ಕರ್ನಾಟಕದಲ್ಲಿ ಹಲವು ಜಿಲ್ಲೆಗಳಲ್ಲಿ ನವೆಂಬರ್ 13ರಿಂದ ಮತ್ತೆ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು : ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತದ ತರಹ ಪರಿಚಲನೆ ಉಂಟಾಗಿರುವ ಕಾರಣ, ಅಲ್ಲಿ ಕಡಿಮೆ ಒತ್ತಡ ಪ್ರದೇಶ ರಚನೆಯಾಗುತ್ತಿದೆ. ಹೀಗಾಗಿ ಮುಂದಿನ 2 ದಿನಗಳಲ್ಲಿ ಚಂಡಮಾರುತದ ಪರಿಚಲನೆ ನಿಧಾನವಾಗಿ ತಮಿಳುನಾಡು ಹಾಗೂ ಶ್ರೀಲಂಕಾ ತೀರದ ಕಡೆಗೆ ಚಲಿಸುವ ಸಾಧ್ಯತೆ ದಟ್ಟವಾಗಿದೆ. ಚಂಡಮಾರುತ ಚಲನೆ ಆಗ್ನೇಯ ಅರೇಬಿಯನ್ ಸಮುದ್ರ ಮತ್ತು ಅದರ ಪಕ್ಕದಲ್ಲೇ ಇದೆ. ಇದರ ಪರಿಣಾಮ ಕರ್ನಾಟಕದಲ್ಲೂ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಚಂಡಮಾರುತ ತಮಿಳುನಾಡು ಹಾಗೂ ಶ್ರೀಲಂಕಾ ಕರಾವಳಿ ಮಾರ್ಗವಾಗಿ ಸಂಚಾರ ಮಾಡಲಿದೆ. ಹೀಗಾಗಿ ದಕ್ಷಿಣ ಭಾರತದಲ್ಲಿ ಭಾರೀ ಮಳೆಯಾಗುವ ಎಚ್ಚರಿಕೆ ನೀಡಲಾಗಿದೆ. ಮುಂದಿನ 48 ಗಂಟೆಗಳಲ್ಲಿ ಕರ್ನಾಟಕದಲ್ಲಿಯೂ ಭಾರೀ ಮಳೆಯಾಗಬಹುದು ಎಂದು ತಿಳಿಸಲಾಗಿದೆ. ಕರ್ನಾಟಕದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಕೋಲಾರ, ಮಂಡ್ಯ, ಚಾಮರಾಜನಗರ, ಮೈಸೂರು, ಕೊಡಗು, ಹಾಸನ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಧಾರವಾಡ, ಗದಗ, ಹಾವೇರಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ನವೆಂಬರ್ 11ರ ನಂತರ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ. ಬೆಂಗಳೂರಿನಲ್ಲಿ 48 ಗಂಟೆಗಳ ಕಾಲ ಮೋಡ ಕವಿದ ವಾತಾವರಣ ಇರಲಿದೆ. ನವೆಂಬರ್‌ 12 ರ ನಂತರ ಭಾರೀ ಮಳೆ ಸುರಿಯುವ ಮುನ್ಸೂಚನೆ ನೀಡಲಾಗಿದೆ.

ಪ್ರಮುಖ ಸುದ್ದಿ :-   ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement