ನವದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನ ನವೆಂಬರ್ 25 ರಿಂದ ಡಿಸೆಂಬರ್ 20ರವರೆಗೆ ನಡೆಯಲಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ತಿಳಿಸಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಈ ಕುರಿತು ಮಾಹಿತಿ ಹಂಚಿಕೊಂಡಿರುವ ಅವರು, ‘ಲೋಕಸಭೆ ಮತ್ತು ರಾಜ್ಯಸಭೆ ಅಧಿವೇಶವನ್ನು ನ.25ರಿಂದ ಡಿ.20ರವರೆಗೆ ನಡೆಸಲಾಗುವುದು. ನ.26 ರಂದು ಸಂವಿಧಾನ ದಿನವಾಗಿದ್ದರಿಂದ ಭಾರತವು ಸಂವಿಧಾನವನ್ನು ಅಳವಡಿಸಿಕೊಂಡು 75 ವರ್ಷಗಳು ಪೂರ್ಣಗೊಂಡ ಈ ಸಂದರ್ಭದಲ್ಲಿ ಸದನದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ’ ಎಂದು ಅವರು ಮಾಹಿತಿ ನೀಡಿದ್ದಾರೆ.
ಈ ಬಾರಿಯ ಅಧಿವೇಶನದಲ್ಲಿ ಕೇಂದ್ರ ಸರ್ಕಾರವು ಒಂದು ರಾಷ್ಟ್ರ ಒಂದು ಚುನಾವಣಾ ಮಸೂದೆಯನ್ನು ಸದನದಲ್ಲಿ ಮಂಡಿಸುವ ಸಾಧ್ಯತೆಯಿದೆ. ಇತ್ತೀಚೆಗೆ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಒಂದು ರಾಷ್ಟ್ರ ಒಂದು ಚುನಾವಣೆ ಜಾರಿ ಮಾಡಲಾಗುತ್ತದೆ ಎಂದು ಹೇಳಿದ್ದರು.
ನಿಮ್ಮ ಕಾಮೆಂಟ್ ಬರೆಯಿರಿ