ಮಂಗಳೂರು : ಕಿನ್ನಿಗೋಳಿ ಪಕ್ಷಿಕೆರೆಯ ಮನೆಯೊಂದರಲ್ಲಿ ತನ್ನ ಪತ್ನಿ, ಮಗುವನ್ನು ಕೊಲೆಗೈದು ನಂತರ ತಾನೂ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ (ನ.9) ಮಧ್ಯಾಹ್ನ ಬೆಳಕಿಗೆ ಬಂದಿದೆ ಎಂದು ವರದಿಯಾಗಿದೆ.
ಪಕ್ಷಿಕೆರೆ ನಿವಾಸಿ ಕಾರ್ತಿಕ್ ಭಟ್ (32) ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದು, ಇದಕ್ಕೂ ಮೊದಲು ಆತ ಪತ್ನಿ ಪ್ರಿಯಾಂಕ (28), ಮಗ ಹೃದಯ್ (4) ಎಂಬವರನ್ನು ಕೊಲೆ ಮಾಡಿದ್ದಾನೆ ಎಂದು ಹೇಳಲಾಗಿದೆ. ಶಕ್ರವಾರ ಈ ಘಟನೆ ನಡೆದಿದೆ ಎನ್ನಲಾಗಿದೆ. ಆರೋಪಿ ಕಾರ್ತಿಕ್ ಪಕ್ಷಿಕೆರೆಯಲ್ಲಿರುವ ತನ್ನ ಮನೆಯಲ್ಲಿ ಪತ್ನಿ ಮತ್ತು ಮಗುವನ್ನು ಹತ್ಯೆಗೈದು ಬಳಿಕ ಮೂಲ್ಕಿಯ ಬೆಳಾಯರು ನಲ್ಲಿ ರೈಲಿಗೆ ತಲೆಕೊಟ್ಟು ಅತ್ಮಹತ್ಯೆ ಮಾಡಿಕೊಂಡಿದ್ದಾನೆ.
ಶುಕ್ರವಾರ ಮಧ್ಯಾಹ್ನ ಯುವಕನ ಮೃತದೇಹ ಪತ್ತೆಯಾಗಿದ್ದು, ಪೊಲೀಸರು ಆತನ ಬಗ್ಗೆ ಪತ್ತೆ ಮಾಡಿದ ಬಳಿಕ ಯುವಕನ ಮನೆಗೆ ಬಂದು ನೋಡಿದಾಗ ಆತನ ಪತ್ನಿ ಮತ್ತು ಮಗು ಹತ್ಯೆಗೈದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕಾರ್ತಿಕ್ ದಂಪತಿಗೆ ಮನೆಯ ಉಳಿದ ಸದಸ್ಯರ ಜತೆ ಸಂಬಂಧ ಅಷ್ಟೊಂದು ಚೆನ್ನಾಗಿರಲಿಲ್ಲ ಎಂದು ಹೇಳಲಾಗಿದೆ. ಕಾರ್ತಿಕ್ ಕದ್ರಿಯ ಸಹಕಾರಿ ಸಂಸ್ಥೆಯಲ್ಲಿ ಉದ್ಯೋಗದಲ್ಲಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.
ಶುಕ್ರವಾರ ಮಧ್ಯಾಹ್ನ ಯುವಕ ರೈಲಿಗೆ ತಲೆಕೊಟ್ಟು ಅತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ತನಿಖೆ ನಡೆಸುವಾಗ ಅತ್ಮಹತ್ಯೆ ಮಾಡಿಕೊಂಡವನು ಪಕ್ಷಿಕೆರೆಯ ಕಾರ್ತಿಕ್ ಭಟ್ ಎಂದು ತಿಳಿದಿದ್ದು ಮನೆಗೆ ಬಂದಾಗ ಪತ್ನಿ ಮಗು ಹತ್ಯೆಗೈದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ಹೇಳಲಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ