ಕರ್ನಾಟಕದ 6 ಜಿಲ್ಲೆಗಳಲ್ಲಿ ಭರ್ಜರಿ ಮಳೆ ; ಹಲವು ಜಿಲ್ಲೆಗಳಲ್ಲಿ ಮಳೆ : ಮುನ್ಸೂಚನೆ

ಬೆಂಗಳೂರು: ಚಂಡಮಾರುತ ಪರಿಚಲನೆಯಿಂದಾಗಿ ಮುಂದಿನ 24 ಗಂಟೆಗಳು ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಎರಡು ದಿನಗಳ ಗುಡುಗು ಸಮೇತ ಮಳೆ ಬೀಳಲಿದೆ ಎಂಬ ಮುನ್ಸೂಚನೆ ನೀಡಿದೆ.
ಮುಂದಿನ 24 ಗಂಟೆಗಳಲ್ಲಿ ಚಿಕ್ಕಮಗಳೂರು, ಶಿವಮೊಗ್ಗ, ಚಾಮರಾಜನಗರ, ರಾಮನಗರ, ಮೈಸೂರು ಹಾಗೂ ತುಮಕೂರು ಜಿಲ್ಲೆಗಳಲ್ಲಿ ಭಾರಿ ಮಳೆ ಬೀಳಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕೊಡಗು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ದಾವಣಗೆರೆ, ಚಿತ್ರದುರ್ಗ, ಹಾಸನ, ಮಂಡ್ಯ, ತುಮಕೂರು, ವಿಜಯನಗರ, ಬಾಗಲಕೋಟೆ, ಬೆಳಗಾವಿ, ಬೀದರ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯನಗರ, ಯಾದಗಿರಿ ಜಿಲ್ಲೆಯಲ್ಲೂ ಮಳೆ ಬೀಳುವ ನಿರೀಕ್ಷೆ ಇದೆ ಎಂದು ತಿಳಿಸಲಾಗಿದೆ.

5 / 5. 3

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಗೋಕರ್ಣ: ಪ್ರವಾಸಕ್ಕೆ ಬಂದಿದ್ದ ಬಾಲಕನಿಗೆ ಕಚ್ಚಿದ ಹಾವು

ನಿಮ್ಮ ಕಾಮೆಂಟ್ ಬರೆಯಿರಿ

advertisement