ನವದೆಹಲಿ: ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಸುಪ್ರೀಂ ಕೋರ್ಟ್ ಸೋಮವಾರ ಜಾಮೀನು ನಿರಾಕರಿಸಿದೆ.
ಪೀಠವು ಸಂಕ್ಷಿಪ್ತ ವಿಚಾರಣೆಯ ನಂತರ ನ್ಯಾಯಮೂರ್ತಿಗಳಾದ ಬೇಲಾ ಎಂ. ತ್ರಿವೇದಿ ಮತ್ತು ಸತೀಶಚಂದ್ರ ಶರ್ಮಾ ಅವರಿದ್ದ ಪೀಠ ಅರ್ಜಿ ವಜಾಗೊಳಿಸಿದೆ.
ರೇವಣ್ಣ ಪರ ವಾದ ಮಂಡಿಸಿದ ಹಿರಿಯ ವಕೀಲ ಮುಕುಲ್ ರೋಹಟ್ಗಿ, ಆರೋಪಗಳು ಗಂಭೀರವಾಗಿದ್ದರೂ ದೂರಿನಲ್ಲಿ ಅತ್ಯಾಚಾರದ ನಿರ್ದಿಷ್ಟ ಆರೋಪ ಇಲ್ಲ ಎಂದು ವಾದಿಸಿದರು.. ಆದರೆ, ಪೀಠವು, ಪ್ರಜ್ವಲ್ ರೇವಣ್ಣ ಅತ್ಯಂತ ಪ್ರಭಾವಿ ಎಂಬುದನ್ನು ಪರಿಗಣಿಸಿ ಅರ್ಜಿ ತಿರಸ್ಕರಿಸಿದೆ.
ಜ್ವಲ್‌ಗೆ ಕರ್ನಾಟಕ ಹೈಕೋರ್ಟ್ ಅಕ್ಟೋಬರ್‌ನಲ್ಲಿ ಜಾಮೀನು ನಿರಾಕರಿಸಿತ್ತು. ಈ ಹಿನ್ನೆಲೆಯಲ್ಲಿ ವಕೀಲ ಬಾಲಾಜಿ ಶ್ರೀನಿವಾಸನ್ ಅವರ ಮೂಲಕ ಮೇಲ್ಮನವಿ ಸಲ್ಲಿಸಲಾಗಿತ್ತು.
ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಮತ್ತು ಕಿರುಕುಳದ ನಾಲ್ಕು ಪ್ರಕರಣಗಳ ತನಿಖೆ ನಡೆಸುತ್ತಿರುವ ಎಸ್‌ಐಟಿ ಈ ವರ್ಷದ ಆಗಸ್ಟ್ 24 ರಂದು, 2,144 ಪುಟಗಳ ಆರೋಪಪಟ್ಟಿ ಸಲ್ಲಿಸಿತ್ತು. ಮನೆಗೆಲಸ ಮಾಡುತ್ತಿದ್ದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಪ್ರಕರಣ ದಾಖಲಿಸಿತ್ತು.
ಹೈಕೋರ್ಟ್ ನಲ್ಲಿ ಈ ಮೂರು ಪ್ರಕರಣಗಳ ವಿಚಾರಣೆ ನಡೆಸಿದ್ದ ಹೈಕೋರ್ಟ್ ಜಾಮೀನು ಅರ್ಜಿ ಹಾಗೂ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕೂಡ ವಜಾಗೊಳಿಸಿತ್ತು. ಈಗ ಸುಪ್ರೀಂಕೋರ್ಟ್ ಕೂಡ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ.
ನಿಮ್ಮ ಕಾಮೆಂಟ್ ಬರೆಯಿರಿ