ಮುಡಾ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣ ವಿರುದ್ಧ ಎಫ್‌ ಐ ಆರ್‌

ಮೈಸೂರು : ಮುಡಾ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣ ವಿರುದ್ಧ ಮೈಸೂರಿನ ದೇವರಾಜ ಪೊಲೀಸ್ ಠಾಣೆಯಲ್ಲಿ ಬುಧವಾರ ಎಫ್ಐಆರ್ ದಾಖಲಾಗಿದೆ ಎಂದು ವರದಿಯಾಗಿದೆ. ಮಂಗಳವಾರ ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ ಅವರು ನೀಡಿದ್ದ ದೂರಿನ ಆಧಾರದ ಮೇಲೆ. ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮೈಸೂರಿನ ದೇವರಾಜ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿ.ಎಂ.ಪಾರ್ವತಿ ಅವರು ಮೈಸೂರು ಅಭಿವೃದ್ಧಿ ಪ್ರಾಧಿಕಾರದಿಂದ ಪಡೆದ ಸೈಟ್​ ಕ್ರಯಪತ್ರದ ಮುದ್ರಾಂಕ ಶುಲ್ಕದ ಬಗ್ಗೆ ಸ್ನೇಹಮಯಿ ಕೃಷ್ಣ ಅವರು ಆಕ್ಷೇಪ ಎತ್ತಿದ್ದರು. ಇದೀಗ ಕೃಷ್ಣ ಮೇಲೆಯೇ ಎಫ್‌ಐಆರ್ ದಾಖಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬದ ಮೇಲೆ ಸ್ನೇಹಮಯಿ ಕೃಷ್ಣ ದಿನವೂ ಒಂದಲ್ಲ ಒಂದು ಆರೋಪ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಅವರ ವಿರುದ್ಧ ಬ್ಲಾಕ್‌ಮೇಲ್‌ ತಂತ್ರ ಅನುಸರಿಸುತ್ತಿದ್ದಾರೆ. ಸಿದ್ದರಾಮಯ್ಯ ಅವರ ಪತ್ನಿ ಬಿ.ಎಂ.ಪಾರ್ವತಿ ಅವರು ಮುಡಾದಿಂದ ಪಡೆಯಲಾಗಿದ್ದ ಸೈಟ್​ ಕ್ರಯಪತ್ರದ ಮುದ್ರಾಂಕ ಶುಲ್ಕದ ಬಗ್ಗೆ ಅವರು ಪ್ರಸ್ತಾಪಿಸಿದ್ದು. ಇದು ಕೃಷ್ಣ ಬ್ಲಾಕ್​ಮೇಲ್ ತಂತ್ರವಾಗಿದೆ. ಹೀಗಾಗಿ ಸ್ನೇಹಮಯಿ ಕೃಷ್ಣ ಮೇಲೆ ಕ್ರಮ ತೆಗೆದುಕೊಳ್ಳಬೇಕು ಎಂದು ಕಾಂಗ್ರೆಸ್ಸಿನ ಎಂ.ಲಕ್ಷ್ಮಣ ದೂರು ನೀಡಿದ್ದರು. ಈ ದೂರಿನ ಆಧಾರದ ಮೇಲೆ ಸ್ನೇಹಮಯಿ ಕೃಷ್ಣ ವಿರುದ್ಧ ಈಗ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ.

ಪ್ರಮುಖ ಸುದ್ದಿ :-   ಸಿಡಿಲು ಬಡಿದು ಒಂದೇ ಕುಟುಂಬದ ಇಬ್ಬರು ಸಾವು

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement