ಉಪಚುನಾವಣೆ: ಚನ್ನಪಟ್ಟಣ ಕ್ಷೇತ್ರದಲ್ಲಿ 29 ಕೋಟಿ ರೂ. ಮೌಲ್ಯದ ಮದ್ಯ ಜಪ್ತಿ

ಬೆಂಗಳೂರು: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಬುಧವಾರ (ನವೆಂಬರ್‌ 13) ಉಪಚುನಾವಣೆ ಇದ್ದು, ಹೈವೋಲ್ಟೇಜ್ ಕ್ಷೇತ್ರವಾಗಿರುವ ಚನ್ನಪಟ್ಟಣ ಕ್ಷೇತ್ರದಲ್ಲಿ ಇದುವರೆಗೆ 29 ಕೋಟಿ ರೂಪಾಯಿ ಮೌಲ್ಯದ ಸುಮಾರು ಮೂರು ಲಕ್ಷ ಲೀಟರ್ ಮದ್ಯ ವಶಪಡಿಸಿಕೊಳ್ಳಲಾಗಿದೆ.
ಶಿಗ್ಗಾಂವ, ಸಂಡೂರು ಮತ್ತು ಚನ್ನಪಟ್ಟಣದಲ್ಲಿ ಸುಮಾರು 770 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, ಏಳು ಲಕ್ಷಕ್ಕೂ ಹೆಚ್ಚು ಮತದಾರರು ತಮ್ಮ ಹಕ್ಕು ಚಲಾಯಿಸಲು ಸಿದ್ಧರಾಗಿದ್ದಾರೆ. ಒಟ್ಟು 45 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಚನ್ನಪಟ್ಟಣ ಕ್ಷೇತ್ರದಲ್ಲಿ ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಅವರ ಪುತ್ರ ನಿಖಿಲ್‌ ಎನ್ ಡಿಎ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದರೆ ಕಾಂಗ್ರೆಸ್ಸಿನಿಂದ ಮಾಜಿ ಸಚಿವ ಸಿ.ಪಿ. ಯೋಗೇಶ್ವರ ಕಣಕ್ಕಿಳಿದಿದ್ದಾರೆ.

ಮುಖ್ಯ ಚುನಾವಣಾಧಿಕಾರಿಗಳ ಪ್ರಕಾರ, ಶಿಗ್ಗಾಂವಿ, ಸಂಡೂರು ಹಾಗೂ ಚನ್ನಪಟ್ಟಣ, ಈ ಮೂರು ಕ್ಷೇತ್ರಗಳಲ್ಲಿ ಅಕ್ಟೋಬರ್ 16 ರಿಂದ ನವೆಂಬರ್ 11 ರವರೆಗೆ ಪೊಲೀಸರು, ಅಬಕಾರಿ ಮತ್ತು ಇತರ ಅಧಿಕಾರಿಗಳು ಒಟ್ಟು 33.33 ಕೋಟಿ ರೂ. ಮೌಲ್ಯದ ಮದ್ಯ ವಶಪಡಿಸಿಕೊಂಡಿದ್ದಾರೆ. ಈ ಪೈಕಿ ಚನ್ನಪಟ್ಟಣದಲ್ಲಿಯೇ ಬರೋಬ್ಬರಿ 29 ಕೋಟಿ ರೂ. ಮೌಲ್ಯದ ಮದ್ಯವನ್ನು ವಶಕ್ಕೆ ಪಡೆದಿದ್ದಾರೆ. ಶಿಗ್ಗಾಂವಿಯಲ್ಲಿ 300 ಲೀಟರ್‌ಗಿಂತ ಹೆಚ್ಚು ಮದ್ಯ ಮತ್ತು ಸಂಡೂರಿನಲ್ಲಿ 2926 ಲೀಟರ್ ಮದ್ಯ ಹಾಗೂ ಚನ್ನಪಟ್ಟಣದಲ್ಲಿ 2,95,395 ಲೀಟರ್ ಮದ್ಯ ಜಪ್ತಿ ಮಾಡಲಾಗಿದೆ. ಶಿಗ್ಗಾವಿಯಲ್ಲಿ 8.2 ಕೆಜಿ ಡ್ರಗ್ಸ್ ವಶಪಡಿಸಿಕೊಳ್ಳಲಾಗಿದೆ.

ಪ್ರಮುಖ ಸುದ್ದಿ :-   ಡಿಸೆಂಬರ್ 17 ರಿಂದ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮತ್ತೆ ಮಳೆ : ಮುನ್ಸೂಚನೆ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement