ಬೆಳಗಾವಿ: ಜಿಲ್ಲೆಯ ಹುಕ್ಕೇರಿ ತಾಲೂಕು ಬೆನಕನಹೊಳಿ ಬಳಿಯ ಘಟಪ್ರಭಾ ನದಿ ಹಿನ್ನೀರಿನ ಪ್ರದೇಶದಲ್ಲಿ ಮೀನು ಹಿಡಿಯಲು ತೆರಳಿದ್ದ ತಂದೆ ಮತ್ತು ಇಬ್ಬರು ಮಕ್ಕಳು ನೀರು ಪಾಲಾಗಿದ್ದು, ಸೋಮವಾರ ಬೆಳಿಗ್ಗೆಯಿಂದ ಅವರಿಗಾಗಿ ಹುಡುಕಾಟ ನಡೆದಿದೆ ಎಂದು ವರದಿಯಾಗಿದೆ.
ಹುಕ್ಕೇರಿ ತಾಲೂಕಿನ ಬೆನಕನಹೊಳಿ ಗ್ರಾಮದ ಲಕ್ಷ್ಮಣ ರಾಮ ಅಂಬಲಿ (49)ಮತ್ತು ಅವರ ಮಕ್ಕಳಾದ ರಮೇಶ (14), ಯಲ್ಲಪ್ಪ (12) ನೀರು ಪಾಲಾದವರು ಎಂದು ಗುರುತಿಸಲಾಗಿದೆ. ಲಕ್ಷ್ಮಣ ಹಾಗೂ ಅವರ ಮಕ್ಕಳು ಭಾನುವಾರ ಸಂಜೆ ಬೈಕ್ ನಿಲ್ಲಿಸಿ ಮೀನು ಹಿಡಿಯಲು ನದಿಯ ನೀರಿಗೆ ಇಳಿದಿದ್ದರು. ಸೋಮವಾರ ಬೆಳಗ್ಗೆ ವರೆಗೂ ಮನೆಗೆ ವಾಪಸ್ಸು ಬಾರದೇ ಇರುವುದರಿಂದ ಕುಟುಂಬದವರು ಪೊಲೀಸರಿಗೆ ದೂರು ನೀಡಿದ್ದಾರೆ. ಆಗ ಅವರು ನೀರು ಪಾಲಾಗಿರುವ ಘಟನೆ ಬೆಳಕಿಗೆ ಬಂದಿದೆ. ಎನ್ ಡಿ ಆರ್ ಎಫ್ ತಂಡ ಹಾಗೂ ಯಮಕನಮರಡಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ