, ₹ 2 ಕೋಟಿಗೆ ಬೇಡಿಕೆ ಮುಂದಿಡಲಾಗಿತ್ತು.

ಪ್ರಮುಖ ಸುದ್ದಿ :-   ವೀಡಿಯೊ..| ಇರಾನ್ ಮೇಲೆ ದಾಳಿ ಮಾಡಿ ವಾಪಸ್‌ ಆಗುತ್ತಿರುವ ಬಿ -2 ಬಾಂಬರ್‌ ವೀಡಿಯೊ ಹಂಚಿಕೊಂಡ ಅಮೆರಿಕ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement