ಸಚಿವ ಜಮೀರ್ ಅಹ್ಮದ್‌ ವಿರುದ್ಧ ಕ್ರಮ: ಪರೋಕ್ಷ ಸುಳಿವು ನೀಡಿದರೇ ಗೃಹ ಸಚಿವ ಪರಮೇಶ್ವರ..?

ಮೈಸೂರು : ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರನ್ನು ಕರಿಯ ಎಂದು ಕರೆದು ವಿವಾದಕ್ಕೆ ಕಾರಣವಾಗಿರುವ ಸಚಿವ ಜಮೀರ್ ಅಹ್ಮದ್ ವಿರುದ್ಧ ಕಾಂಗ್ರೆಸ್ ಪಕ್ಷದಲ್ಲಿ ಶಿಸ್ತು ಕ್ರಮ ಕೈಗೊಳ್ಳುವ ವಿಚಾರ ಕುರಿತು ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಪರೋಕ್ಷ ಸುಳಿವು ನೀಡಿದ್ದಾರೆ.
ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ಅವರು, ಜಮೀರ್ ಹೇಳಿಕೆಯಿಂದ ಚುನಾವಣೆಯಲ್ಲಿ ಸ್ವಲ್ಪ ಪರಿಣಾಮ ಬೀರಿದೆ ಎಂದ ಕೆಪಿಸಿಸಿ ಅಧ್ಯಕ್ಷರು ಹೇಳಿದ್ದಾರೆ. ಕೆ.ಪಿ.ಸಿ.ಸಿ.ಅಧ್ಯಕ್ಷರು ಬೇಕಾದರೆ ಈ ಬಗ್ಗೆ ಪಕ್ಷದ ಶಿಸ್ತು ಪಾಲನ ಸಮಿತಿಗೆ ವರದಿ ಕೊಟ್ಟರೆ ಶಿಸ್ತುಪಾಲನಾ ಅಧ್ಯಕ್ಷರಾದ ರಹೀಂ ಖಾನ್ ಕ್ರಮಕ್ಕೆ ಮುಂದಾಗಬಹುದು ಎಂದು ಹೇಳುವ ಮೂಲಕ ಜಮೀರ್‌ ಅಹ್ಮದ್‌ ವಿರುದ್ಧ ಪಕ್ಷವು ಶಿಸ್ತು ಕ್ರಮಕ್ಕೆ ಮುಂದಾಗಬಹುದು ಎಂದು ಪರೋಕ್ಷ ಸುಳಿವು ನೀಡಿದ್ದಾರೆ.
ನಾನು ಸಹ ಈ ಹಿಂದೆ ಎಐಸಿಸಿ ಶಿಸ್ತು ಪಾಲನಾ ಸಮಿತಿ ಸದಸ್ಯನಾಗಿದ್ದೆ. ಆಗ ಪಕ್ಷಕ್ಕೆ ಹಾನಿಯಾಗುವ ಹೇಳಿಕೆ ಕೊಡುವ ನಾಯಕರನ್ನ ಅವರು ಎಷ್ಟೇ ದೊಡ್ಡವರಿದ್ದರೂ ನೋಟಿಸ್ ಅವರಿಗೆ ನೋಟಿಸ್‌ ನೀಡಿ ಕರೆಸಲಾಗುತ್ತಿತ್ತು. ಅಗತ್ಯವಿದ್ದರೆ ಅವರನ್ನು ಅಮಾನತು ಸಹ ಮಾಡಲಾಗುತ್ತಿತ್ತು. ಕೆಪಿಸಿಸಿ ಅಧ್ಯಕ್ಷರು ಸಹ ಶಿಸ್ತು ಪಾಲನಾ ಸಮಿತಿ ಗಮನಕ್ಕೆ ಈ ವಿಚಾರ ತರಬಹುದು ಎಂದು ಹೇಳಿದ್ದಾರೆ.
ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿನ 40% ಕಮಿಷನ್ ಆರೋಪಕ್ಕೆ ದಾಖಲೆ ಇಲ್ಲ ಎಂದ ಲೋಕಯುಕ್ತ ತನಿಖೆ ವರದಿಯ ಬಗ್ಗೆ ಪ್ರತಿಕ್ರಿಯಿಸಿದ ಅವರು, ಕೆಂಪಣ್ಣ ಆಯೋಗ ಬರೆದ ಪತ್ರದ ಮೇಲೆ ಹೋರಾಟ ಮಾಡಲಾಗಿತ್ತು, ನಮಗೆ ಅದೇ ದಾಖಲೆ. ಈಗ ಲೋಕಾಯುಕ್ತದವರು ಯಾವ ಆಧಾರದ ಮೇಲೆ ಹೇಳಿದ್ದಾರೆ ಎಂಬುದನ್ನು ನೋಡಬೇಕಿದೆ. ಲೋಕಾಯುಕ್ತರ ವರದಿ ಓದಿದ ನಂತರ ಅದರ ಬಗ್ಗೆ ತೀರ್ಮಾನ‌ ಮಾಡುತ್ತೇನೆ ಎಂದು ಹೇಳಿದರು.

ಪ್ರಮುಖ ಸುದ್ದಿ :-   ಸಿಡಿಲು ಬಡಿದು ಒಂದೇ ಕುಟುಂಬದ ಇಬ್ಬರು ಸಾವು

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement