ಈಗ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನಗೆ ಜೀವ ಬೆದರಿಕೆ ; 50 ಲಕ್ಷ ರೂ. ಹಣದ ಬೇಡಿಕೆ

ಮುಂಬೈ: ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ ಅವರಿಗೆ ಜೀವ ಬೆದರಿಕೆ ಕರೆ ಬಂದಿದೆ. ಈ ಕುರಿತು ಮುಂಬೈನ ಬಾಂದ್ರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಹೇಳಲಾಗಿದೆ.
ಛತ್ತೀಸ್‌ಗಢದ ರಾಯ್ಪುರ ನಿವಾಸಿ ಫೈಜಾನ್ ಎಂಬಾತ ಬೆದರಿಕೆ ಕರೆ ಮಾಡಿದ್ದಾನೆ ಎಂದು ಎನ್ನಲಾಗಿದೆ. ಮುಂಬೈ ಪೊಲೀಸ್ ತಂಡವು ತನಿಖೆಗಾಗಿ ರಾಯಪುರಕ್ಕೆ ತೆರಳಿದೆ ಎಂದು ಮೂಲಗಳು ತಿಳಿಸಿವೆ. ಶಾರುಖ್ ಖಾನ್ ಅವರಿಗೆ ಬೆದರಿಕೆ ಕರೆ ಬಂದಿದ್ದು, 50 ಲಕ್ಷ ರೂ.ಹಣ ಕೊಡಬೇಕು, ಇಲ್ಲದಿದ್ದರೆ ಜೀವಕ್ಕೆ ಅಪಾಯ ಉಂಟು ಮಾಡಲಾಗುವುದು ಎಂದು ಸೂಚಿಸಲಾಗಿದೆ.
ಮುಂಬೈನ ಬಾಂದ್ರಾ ಪೊಲೀಸ್ ಠಾಣೆಯಲ್ಲಿ ಅಪರಿಚಿತ ವ್ಯಕ್ತಿಯೊಬ್ಬನ ವಿರುದ್ಧ ನಟ ಶಾರುಖ್ ಖಾನ್‌ಗೆ ಬೆದರಿಕೆಯೊಡ್ಡಿದ ಆರೋಪದ ಮೇಲೆ ಪ್ರಕರಣ ದಾಖಲಾಗಿದೆ. ಅಪರಾಧ u/s 308(4), 351(3)(4) BNS ನೋಂದಾಯಿಸಲಾಗಿದೆ. ಇನ್ನೂ ಯಾರ ಬಂಧನವೂ ಆಗಿಲ್ಲ.

ಸದ್ಯಕ್ಕೆ ಶಾರುಖ್ ಖಾನ್ ಸುತ್ತ ಬಿಗಿ ಭದ್ರತೆ ಏರ್ಪಡಿಸಲಾಗಿದೆ. ನಟ ಶಾರುಖ್ ಖಾನ್ 2023 ರಲ್ಲಿ, ‘ಪಠಾಣ್’ ಮತ್ತು ‘ಜವಾನ್’ ಯಶಸ್ಸಿನ ನಂತರ ತನಗೆ ಕೊಲೆ ಬೆದರಿಕೆಗಳು ಬರುತ್ತಿವೆ ಎಂದು ಹೇಳಿದ್ದರು. ಅಕ್ಟೋಬರ್ 2023 ರಲ್ಲಿ ಶಾರುಖ್ ಅವರಿಗೆ Y+ ಭದ್ರತೆ ಒದಗಿಸಲಾಯಿತು. ಅಂದಿನಿಂದ ಅವರಿಗೆ ಭದ್ರತಾ ಸಿಬ್ಬಂದಿ ರಕ್ಷಣೆ ನೀಡುತ್ತಿದ್ದಾರೆ.
ಸಲ್ಮಾನ್ ಖಾನ್ ಗೆ ಜೀವ ಬೆದರಿಕೆ
ಇತ್ತೀಚೆಗೆ ಬಾಲಿವುಡ್ ಸೂಪರ್‌ಸ್ಟಾರ್ ಸಲ್ಮಾನ್ ಖಾನ್ ಅವರಿಗೆ ಅನೇಕ ಕೊಲೆ ಬೆದರಿಕೆಗಳು ಬರುತ್ತಿವೆ. ಕೃಷ್ಣಮೃಗ ಬೇಟೆ ಪ್ರಕರಣದಲ್ಲಿ ಸಿಲುಕಿರುವ ಸಲ್ಮಾನ್‌ ಖಾನ್‌ ಅವರಿಗೆ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನಿಂದ ಬೆದರಿಕೆಗಳು ಬರುತ್ತಿವೆ. ಕೆಲ ದಿನಗಳ ಹಿಂದೆಯೂ ಅವರಿಗೆ ಜೀವ ಬೆದರಿಕೆ ಬಂದಿತ್ತು. ಸಲ್ಮಾನ್‌ಗೂ ವೈ+ ಭದ್ರತೆ ನೀಡಲಾಗಿದೆ.

ಪ್ರಮುಖ ಸುದ್ದಿ :-   ವೀಡಿಯೊ...| ಮೊಬೈಲ್ ಕಸಿದುಕೊಂಡ ಶಿಕ್ಷಕನಿಗೆ ಕ್ಲಾಸ್​ ರೂಂನಲ್ಲೇ ಚಾಕುವಿನಿಂದ ಇರಿದ ವಿದ್ಯಾರ್ಥಿಗಳು...!

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement