ಬೆಂಗಳೂರು: ಕಾರಿನಲ್ಲಿ ಸಂಪೂರ್ಣವಾಗಿ ಸುಟ್ಟು ಹೋಗಿರುವಂತಹ ಸ್ಥಿತಿಯಲ್ಲಿ ಉದ್ಯಮಿಯೊಬ್ಬರ ಮೃತದೇಹ ಹತ್ತೆಯಾಗಿರುವ ಘಟನೆ ಮುದ್ದಿನಪಾಳ್ಯದ ವಿಶ್ವೇಶ್ವರಯ್ಯ ಬಡಾವಣೆಯಲ್ಲಿ ನಡೆದಿದೆ.
ವಾಹನವೊಂದು ಹೊತ್ತಿ ಉರಿದಿರುವ ಬಗ್ಗೆ ಪೊಲೀಸರಿಗೆ ತುರ್ತು ಕರೆ ಬಂದಿದೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದು, ಆದರೆ ಕಾರಿನೊಳಗಿದ್ದ ಸಿ ಪ್ರದೀಪ ಎಂಬುವರು ಉಸಿರುಗಟ್ಟಿ ಅದಾಗಲೇ ಮೃತಪಟ್ಟಿದ್ದರು ಎಂದು ಹೇಳಲಾಗಿದೆ.
ವೃತ್ತಿಯಲ್ಲಿ ಹೋಟೆಲ್ ಸಲಹೆಗಾರರಾದ ಪ್ರದೀಪ ಅವರು ತಮ್ಮ ಸ್ಕೋಡಾ ಕಾರಿಗೆ ಬೆಂಕಿ ಹೊತ್ತಿಕೊಳ್ಳುವ ಮೊದಲು ಅದನ್ನು ಪ್ರತ್ಯೇಕ ಸ್ಥಳದಲ್ಲಿ ನಿಲ್ಲಿಸಿದ್ದರು ಎಂದು ವರದಿಯಾಗಿದೆ.
ತನಿಖಾಧಿಕಾರಿಗಳು ಇದೀಗ ಘಟನೆಯ ಸುತ್ತಲಿನ ಸಂದರ್ಭಗಳ ಬಗ್ಗೆ ತನಿಖೆ ನಡೆಸುತ್ತಿದ್ದು, ಇದು ಆತ್ಮಹತ್ಯೆ ಪ್ರಕರಣ ಎಂದು ಪೊಲೀಸರು ಶಂಕಿಸಿದ್ದಾರೆ.
ಪೊಲೀಸರು ಪ್ರದೀಪ ಅವರ ಕುಟುಂಬ ಮತ್ತು ಸ್ನೇಹಿತರನ್ನು ವಿಚಾರಣೆಗೆ ಒಳಪಡಿಸಿದಾಗ, ಘಟನಾ ಸ್ಥಳದಿಂದ ಯಾವುದೇ ಸೂಸೈಡ್ ನೋಟ್ ಪತ್ತೆಯಾಗಿಲ್ಲ ಎಂದು ಅವರು ಖಚಿತಪಡಿಸಿದ್ದಾರೆ. ಸಾವಿಗೆ ಕಾರಣವಾಗಿರಬಹುದಾದ ಹಣಕಾಸಿನ ಅಥವಾ ವೈಯಕ್ತಿಕ ತೊಂದರೆಯ ಯಾವುದಾದರೂ ಕಾರಣಗಳಿವೆಯೇ ಎಂದು ಖಚಿತಪಡಿಸಿಕೊಳ್ಳಲು ಅಧಿಕಾರಿಗಳು ತಮ್ಮ ತನಿಖೆಯನ್ನು ಮುಂದುವರೆಸಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ