ಸಚಿವರ ಮನೆಗಳ ಮೇಲೆ ದಾಳಿಯ ನಂತರ ಮಣಿಪುರ ಸಿಎಂ ಮನೆಗೆ ನುಗ್ಗಲು ಯತ್ನಿಸಿದ ಉದ್ರಿಕ್ತ ಗುಂಪು

ಇಂಫಾಲ: ಶನಿವಾರ ಜನರ ಗುಂಪು ಇಂಫಾಲದಲ್ಲಿರುವ ಮಣಿಪುರ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ಅವರ ಖಾಸಗಿ ನಿವಾಸಕ್ಕೆ ನುಗ್ಗಲು ಪ್ರಯತ್ನಿಸಿದೆ. ನಂತರ ಗುಂಪನ್ನು ಚದುರಿಸಲು ಭದ್ರತಾ ಅಧಿಕಾರಿಗಳು ಅಶ್ರುವಾಯು ಶೆಲ್‌ಗಳನ್ನು ಸಿಡಿಸಿದ್ದಾರೆ ಎಂದು ವರದಿಯಾಗಿದೆ.
ಘಟನೆಯ ಸಂದರ್ಭದಲ್ಲಿ ಮುಖ್ಯಮಂತ್ರಿ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ತಮ್ಮ ನಿವಾಸದಲ್ಲಿ ಇರಲಿಲ್ಲ.
ಸೋಮವಾರ ಜಿರಿಬಾಮ್‌ನಿಂದ ನಾಪತ್ತೆಯಾದ ಆರು ಮಂದಿಯಲ್ಲಿ ಮೂವರು ವ್ಯಕ್ತಿಗಳ ಶವಗಳು ಜಿರಿ ನದಿಯಲ್ಲಿ ತೇಲುತ್ತಿರುವುದು ಪತ್ತೆಯಾಗಿದೆ. ಮಹಿಳೆ ಮತ್ತು ಇಬ್ಬರು ಮಕ್ಕಳ ಅಪರಿಚಿತ ಶವಗಳನ್ನು ಶುಕ್ರವಾರ ರಾತ್ರಿ ಅಸ್ಸಾಂನ ಸಿಲ್ಚಾರ್‌ಗೆ ತರಲಾಗಿದ್ದು, ಪ್ರಸ್ತುತ ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ.
ಒತ್ತೆಯಾಳುಗಳ ಹತ್ಯೆ ನಂತರ ಪ್ರತಿಭಟನೆಗಳು ಭುಗಿಲೆದ್ದವು. ಮಣಿಪುರ ಸರ್ಕಾರವು ಇಂಫಾಲ್‌ನಲ್ಲಿ ಕರ್ಫ್ಯೂ ವಿಧಿಸಿದೆ ಮತ್ತು ಶನಿವಾರ ಮುಂಜಾನೆ ಏಳು ಜಿಲ್ಲೆಗಳಲ್ಲಿ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಜಿರಿಬಾಮ್ ಜಿಲ್ಲೆಯಲ್ಲಿ ಮೂವರು ಒತ್ತೆಯಾಳುಗಳ ಹತ್ಯೆ ಖಂಡಿಸಿ ಇಂಫಾಲದಲ್ಲಿ ಪ್ರತಿಭಟನೆಗಳು ನಡೆದ ನಂತರ ಈ ಘಟನೆ ನಡೆದಿದೆ,

ಇದಕ್ಕೂ ಮೊದಲು ಇಂಫಾಲದಲ್ಲಿ ಇಬ್ಬರು ಸಚಿವರು ಮತ್ತು ಮೂವರು ಶಾಸಕರ ನಿವಾಸಗಳಿಗೆ ಪ್ರತಿಭಟನಾಕಾರರು ನುಗ್ಗಿದಾಗ ಪ್ರತಿಭಟನೆಗಳು ಹಿಂಸಾಚಾರಕ್ಕೆ ತಿರುಗಿದವು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಸಪಂ ರಂಜನ್ ಅವರ ಲ್ಯಾಂಫೆಲ್ ಸನಕೀತೆಲ್‌ನಲ್ಲಿರುವ ನಿವಾಸದ ಮೇಲೆ ಗುಂಪೊಂದು ದಾಳಿ ಮಾಡಿದೆ ಮತ್ತು ಗ್ರಾಹಕ ವ್ಯವಹಾರಗಳು ಮತ್ತು ಸಾರ್ವಜನಿಕ ವಿತರಣಾ ಸಚಿವ ಎಲ್. ಸುಸಿಂದ್ರೋ ಸಿಂಗ್ ಅವರ ಮನೆಯನ್ನು ಟಾರ್ಗೆಟ್‌ ಮಾಡಿ ದಾಳಿ ನಡೆಸಲಾಗಿದೆ ಎಂದು ಅಧಿಕಾರಿಗಳು ವರದಿ ಮಾಡಿದ್ದಾರೆ.
ಇಂಫಾಲ್ ಪಶ್ಚಿಮ ಜಿಲ್ಲೆಯ ಸಗೋಲ್‌ಬಂದ್ ಪ್ರದೇಶದಲ್ಲಿ, ಪ್ರತಿಭಟನಾಕಾರರು ಬಿಜೆಪಿ ಶಾಸಕ ಆರ್‌ಕೆ ಇಮೋ ಅವರ ನಿವಾಸದ ಹೊರಗೆ ಜಮಾಯಿಸಿದರು, ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ಅವರ ಅಳಿಯ ಹತ್ಯೆಗಳಿಗೆ “ಸೂಕ್ತ ಪ್ರತಿಕ್ರಿಯೆ” ನೀಡಬೇಕು. ಮತ್ತು 24 ಗಂಟೆಯೊಳಗೆ ಒತ್ತೆಯಾಳುಗಳನ್ನು ಹತ್ಯೆ ಮಾಡಿದ ಅಪರಾಧಿಗಳನ್ನು ಬಂಧಿಸುವಂತೆ ಅಧಿಕಾರಿಗಳಿಗೆ ಒತ್ತಾಯಿಸಿದರು. .”

ಪ್ರಮುಖ ಸುದ್ದಿ :-   2027ರ ಉತ್ತರ ಪ್ರದೇಶ ಚುನಾವಣೆ | ಯೋಗಿ-ಅಖಿಲೇಶ ಜನಪ್ರಿಯತೆ-ಕಾರ್ಯಕ್ಷಮತೆ ; ನ್ಯೂಸ್18 ಸಮೀಕ್ಷೆಯಲ್ಲಿ ಕಂಡುಬಂದಿದ್ದೇನು ?

ಏತನ್ಮಧ್ಯೆ, ಕೇಶಾಮ್‌ಥಾಂಗ್ ಕ್ಷೇತ್ರದ ಟಿಡ್ಡಿಮ್ ರಸ್ತೆಯಲ್ಲಿರುವ ಸ್ವತಂತ್ರ ಶಾಸಕ ಸಪಂ ನಿಶಿಕಾಂತ ಸಿಂಗ್ ಅವರ ನಿವಾಸದ ಮುಂದೆ ಜಮಾಯಿಸಿದ ಪ್ರತಿಭಟನಾಕಾರರು, ಶಾಸಕರು ರಾಜ್ಯದಲ್ಲಿ ಇಲ್ಲ ಎಂಬ ಮಾಹಿತಿ ಲಭಿಸಿದ ನಂತರ ಅವರ ಒಡೆತನದ ಸ್ಥಳೀಯ ಪತ್ರಿಕೆಯ ಕಚೇರಿಯ ಮೇಲೆ ದಾಳಿ ನಡೆಸಿದರು. ಗುಂಪು ಕಟ್ಟಡದ ಹೊರಗಿನ ತಾತ್ಕಾಲಿಕ ಕಟ್ಟಡಗಳಿಗೂ ಹಾನಿ ಮಾಡಿದೆ.
ಇಂಫಾಲ ಪಶ್ಚಿಮ ಜಿಲ್ಲಾ ಮ್ಯಾಜಿಸ್ಟ್ರೇಟ್ ತ. ಕಿರಣಕುಮಾರ ಅವರು ಶನಿವಾರ ಸಂಜೆ 4:30 ರಿಂದ ಕರ್ಫ್ಯೂ ವಿಧಿಸಿ ಆದೇಶ ಹೊರಡಿಸಿದ್ದಾರೆ.

5 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement