ಬೆಂಗಳೂರು: ಮಾಜಿ ಸಚಿವ ಮನೋಹರ ತಹಶೀಲ್ದಾರ (78) ಇಂದು, ಗುರುವಾರ ನಿಧನರಾಗಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಚಾಮರಾಜ ಪೇಟೆಯಲ್ಲಿರುವ ಶಂಕರ ಆಸ್ಪತ್ರೆಯಲ್ಲಿಅವರು ನಿಧನರಾಗಿದ್ದಾರೆ.
2015ರಲ್ಲಿ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಅಬಕಾರಿ ಸಚಿವರಾಗಿದ್ದ ಮನೋಹರ ತಹಶೀಲ್ದಾರ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ಸಿಗದ ಕಾರಣ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರ್ಪಡೆಯಾಗಿದ್ದರು. ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ತೊರೆದು ಬಿಜೆಪಿಗೆ ಸೇರ್ಪಡೆಗೊಂಡಿದ್ದರು. ಅವರೂರಾದ ಆದ ಅಕ್ಕಿಹೊಳಿ ಗ್ರಾಮದ ತೋಟದ ಜಮೀನಿನಲ್ಲಿ ಇಂದು ಅಂತ್ಯಕ್ರಿಯೆ ನೆರವೇರಲಿದೆ ಎಂದು ಮೂಲಗಳು ತಿಳಿಸಿದೆ.
4 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಮನೋಹರ್ ತಹಶೀಲ್ದಾರ, ಬಿಇ ಪದವೀಧರರಾಗಿದ್ದರು. ಹಿಂದೆ ಎಸ್.ಎಂ. ಕೃಷ್ಣ ಅವರು ಮುಖ್ಯಮಂತ್ರಿಗಳಾಗಿದ್ದ ಅವಧಿಯಲ್ಲಿ ತಹಶೀಲ್ದಾರ ಅವರು ವಿಧಾನಸಭೆ ಉಪ ಸಭಾಪತಿ ಆಗಿದ್ದರು. 1978 ರಲ್ಲಿ ಮೊದಲ ಬಾರಿಗೆ ಹಾನಗಲ್ ವಿಧಾನಸಭೆ ಕ್ಷೇತ್ರದಿಂದ ಆಯ್ಕೆಯಾಗಿ ನಂತರ 1989, 1999, 2013 ಹೀಗೆ 4 ಬಾರಿ ವಿಧಾನಸಭೆಗೆ ಆಯ್ಕೆಯಾಗಿದ್ದರು.
ಪಾರ್ಥಿವ ಶರೀರವನ್ನು ಇಂದು, ಗುರುವಾರ ಮಧ್ಯಾಹ್ನ ಹಾನಗಲ್ ಎನ್‌ಸಿಜೆಸಿ ಮಹಾವಿದ್ಯಾಲಯ ಅವರಣದಲ್ಲಿ ಸಾರ್ವಜನಿಕರ ದರ್ಶನಕ್ಕೆ ಇಡಲಾಗುತ್ತದೆ. ಬಳಿಕ ಹುಟ್ಟೂರಾದ ಅಕ್ಕಿಹೊಳಿ ಗ್ರಾಮದಲ್ಲಿರುವ ತೋಟದ ಜಮೀನಿನಲ್ಲಿ ಅಂತ್ಯಕ್ರಿಯೆ ನಡೆಸಲಾಗುತ್ತದೆ ಎಂದು ಹೇಳಲಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ