ರಾಮನಗರ: ಕೇಂದ್ರ ಸಚಿವ ಮತ್ತು ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಸಚಿವ ಬಿಝಡ್ ಜಮೀರ್ ಅಹ್ಮದ್ ಖಾನ್ ಅವರು ಹೇಳಿಕೆ ನೀಡಿದ ನಂತರ ರಾಜಕೀಯ ವಿವಾದ ಭುಗಿಲೆದ್ದಿದೆ.
ಸಿಪಿ ಯೋಗೇಶ್ವರ ಹಾಗೂ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆಯಿಂದಾಗಿ ಹೈವೊಲ್ಜೇಜ್ ಕಣವಾಗಿರುವ ಚನ್ನಪಟ್ಟಣ ಕ್ಷೇತ್ರದಲ್ಲಿ ಪ್ರಚಾರದ ವೇಳೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯೋಗೇಶ್ವರ ಅವರ ಪರವಾಗಿ ಮತಯಾಚಿಸುವಾಗ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ವಿರುದ್ಧ ಕಾಲಾ (ಕರಿಯ) ಕುಮಾರಸ್ವಾಮಿ ಎಂದು ಕರೆದಿರುವುದು ಈಗ ವಿವಾದಕ್ಕೆ ಕಾರಣವಾಗಿದೆ.
ಭಾನುವಾರ ರಾತ್ರಿ ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ ಪರವಾಗಿ ಪ್ರಚಾರ ನಡೆಸಿದ ಜಮ್ಮೀರ್ ಅಹ್ಮದ್ ಖಾನ್ , ಹೆಚ್ಡಿ ಕುಮಾರಸ್ವಾಮಿ ಟೀಕಿಸುವ ಭರದಲ್ಲಿ “ಬಿಜೆಪಿಯವರಿಗಿಂತ ಕುಮಾರಸ್ವಾಮಿ ಕಾಲಾ (ಕಪ್ಪು) ಎಂದು ಕರೆದಿದ್ದಾರೆ.
ಸಚಿವ ಜಮೀರ್ ಅಹ್ಮದ್ ಖಾನ್ ಅವರು ಜನಾಂಗೀಯ ಹೇಳಿಕೆ ನೀಡಿದ್ದಕ್ಕಾಗಿ ರಾಜಕೀಯ ವಿವಾದ ಭುಗಿಲೆದ್ದ ನಂತರ ಜೆಡುಎಸ್ ಪಕ್ಷವು ಕಾಂಗ್ರೆಸ್ ಸರ್ಕಾರ ಅವರನ್ನು ಸಂಪುಟದಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಿದೆ. “ನಮ್ಮ ಪಕ್ಷದಲ್ಲಿ (ಕಾಂಗ್ರೆಸ್) ಕೆಲವು ಭಿನ್ನಾಭಿಪ್ರಾಯಗಳಿಂದ ಅವರು ಸ್ವತಂತ್ರವಾಗಿ ಸ್ಪರ್ಧಿಸಿದರು. ಅವರಿಗೆ ಬಿಜೆಪಿ ಸೇರುವುದನ್ನು ಬಿಟ್ಟು ಬೇರೆ ಆಯ್ಕೆ ಇರಲಿಲ್ಲ. ಅವರು ಜೆಡಿಎಸ್‌ಗೆ ಸೇರಲು ಸಿದ್ಧರಿಲ್ಲ, “ಬಿಜೆಪಿಯವರಿಗಿಂತ ಕಾಲಾ ಕುಮಾರಸ್ವಾಮಿ (ಕರಿಯ ಕುಮಾರಸ್ವಾಮಿ) ಹೆಚ್ಚು ಖತರ್ನಾಕ್. ಈಗ ಅವರು (ಯೋಗೇಶ್ವರ) ಮನೆಗೆ ಬಂದಿದ್ದಾರೆ” ಎಂದು ಸಚಿವರು ಹೇಳಿದರು. ಭಾಷಣದ ಮಧ್ಯೆ ” ಕಾಲಾ (ಕರಿಯ) ಕುಮಾರಸ್ವಾಮಿ” ಎಂದು ಟೀಕಿಸಿದ್ದಾರೆ. ಈ ಮೂಲಕ ಕಪ್ಪು ವರ್ಣದ ಬಗ್ಗೆ ಜನಾಂಗೀಯ ನಿಂದನೆ ಮಾಡಿದ್ದಾರೆ. ಪ್ರಚಾರ ಭಾಷಣದಲ್ಲಿ ಹೆಚ್ಡಿ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ಮಾಡುವ ಭರದಲ್ಲಿ ಎಂದು ಉರ್ದುವಿನಲ್ಲಿ ಹೇಳಿದ್ದಾರೆ.
https://twitter.com/JanataDal_S/status/1855855420516020401?ref_src=twsrc%5Etfw%7Ctwcamp%5Etweetembed%7Ctwterm%5E1855855420516020401%7Ctwgr%5E35cc5f4db403fdff24108415d827a4aa9a312c10%7Ctwcon%5Es1_&ref_url=https%3A%2F%2Fwww.prajavani.net%2Fnews%2Fkarnataka-news%2Fjds-condemns-racial-slurs-against-hd-kumaraswamy-by-karnataka-minister-zameer-ahmed-khan-3043372ಜಮೀರ್ ಹೇಳಿಕೆ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್ ಆಕ್ರೋಶ ವ್ಯಕ್ತಪಡಿಸಿವೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಟ್ವೀಟ್ ಮಾಡಿರುವ ಬಿಜೆಪಿ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲ ಅವರು, ಮೊದಲು ಜಾತಿ ಆಧಾರದ ಮೇಲೆ ಜನರನ್ನು ವಿಭಜನೆ ಮಾಡಿದ ಕಾಂಗ್ರೆಸ್ ಇದೀಗ ಸ್ಯಾಮ್ ಪಿತ್ರೋಡಾ ರೀತಿಯಲ್ಲಿ ಬಣ್ಣದ ಆಧಾರದ ಮೇಲೆ ವಿಂಗಡಿಸುತ್ತಿದೆ. ದಕ್ಷಿಣ ಭಾರತೀಯರನ್ನು ಆಫ್ರಿಕನ್ನರು ಎಂದು ಕರೆದಿದ್ದ ಸ್ಯಾಮ್ ಪಿತ್ರೋಡಾ ಅವರಿಗೆ ರಾಹುಲ್ ಗಾಂಧಿ ಬಡ್ತಿ ನೀಡಿದ್ದರು. ಈಗ ಜಮೀರ್ ಅವರಿಗೂ ಬಡ್ತಿ ನೀಡಲಿದ್ದಾರೆಯೇ ಎಂದು ಟೀಕಿಸಿದ್ದಾರೆ.
ಸಂಸದೀಯ ವ್ಯವಹಾರಗಳ ಕೇಂದ್ರ ಸಚಿವ ಕಿರಣ್ ರಿಜಿಜಿ ಕೂಡ ಖಾನ್ ಅವರ ಹೇಳಿಕೆಯನ್ನು ಖಂಡಿಸಿದ್ದಾರೆ. “ಕಾಂಗ್ರೆಸ್ ಸಚಿವ ಜಮೀರ್ ಅಹ್ಮದ್ ಅವರು ಕೇಂದ್ರ ಸಚಿವ ಮತ್ತು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರನ್ನು ‘ಕಾಲಾ ಕುಮಾರಸ್ವಾಮಿ’ ಎಂದು ಕರೆದಿರುವುದನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ರಾಹುಲ್ ಗಾಂಧಿ ಅವರ ಸಲಹೆಗಾರರಾ ಸ್ಯಾಮ್ ಪಿತ್ರೋಡಾ ಅವರು ದಕ್ಷಿಣ ಭಾರತೀಯರನ್ನು ಆಫ್ರಿಕನ್ನರಂತೆ, ಈಶಾನ್ಯವನ್ನು ಚೈನೀಸ್ ಅವರಂತೆ, ಉತ್ತರ ಭಾರತೀಯರು ಯುರೋಪಿಯನ್ನರಂತೆ, ಪಶ್ಚಿಮ ಭಾರತೀಯರನ್ನು ಅರಬ್ಬರಂತೆ ಎಂದು ಕರೆದಂತೆಯೇ ಇದು ಜನಾಂಗೀಯ ಹೇಳಿಕೆಯಾಗಿದೆ ಎಂದು ಟೀಕಿಸಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ