ಕಾಂಗ್ರೆಸ್ಸಿನಿಂದ ಅಚ್ಚರಿಯ ನಡೆ ; ಪಕ್ಷದ ಹಿಮಾಚಲ ಪ್ರದೇಶ ರಾಜ್ಯ ಘಟಕ ವಿಸರ್ಜಿಸಿದ ಹೈಕಮಾಂಡ್‌…!

ನವದೆಹಲಿ: ಹಿಮಾಚಲ ಪ್ರದೇಶ ರಾಜ್ಯ ಕಾಂಗ್ರೆಸ್ ಘಟಕವನ್ನು ವಿಸರ್ಜಿಸಲಾಗಿದೆ. ಕಾಂಗ್ರೆಸ್‌ ತನ್ನದೇ ಪಕ್ಷದ ಮುಖ್ಯಮಂತ್ರಿಯನ್ನು ಹೊಂದಿರುವ ಮೂರು ರಾಜ್ಯಗಳಲ್ಲಿ ಹಿಮಾಚಲ ಪ್ರದೇಶವೂ ಒಂದಾಗಿದೆ.
ಬುಧವಾರ ಹೇಳಿಕೆ ನೀಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ ಅವರು, ‘ಹಿಮಾಚಲದ ಸಂಪೂರ್ಣ ರಾಜ್ಯ ಘಟಕ, ಹಿಮಾಚಲ ಪ್ರದೇಶ ಕಾಂಗ್ರೆಸ್ ಸಮಿತಿಯ ಜಿಲ್ಲಾಧ್ಯಕ್ಷರು ಹಾಗೂ ಬ್ಲಾಕ್ ಕಾಂಗ್ರೆಸ್ ಸಮಿತಿಗಳ ಸಂಪೂರ್ಣ ವಿಸರ್ಜಿಸುವ ಪ್ರಸ್ತಾವನೆಗೆ ಕಾಂಗ್ರೆಸ್ ಅಧ್ಯಕ್ಷರು ತಕ್ಷಣದಿಂದಲೇ ಜಾರಿಗೆ ಬರುವಂತೆ ಅನುಮೋದನೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ.

ಪ್ರತಿಭಾ ಸಿಂಗ್ ಅವರು ರಾಜ್ಯ ಕಾಂಗ್ರೆಸ್ ಘಟಕದ ಅಧ್ಯಕ್ಷರಾಗಿದ್ದರು. ಅವರು ಮಾಜಿ ಮುಖ್ಯಮಂತ್ರಿ ದಿವಂಗತ ವೀರಭದ್ರ ಸಿಂಗ್ ಅವರ ಪತ್ನಿ. 2019 ರಲ್ಲಿಯೂ ಕಾಂಗ್ರೆಸ್ ತನ್ನ ರಾಜ್ಯ ಘಟಕವನ್ನು ವಿಸರ್ಜಿಸಿತ್ತು. ಆದರೆ ಆ ವರ್ಷದ ಆರಂಭದಲ್ಲಿ ನೇಮಕಗೊಂಡ ಅಧ್ಯಕ್ಷ ಕುಲದೀಪ ಸಿಂಗ್ ರಾಥೋಡ್ ಅವರನ್ನು ಅಧ್ಯಕ್ಷರಾಗಿಯೇ ಉಳಿಸಿಕೊಳ್ಳಲಾಗಿತ್ತು.
ಪ್ರತಿಭಾ ಸಿಂಗ್ ಅವರನ್ನು 2022 ರಲ್ಲಿ ಕಾಂಗ್ರೆಸ್‌ನ ಹಿಮಾಚಲ ಪ್ರದೇಶ ಘಟಕದ ಮುಖ್ಯಸ್ಥರನ್ನಾಗಿ ನೇಮಿಸಲಾಯಿತು ಮತ್ತು ಆ ವರ್ಷದ ವಿಧಾನಸಭೆ ಚುನಾವಣೆಯ ನಂತರ ಮುಖ್ಯಮಂತ್ರಿ ಹುದ್ದೆಗೆ ಮುಂಚೂಣಿಯಲ್ಲಿರುವವರಲ್ಲಿ ಒಬ್ಬರಾಗಿದ್ದರು. ಆದರೆ ಪಕ್ಷವು ಸುಖವಿಂದರ್ ಸಿಂಗ್ ಸುಖು ಅವರಿಗೆ ಮಣೆ ಹಾಕಿತು. ಹಿಮಾಚಲ ಪ್ರದೇಶದ ರಾಜ್ಯ ಘಟಕದ ವಿಸರ್ಜನೆಯು ಕಾಂಗ್ರೆಸ್‌ ಹೈಕಮಾಂಡಡಿನ ಯೋಜಿತ ಪುನರುಜ್ಜೀವನದ ಭಾಗವಾಗಿದೆ ಎಂದು ಮೂಲಗಳು ತಿಳಿಸಿವೆ.

ಪ್ರಮುಖ ಸುದ್ದಿ :-   ಜೈಲಿನಿಂದ ಹೊರಬಂದ ನಟ ಅಲ್ಲು ಅರ್ಜುನ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement