ಸಚಿವ ಜಮೀರ್ ಅಹಮದಗೆ ನಿಂದನೆ ಆರೋಪ ; ಪುನೀತ ಕೆರೆಹಳ್ಳಿ ಬಂಧನ

ಬೆಂಗಳೂರು: ಸಚಿವ ಜಮೀರ್ ಅಹಮ್ಮದ್ (Zameer Ahmed) ಅವರನ್ನು ನಿಂದಿಸಿದ ಆರೋಪದ ಮೇಲೆ ಹಿಂದೂ ಸಂಘಟನೆ ಮುಖಂಡ ಪುನೀತ ಕೆರೆಹಳ್ಳಿ (Puneeth Kerehalli) ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಪುನೀತ ಕೆರೆಹಳ್ಳಿ ಸಾಮಾಜಿಕ ಜಾಲತಾಣದಲ್ಲಿ ವೀಡಿಯೊ ಪೋಸ್ಟ್ ಮಾಡಿ ಸಚಿವ ಜಮೀರ್ ಅಹ್ಮದ್ ಅವರನ್ನು ಟೀಕಿಸಿದ್ದರು. ಧರ್ಮ ಧರ್ಮಗಳ ನಡುವೆ ಸಂಘರ್ಷ ಸೃಷ್ಟಿಸುವ ಹೇಳಿಕೆ ನೀಡಿದ್ದಾರೆ. ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಹಾಗೂ ಜೀವ ಬೆದರಿಕೆ ಹಾಕಿದ್ದಾರೆ. ಹಾಗಾಗಿ ಎಫ್​ಐಆರ್​ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಜಮೀರ್ ಅಹ್ಮದ್ ಆಪ್ತ ಕಾರ್ಯದರ್ಶಿ ದೂರಿನಲ್ಲಿ ಉಲ್ಲೇಖಿಸಿದ್ದರು.
ಇದನ್ನು ಆಧರಿಸಿ ಚಾಮರಾಜಪೇಟೆ ಪೊಲೀಸ್ ಠಾಣೆಯಲ್ಲಿ ಎಫ್‌ ಐ ಆರ್‌ ದಾಖಲಾಗಿತ್ತು.

ಪುನೀತ ಅವರನ್ನು ಬಂಧಿಸಿ ನ್ಯಾಯಾಧೀಶರ ಮುಂದೆ ಪೊಲೀಸರು ಹಾಜರುಪಡಿಸಿದ್ದಾರೆ. ನ್ಯಾಯಾಧೀಶರು ನ್ಯಾಯಾಂಗ ಬಂಧನ ವಿಧಿಸಿದ್ದಾರೆ.
ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಜಮೀರ್ ಅಹ್ಮದ್ ಖಾನ್ ‘ಕಾಲಿಯಾ’ ಪದ ಬಳಕೆ ಮಾಡಿದ್ದು ರಾಜ್ಯಾದ್ಯಂತ ಕಿಡಿ ಹೊತ್ತಿಸಿದೆ. ಚನ್ನಪಟ್ಟಣದಲ್ಲಿ ಸಚಿವ ಜಮೀರ್ ಅಹ್ಮದ್ ಕಾಂಗ್ರೆಸ್ ಅಭ್ಯರ್ಥಿಯನ್ನ ಹೊಗಳುವ ಭರದಲ್ಲಿ ಈ ಆಕ್ಷೇಪಾರ್ಹ ಹೇಳಿಕೆ ಕೊಟ್ಟಿದ್ದರು. ಕೇಂದ್ರ ಸಚಿವರ ವಿರುದ್ಧದ ಆಕ್ಷೇಪಾರ್ಹ ಹೇಳಿಕೆಗೆ ವಿರೋಧ ವ್ಯಕ್ತವಾಗ್ತಿದ್ದಂತೆ ಸಚಿವ ಜಮೀರ್ ಅಹ್ಮದ್ ಕ್ಷಮೆ ಯಾಚಿಸಿದ್ದರು. ಕೇಂದ್ರ ಸಚಿವ ಕುಮಾರಸ್ವಾಮಿ ಅವರಿಗೆ ಕರಿಯ ಎಂದು ಜಮೀರ್‌ ಅಹ್ಮದ್‌ ಹೇಳಿಕೆಗೆ ಫೇಸ್‌ಬುಕ್‌ ಲೈವ್‌ನಲ್ಲಿ ಜಮೀರ್‌ ವಿರುದ್ಧ ಪುನೀತ್‌ ಕೆರೆಹಳ್ಳಿ ನಿಂದಿಸಿದ್ದ ಹಾಗೂ ಸಚಿವರಿಗೆ ಬೆದರಿಕೆ ಹಾಕಿದ್ದರು ಎಂದು ಆರೋಪಿಸಲಾಗಿದೆ.

ಪ್ರಮುಖ ಸುದ್ದಿ :-   ಬೆಂಗಳೂರು | ಟೆಕ್ಕಿ ನಂತರ ಹೆಂಡತಿ ಕಾಟಕ್ಕೆ ಆತ್ಮಹತ್ಯೆ ಮಾಡಿಕೊಂಡ ಪೊಲೀಸ್‌ ಕಾನ್‌ಸ್ಟೆಬಲ್...! ಡೆತ್​ನೋಟ್​ನಲ್ಲಿ ಕಿರುಕುಳದ ಆರೋಪ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement