ಶರಾವತಿ ಹಿನ್ನೀರಿನಲ್ಲಿ ತೆಪ್ಪ ಮಗುಚಿ ಮೂವರು ನಾಪತ್ತೆ

ಶಿವಮೊಗ್ಗ: ಜಿಲ್ಲೆಯ ಸಾಗರ ತಾಲೂಕಿನ ಶರಾವತಿ ಹಿನ್ನೀರಿನಲ್ಲಿ ತೆಪ್ಪ ಮುಗುಚಿ ಬಿದ್ದು ಹೊಳೆ ಊಟಕ್ಕೆ ಹೋಗಿದ್ದ ಐವರಲ್ಲಿ ಮೂವರು ನೀರು ಪಾಲಾಗಿದ್ದಾರೆ ಎಂದು ವರದಿಯಾಗಿದೆ.
ಹುಲಿದೇವರ ಬನದ ಸಂದೀಪ (35), ಸಿಗಂದೂರಿನ ಚೇತನ್ (30) ಹಾಗೂ ಗಿಣಿವಾರದ ರಾಜು (28) ನಾಪತ್ತೆಯಾದವರು ಎಂದು ಹೇಳಲಾಗಿದೆ. ಬುಧವಾರ ಮಧ್ಯಾಹ್ನ ಹೊಳೆ ಊಟಕ್ಕೆಂದು ಐವರು ಯುವಕರು ಕಳಸವಳ್ಳಿ ಬಳಿಯ ಶರಾವತಿ ಹಿನ್ನೀರಿನಲ್ಲಿ ತೆಪ್ಪದಲ್ಲಿ ತೆರಳಿದ್ದರು. ಊಟ ಮುಗಿಸಿ ವಾಪಸ್‌ ಬರುವಾಗ ತೆಪ್ಪ ಸಮತೋಲನ ಕಳೆದುಕೊಂಡು ಮಗುಚಿದೆ. ಈಜು ಬರುತ್ತಿದ್ದ ವಿನಯ ಮತ್ತು ಯಶವಂತ ಎಂಬುವರು ಈಜಿ ದಡ ಸೇರಿದ್ದಾರೆ. ಈ ವೇಳೆ ಈ ಮೂವರು ನಾಪತ್ತೆಯಾಗಿದ್ದಾರೆ. ಮತ್ತಿಬ್ಬರು ಈಜಿ ದಡ ಸೇರಿದ್ದಾರೆ ಎಂದು ಹೇಳಲಾಗಿದೆ. ವಿಷಯ ತಿಳಿಯುತ್ತಿದ್ದಂತೆ, ಸ್ಥಳಕ್ಕೆ ಸಾಗರದ ಅಗ್ನಿಶಾಮಕದಳ ಹಾಗೂ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಇವರ ಹುಡುಕಾಟ ನಡೆಸಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement