ಉಪಚುನಾವಣೆ : ಕರ್ನಾಟಕದ 3 ಕ್ಷೇತ್ರಗಳಲ್ಲಿ ಗೆಲುವು ಯಾರಿಗೆ ? ಎಕ್ಸಿಟ್‌ ಪೋಲ್‌ ಹೇಳಿದ್ದೇನು..?

ಬೆಂಗಳೂರು : ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನವೆಂಬರ್ 13 ರಂದು ನಡೆದಿದ್ದು, ನವೆಂಬರ್ 23 ರಂದು ಫಲಿತಾಂಶ ಪ್ರಕಟವಾಗಲಿದೆ.
ಈ ನಡುವೆ ಪಿಮಾರ್ಕ್ ಎಕ್ಸಿಟ್‌ ಪೋಲ್‌ ಹೊರಬಿದ್ದಿದ್ದು, ಆಡಳಿತಾರೂಢ ಕಾಂಗ್ರೆಸ್‌ ಹಾಗೂ ಬಿಜೆಪಿ-ಜೆಡಿಎಸ್‌ ಮೈತ್ರಿಕೂಟ ಎಷ್ಟು ಸ್ಥಾನಗಳಲ್ಲಿ ಗೆಲ್ಲಲಿದೆ ಎಂದು ಅಂದಾಜಿಸಿದೆ.
ಪಿಮಾರ್ಕ್ ಸಮೀಕ್ಷೆ ಪ್ರಕಾರ ಚನ್ನಪಟ್ಟಣ, ಶಿಗ್ಗಾವಿ ಹಾಗೂ ಸಂಡೂರು ಈ ಮೂರು ಕ್ಷೇತ್ರಗಳ ಪೈಕಿ ಎರಡು ಕ್ಷೇತ್ರಗಳಲ್ಲಿ ಎನ್‌ಡಿಎ ಹಾಗೂ ಕಾಂಗ್ರೆಸ್ ಒಂದು ಕ್ಷೇತ್ರದಲ್ಲಿ ಗೆಲ್ಲಬಹುದು ಎಂದು ಹೇಳಿದೆ.
ಜಿದ್ದಾಜಿದ್ದಿ ಕಣವಾದ ಚನ್ನಪಟ್ಟಣ ಕ್ಷೇತ್ರ ಹಾಗೂ ಶಿಗ್ಗಾವಿಯಲ್ಲಿ ಕ್ರಮವಾಗಿ ಜೆಡಿಎಸ್‌ ಹಾಗೂ ಬಿಜೆಪಿ ಗೆಲ್ಲುವ ಸಾಧ್ಯತೆಯಿದೆ ಎಂದು ಎಕ್ಸಿಟ್‌ ಪೋಲ್‌ ಹೇಳಿದೆ. ಇನ್ನು ಸಂಡೂರು ಕ್ಷೇತ್ರವನ್ನು ಕಾಂಗ್ರೆಸ್‌ ಗೆಲ್ಲುವ ಸಾಧ್ಯತೆಯಿದೆ ಎಂದು ಅದು ಹೇಳಿದೆ. ಚನ್ನಪಟ್ಟಣದಲ್ಲಿ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರು ಮಾಜಿ ಸಚಿವ ಹಾಗೂ ಕಾಂಗ್ರೆಸ್‌ ಅಭ್ಯರ್ಥಿ ಸಿ.ಪಿ. ಯೋಗೇಶ್ವರ ವಿರುದ್ಧ ಸ್ಪರ್ಧಿಸಿದ್ದಾರೆ. ಶಿಗ್ಗಾವಿಯಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅವರ ಪುತ್ರ ಭರತ ಬೊಮ್ಮಾಯಿ ಹಾಗೂ ಕಾಂಗ್ರೆಸ್‌ನ ಯಾಸಿರ್ ಅಹಮದ್ ಖಾನ್ ಸ್ಪರ್ಧೆಯಲ್ಲಿದ್ದಾರೆ. ಸಂಡೂರಿನಲ್ಲಿ ಬಿಜೆಪಿಯ ಬಂಗಾರು ಹನುಮಂತು ಅವರು ಬಳ್ಳಾರಿ ಸಂಸದ ಈ ತುಕಾರಾಂ ಅವರ ಪತ್ನಿ, ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ವಿರುದ್ಧ ಕಣಕ್ಕಿಳಿದಿದ್ದಾರೆ. ನವೆಂಬರ್ 23 ರಂದು ಫಲಿತಾಂಶ ಪ್ರಕಟವಾಗಲಿದೆ.

ಪ್ರಮುಖ ಸುದ್ದಿ :-   ಬೆಳಗಾವಿ | ಮಸೀದಿಯಲ್ಲಿದ್ದ ಕುರಾನ್ ಕದ್ದೊಯ್ದು ಸುಟ್ಟು ಹಾಕಿದ ಕಿಡಿಗೇಡಿಗಳು ; ಪ್ರತಿಭಟನೆ

5 / 5. 5

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement