ಯಾರ ಬಿಪಿಎಲ್‌ ಕಾರ್ಡ್‌ ರದ್ದು : ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ

ಬಾಗಲಕೋಟೆ: ” ಅನರ್ಹರ ಬಿಪಿಎಲ್ ಕಾರ್ಡ್ ಗಳನ್ನು ಮಾತ್ರ ರದ್ದಾಗಬಹುದು. ಅರ್ಹರ ಕಾರ್ಡ್‌ಗಳಿಗೆ ಯಾವುದೇ ತೊಂದರೆ ಇಲ್ಲ ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಭಾನುವಾರ ಬಾಗಲಕೋಟೆಯಲ್ಲಿ ಬಿಪಿಎಲ್ ಕಾರ್ಡ್ ರದ್ದತಿ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, “ಬಿಪಿಎಲ್ ಕಾರ್ಡ್ ಗಳು ರದ್ದಾಗುತ್ತಿವೆ ಎನ್ನುವ ಪ್ರಶ್ನೆಯೇ ಪೂರ್ತಿ ತಪ್ಪು. ಪತ್ರಕರ್ತರು ಸರಿಯಾಗಿ ತಿಳಿದುಕೊಂಡು ಬರಬೇಕು. ಅನರ್ಹರ ಕಾರ್ಡ್‌ಗಳನ್ನು ವಾಪಾಸ್ ಪಡೆಯಬಹುದು ಎನ್ನುವ ಆಲೋಚನೆ ಮಾತ್ರ ನಮ್ಮದಾಗಿದೆ. ಇದಿನ್ನೂ ಆಹಾರ ಇಲಾಖೆಯ ಪರಿಶೀಲನೆ ಹಂತದಲ್ಲಿದೆ. ಅಂತಿಮ ತೀರ್ಮಾನ ತೆಗೆದುಕೊಂಡಿಲ್ಲ, ಅರ್ಹರಿಗೆ ಯಾವುದೇ ರೀತಿಯ ತೊಂದರೆಯಿಲ್ಲ ಎಂದು ಸ್ಪಷ್ಟಪಡಿಸಿದರು.

ಆದಾಯ ತೆರಿಗೆ ಪಾವತಿಸುವವರಿಗೂ, ಸರ್ಕಾರಿ ನೌಕರರಿಗೂ ಬಿಪಿಎಲ್ ಕಾರ್ಡ್ ಕೊಡಬೇಕಾ ಎಂದು ಪ್ರಶ್ನಿಸಿದ ಅವರು, ಯಾವ ಕಾರ್ಡ್ ಗಳೂ ರದ್ದಾಗುವುದಿಲ್ಲ. ಅನರ್ಹರಿಂದ ವಾಪಾಸ್ ಪಡೆಯಬಹುದು. ಅರ್ಹರು ವಂಚಿತರಾರಾಗುವುದಿಲ್ಲ ಎಂದರು.
40% ಕಮಿಷನ್ ಆರೋಪದಿಂದ ಮುಕ್ತರಾಗಿದ್ದೇವೆ ಎನ್ನುವ ಆರ್.ಅಶೋಕ್ ಮಾತಿನ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸದ ಸಿದ್ದರಾಮಯ್ಯ, ಗುತ್ತಿಗೆದಾರರ ಸಂಘದ ಅಧ್ಯಕ್ಷರಾಗಿದ್ದ ಕೆಂಪಣ್ಣ ಅವರು ಕೊಟ್ಟ ದೂರಿನ ಆಧಾರದಲ್ಲಿ ನಾವು ತನಿಖೆಗೆ ಸೂಚಿಸಿದ್ದೆವು. ಆರೋಪ ಸಾಬೀತಾಗಿಲ್ಲ ಅಷ್ಟೆ. ಕೆಲವೊಮ್ಮೆ ಸಾಕ್ಷ್ಯಾಧಾರಗಳ ಕೊರತೆಯಿಂದ ಕೊಲೆ ಆರೋಪಿಗಳು ಬಿಡುಗಡೆ ಆಗುತ್ತಾರೆ. ಹಾಗೆಂದ ಮಾತ್ರಕ್ಕೆ ಕೊಲೆಯೇ ಆಗಿಲ್ಲವೆಂದರೆ ಅದರಲ್ಲಿ ಅರ್ಥ ಇಲ್ಲ. ಕೊಲೆ ನಡೆದಿರುತ್ತದೆ ಆದರೆ ಸಾಕ್ಷಿಗಳು ಸಾಕ್ಷ್ಯ ಹೇಳಿರುವುದಿಲ್ಲ ಅಷ್ಟೆ. ಇದೂ ಹಾಗೆಯೇ ಎಂದರು.

ಪ್ರಮುಖ ಸುದ್ದಿ :-   ಉತ್ತರ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಮೂವರು ಹಿರಿಯ ಪತ್ರಕರ್ತರಿಗೆ ದತ್ತಿನಿಧಿ ಪ್ರಶಸ್ತಿ ಪ್ರದಾನ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement