ಬೆಂಗಳೂರು: ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಹಿನ್ನೆಲೆಯಲ್ಲಿ ಚನ್ನಪಟ್ಟಣ, ಶಿಗ್ಗಾಂವಿ ಹಾಗೂ ಸಂಡೂರು ಕ್ಷೇತ್ರಗಳಲ್ಲಿ ಬುಧವಾರ ಶಾಂತಿಯುತವಾಗಿ ಮತದಾನ ನಡೆದಿದೆ.
ಬೆಳಗ್ಗೆ 7 ಗಂಟೆಯಿಂದ ಆರಂಭವಾದ ಸಂಜೆ 6 ಗಂಟೆ ವರೆಗೆ ನಡೆಯಿತು. ಮೂರು ಕ್ಷೇತ್ರಗಳಲ್ಲಿ ಸರಾಸರಿ ಶೇ. 81.84 ಮತದಾನ ಆಗಿದೆ ಎಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ. ಈ ಪೈಕಿ ಚನ್ನಪಟ್ಟಣ ಕ್ಷೇತ್ರದಲ್ಲಿ ಅತಿ ಹೆಚ್ಚು ಮತದಾನವಾಗಿದೆ. ಉಪಚುನಾವಣೆಯಲ್ಲಿ ಗೆಲ್ಲುವವರು ಯಾರು ? ಸೋಲುವವರು ಯಾರು ಎಂದು ಕ್ಷೇತ್ರದಲ್ಲಿ ಲೆಕ್ಕಾಚಾರ ಆರಂಭವಾಗಿದೆ. ಅಭ್ಯರ್ಥಿಗಳ ಹಣೆ ಬರಹ ಇವಿಎಂಗಳಲ್ಲಿ ದಾಖಲಾಗಿದ್ದು, ಫಲಿತಾಂಶ ನವೆಂಬರ್ ೨೩ರಂದು ಪ್ರಕಟವಾಗಲಿದೆ.
ಯಾವ ಕ್ಷೇತ್ರದಲ್ಲಿ ಎಷ್ಟು ಮತದಾನ?
ಚನ್ನಪಟ್ಟಣ: ಶೇ. 88.80
ಶಿಗ್ಗಾಂವಿ: ಶೇ. 80.48
ಸಂಡೂರು: ಶೇ. 76.24
ಒಟ್ಟು ಮತದಾನ: ಶೇ. 81.84 ಆಗಿದೆ ಎಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ.
ನಿಮ್ಮ ಕಾಮೆಂಟ್ ಬರೆಯಿರಿ