ಜನಾಕ್ರೋಶಕ್ಕೆ ಮಣಿದ ಸರ್ಕಾರ ; ಬಿಪಿಎಲ್​ ಕಾರ್ಡ್​​ ರದ್ದು ಮಾಡದಂತೆ ಸಿಎಂ ಸಿದ್ದರಾಮಯ್ಯ ಆದೇಶ

ಬೆಂಗಳೂರು: ಅನರ್ಹ ರೇಷನ್‌ ಕಾರ್ಡ್‌ಗಳನ್ನು ರದ್ದು ಮುಂದಾಗಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಇದಕ್ಕೆ ಎದುರಾದ ವ್ಯಾಪಕ ವಿರೋಧಕ್ಕೆ ಮಣಿದು ಈಗ ಸರ್ಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿಸುವವರನ್ನು ಹೊರತುಪಡಿಸಿ ಉಳಿದಂತೆ ಯಾರೊಬ್ಬರ ಪಡಿತರ ಚೀಟಿ ರದ್ದು ಮಾಡದಂತೆ ಆಹಾರ ಇಲಾಖೆ ಅಧಿಕಾರಿಗಳಿಗೆ ಆದೇಶ ಮಾಡಿದ್ದಾರೆ.
ಸರ್ಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿದಾರರನ್ನು ಹೊರತುಪಡಿಸಿ ಉಳಿದ ಯಾವುದೇ ಕುಟುಂಬದವರ ಪಡಿತರ ಚೀಟಿ ರದ್ದಾಗಿದ್ದರೆ ಅದನ್ನು ತಕ್ಷಣ ವಾಪಸ್ ನೀಡುವಂತೆ ಆದೇಶಿಸಿದ್ದಾರೆ.
ರೇಷನ್ ಕಾರ್ಡ್ ಪರಿಷ್ಕರಣೆಯಲ್ಲಿ ಸರ್ಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿದಾರರನ್ನು ಮಾತ್ರ ಕೈ ಬಿಡಬೇಕು. ಉಳಿದ ಯಾವುದೇ ಕುಟುಂಬದವರ ಪಡಿತರ ಚೀಟಿ ರದ್ದಾಗಿದ್ದರೆ ತಕ್ಷಣ ವಾಪಸ್ ನೀಡಬೇಕು. ಬಡ ಕುಟುಂಗಳವರ ಪಡಿತರ ಚೀಟಿಗಳನ್ನು ವಿನಾಕಾರಣ ರದ್ದು ಮಾಡಿದರೆ ಆಹಾರ ಇಲಾಖೆ ಅಧಿಕಾರಿಗಳ ವಿರುದ್ಧವೇ ಕ್ರಮ ಜರುಗಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.
ರಾಜ್ಯದಲ್ಲಿ ಅನರ್ಹ ರೇಷನ್‌ ಕಾರ್ಡ್‌ಗಳನ್ನು ರದ್ದು ಮಾಡಲು ಆಹಾರ ಇಲಾಖೆ ಮುಂದಾಗಿತ್ತು. ಆದರೆ, ಪರಿಷ್ಕರಣೆ ಸಂದರ್ಭದಲ್ಲಿ ಅಧಿಕಾರಿಗಳ ಎಡವಟ್ಟಿನಿಂದ ಅನೇಕ ಅರ್ಹರ ಪಡಿತರ ಚೀಟಿ ರದ್ದು ಮಾಡಲಾಗಿದೆ ಎಂಬ ಆರೋಪಗಳು ಕೇಳಿಬಂದಿತ್ತು. ಈ ಬಗ್ಗೆ ಬಿಜೆಪಿ ನಾಯಕರು ಕೂಡ ಸರ್ಕಾರದ ವಿರುದ್ಧ ಪ್ರತಿಭಟನೆಯ ಎಚ್ಚರಿಕೆ ನೀಡಿದ್ದರು. ಇದರ ಬೆನ್ನಲ್ಲೇ ಯಾವುದೇ ಕಾರಣಕ್ಕೆ ಬಿಪಿಎಲ್‌ ಪಡಿತರ ಚೀಟಿ ರದ್ದು ಮಾಡದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಪ್ರಮುಖ ಸುದ್ದಿ :-   ಕಡೂರು| ದುಷ್ಕರ್ಮಿಗಳಿಂದ ಹಸುವಿನ ಕೆಚ್ಚಲು ಕತ್ತರಿಸಿ ಕ್ರೌರ್ಯ

4 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement