ಎಚ್‌.ಡಿ. ಕುಮಾರಸ್ವಾಮಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ; ಕ್ಷಮೆ ಕೋರಿದ ಸಚಿವ ಜಮೀರ್‌ ಅಹ್ಮದ್‌

ಮೈಸೂರು: ಚನ್ನಪಟ್ಟಣ ಚುನಾವಣೆಯ ಪ್ರಚಾರದ ವೇಳೆ ಕೇಂದ್ರ ಸಚಿವ ಎಚ್‌.ಡಿ ಕುಮಾರಸ್ವಾಮಿ ಅವರ ಬಗ್ಗೆ ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾದ ನಂತರ ಸಚಿವ ಜಮೀರ್‌ ಅಹ್ಮದ್‌ (Zameer ahmed) ಕ್ಷಮೆಯಾಚನೆ ಮಾಡಿದ್ದಾರೆ.
ನನ್ನ ಮಾತಿನಿಂದ ಜೆಡಿಎಸ್ ಕಾರ್ಯಕರ್ತರಿಗೆ ನೋವಾಗಿದ್ದರೆ ಕ್ಷಮೆ ಕೋರುತ್ತೇನೆ ಎಂದು ಹೇಳಿದ್ದಾರೆ.
ನಾನು ಮೊದಲಿನಿಂದಲೂ ಕುಮಾರಸ್ವಾಮಿ ಅವರನ್ನು ಕರಿಯಣ್ಣ ಎಂದು ಕರೆಯುತ್ತಿದ್ದೆ. ಅವರು ನನ್ನನ್ನ ಕುಳ್ಳ ಎಂದು ಕರೆಯುತ್ತಿದ್ದರು. ನಾವು ಹಿಂದೆ ಅಷ್ಟೊಂದು ಅನ್ಯೋನ್ಯವಾಗಿ ಇದ್ದೆವು. ನನ್ನ ಮಾತಿನಿಂದ ಜೆಡಿಎಸ್ ಕಾರ್ಯಕರ್ತರಿಗೆ ನೋವಾಗಿದ್ದರೆ ಕ್ಷಮೆ ಕೋರುತ್ತೇನೆ ಎಂದು ಅವರು ಹೇಳಿದ್ದಾರೆ.

ಚನ್ನಪಟ್ಟಣದಲ್ಲಿ ಕಾಂಗ್ರೆಸ್​ ಅಭ್ಯರ್ಥಿ ಸಿ.ಪಿ. ಯೋಗೇಶ್ವರ್ ಪರವಾಗಿ ಜಮೀರ್​ ಅಹ್ಮದ್​ ಪ್ರಚಾರಕ್ಕೆ ತೆರಳಿದ್ದರು. ಈ ವೇಳೆ ಭಾಷಣದಲ್ಲಿ ಎಚ್​ಡಿ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ಮಾಡುವ ಭರದಲ್ಲಿ “ಬಿಜೆಪಿಯವರಿಗಿಂತ ಕಾಲಾ ಕುಮಾರಸ್ವಾಮಿ (ಕರಿಯ ಕುಮಾರಸ್ವಾಮಿ) ಹೆಚ್ಚು ಖತರ್ನಾಕ್​​” ಎಂದು ಉರ್ದುವಿನಲ್ಲಿ ಹೇಳಿದ್ದರು.
“ಯೋಗೇಶ್ವರ ನಮ್ಮ ಪಕ್ಷದಿಂದ ರಾಜಕೀಯ ಪ್ರಾರಂಭ ಮಾಡಿದರು. ಕೆಲವು ವ್ಯತ್ಯಾಸಗಳಾಗಿ ಬಿಜೆಪಿಗೆ ಹೋದರು. ಜೆಡಿಎಸ್ ಹೋಗಬೇಕು ಎಂದು ಅಂದುಕೊಂಡಿದ್ದರು, ಆದರೆ ಕರಿಯ ಕುಮಾರಸ್ವಾಮಿ, ಬಿಜೆಪಿಗಿಂತ ಡೇಂಜರ್ ಎಂದು ಜೆಡಿಎಸ್​ಗೆ ಹೋಗಿಲ್ಲ. ಈ ಹಿಂದೆ ಹಿಜಾಬ್ ಬೇಡ ಅಂದಿದ್ದೀರಿ. ಈಗ ನಿನಗೆ ಮುಸಲ್ಮಾನರ ಮತ ಬೇಕಾ? ಕುಮಾರಸ್ವಾಮಿ ಬಿಜೆಪಿಗೆ ಹೋಗಿ ಮುಸಲ್ಮಾನರನ್ನು ಖರೀದಿ ಮಾಡ್ತಾನಂತೆ. ಏ ಕುಮಾರಸ್ವಾಮಿ ನಿನ್ ರೇಟು ಹೇಳು, ಮುಸಲ್ಮಾನರು ಒಂದೊಂದ್ ಪೈಸೆ ಹಾಕಿ ಇಡೀ ನಿನ್ನ ಕುಟುಂಬವನ್ನೇ ಖರೀದಿ ಮಾಡುತ್ತೇವೆ ಎಂದು ವಾಗ್ದಾಳಿ ಮಾಡಿದ್ದರು. ಸಚಿವರ ಈ ಹೇಳಿಕೆ ಜೆಡಿಎಸ್‌ ವಲಯದಿಂದ ವ್ಯಾಪಕ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಅವರು ತಮ್ಮ ಹೇಳಿಕೆಗೆ ಕ್ಷಮೆ ಕೋರುವುದಾಗಿ ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ವೀಡಿಯೊ..| ಆಡಳಿತ ಸಂಪೂರ್ಣ ವಿಫಲ ; ಬಿ.ಆರ್.​ ಪಾಟೀಲ ಬೆನ್ನಲ್ಲೇ ತಮ್ಮ ಸರ್ಕಾರದ ವಿರುದ್ಧವೇ ಸಿಡಿದೆದ್ದ ಮತ್ತೊಬ್ಬ ಕಾಂಗ್ರೆಸ್ ಶಾಸಕ ; ರಾಜೀನಾಮೆ ಮಾತು

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement