ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಅಮೆರಿಕದ ನಿಯೋಜಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಕರೆ ಮಾಡಿ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಅದ್ಭುತ ಗೆಲುವಿಗಾಗಿ ಅಭಿನಂದನೆ ಸಲ್ಲಿಸಿದ್ದಾರೆ.
ಮಾತುಕತೆಯ ಸಮಯದಲ್ಲಿ, ಟ್ರಂಪ್ ಅವರು ಪ್ರಧಾನಿ ಮೋದಿ ಅವರನ್ನು ಅದ್ಭುತ ವ್ಯಕ್ತಿ ಎಂದು ಬಣ್ಣಿಸಿದರು ಮತ್ತು ಇಡೀ ಜಗತ್ತು ಅವರನ್ನು ಪ್ರೀತಿಸುತ್ತಿದೆ ಎಂದು ಹೇಳಿದರು ಮೂಲಗಳನ್ನು ಉಲ್ಲೇಖಿಸಿ ವರದಿಗಳು ಹೇಳಿವೆ.
ಭಾರತವು ಭವ್ಯವಾದ ದೇಶವಾಗಿದೆ ಮತ್ತು ತಾವು ಪ್ರಧಾನಿ ಮೋದಿ ಮತ್ತು ಭಾರತವನ್ನು ನಿಜವಾದ ಸ್ನೇಹಿತರೆಂದು ಪರಿಗಣಿಸಿದ್ದಾರೆ ಎಂದು ಟ್ರಂಪ್ ಹೇಳಿದರು. ಹಾಗೂ ವಿಶ್ವಶಾಂತಿಗಾಗಿ ಒಟ್ಟಿಗೆ ಕೆಲಸ ಮಾಡಲು ಇಬ್ಬರೂ ನಾಯಕರು ದೃಢಪಡಿಸಿದ್ದಾರೆ ಎಂದು ಮೂಲಗಳು ಹೇಳಿವೆ.
ಟ್ವೀಟ್‌ನಲ್ಲಿ, ಪ್ರಧಾನಿ ಮೋದಿ ಅವರು ತಮ್ಮ “ಸ್ನೇಹಿತ” ಟ್ರಂಪ್ ಅವರೊಂದಿಗೆ “ಉತ್ತಮ ಮಾತುಕತೆ” ನಡೆಸಲಾಗಿದೆ ಎಂದು ಹೇಳಿದ್ದಾರೆ. ರಕ್ಷಣೆ ಮತ್ತು ತಂತ್ರಜ್ಞಾನ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಭಾರತ-ಅಮೆರಿಕ ಬಾಂಧವ್ಯವನ್ನು ಬಲಪಡಿಸಲು ಟ್ರಂಪ್ ಅವರೊಂದಿಗೆ ಮತ್ತೆ ಕೆಲಸ ಮಾಡಲು ಎದುರು ನೋಡುತ್ತಿದ್ದೇನೆ ಎಂದು ಮೋದಿ ಹೇಳಿದ್ದಾರೆ.
ಪ್ರಧಾನಿ ಮೋದಿ ಅವರು ಟ್ರಂಪ್ ಅವರನ್ನು ಅಭಿನಂದಿಸಿದರು ಮತ್ತು ವಿಶ್ವ ಶಾಂತಿ, ಸ್ಥಿರತೆ ಮತ್ತು ಸಮೃದ್ಧಿಯನ್ನು ಉತ್ತೇಜಿಸಲು ಅವರೊಂದಿಗೆ ಕೆಲಸ ಮಾಡುವುದಾಗಿ ಹೇಳಿದರು.
ನಿಮ್ಮ ಕಾಮೆಂಟ್ ಬರೆಯಿರಿ