ತಮಾಷೆಗೆ ಕೆನ್ನೆಗೆ ಹೊಡೆದದ್ದು 3 ವರ್ಷದ ಪುಟ್ಟ ಬಾಲಕಿಯ ಪ್ರಾಣವನ್ನೇ ತೆಗೆಯಿತು ; ನಂತರ ಆತ ಮಾಡಿದ್ದೇನು..?

ಮುಂಬೈ : ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ 38 ವರ್ಷದ ವ್ಯಕ್ತಿಯೊಬ್ಬ ತನ್ನ 3 ವರ್ಷದ ಪುಟ್ಟ ಸೊಸೆಗೆ ಕೊನ್ನೆಗೆ ಹೊಡೆದ ನಂತರ ಆಕೆ ಸಾವಿಗೀಡಾಗಿದ್ದು, ನಂತರ ಆಕೆಯ ದೇಹವನ್ನು ಸುಡಲು ಯತ್ನಿಸಿದ್ದಾನೆ ಎಂದು ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ.
ಥಾಣೆ ಜಿಲ್ಲೆಯ ಉಲ್ಹಾಸ ನಗರ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ನವೆಂಬರ್ 18 ರಂದು ಮಗು ನಾಪತ್ತೆಯಾದ ಪ್ರಕರಣ ದಾಖಲಾದ ನಂತರ ಪ್ರಕರಣ ಬೆಳಕಿಗೆ ಬಂದಿದೆ. ಗುರುವಾರ ಪೊಲೀಸ್ ಠಾಣೆ ಬಳಿಯ ಪೊದೆಗಳಿಂದ ಭಾಗಶಃ ಸುಟ್ಟ ಮಗುವಿನ ದೇಹವನ್ನು ಪತ್ತೆ ಮಾಡಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಆರೋಪಿ ಬಂಧನ

ಪೊಲೀಸರು ವ್ಯಕ್ತಿಯನ್ನು ಬಂಧಿಸಿದ್ದಾರೆ. ಬಾಲಕಿಗೆ ಕಪಾಳಮೋಕ್ಷ ಮಾಡಿದ ನಂತರ ಬಾಲಕಿ ಕುಸಿದು ಬಿದ್ದು ಸಾವಿಗೀಡಾಗಿದ್ದಾಳೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆರೋಪಿ ಸಾಕ್ಷ್ಯ ನಾಶಪಡಿಸಲು ಮಗುವಿನ ದೇಹಕ್ಕೆ ಬೆಂಕಿ ಹಚ್ಚಿ ಸುಡಲು ಯತ್ನಿಸಿದ್ದಾನೆ ಎಂದು ಹಿಲ್ ಲೈನ್ ಪೊಲೀಸ್ ಠಾಣೆಯ ಹಿರಿಯ ಇನ್ಸ್ ಪೆಕ್ಟರ್ ಅನಿಲ ಜಗತಾಪ ತಿಳಿಸಿದ್ದಾರೆ. ವಿಚಾರಣೆ ವೇಳೆ ಆರೋಪಿ ತಪ್ಪೊಪ್ಪಿಕೊಂಡಿದ್ದು, ತಾನು ಉದ್ದೇಶಪೂರ್ವಕವಾಗಿ ಹತ್ಯೆ ಮಾಡಿಲ್ಲ ಎಂದು ಹೇಳಿದ್ದಾನೆ.
ಆರೋಪಿ ಹೇಳಿದ್ದೇನು?
ಆಕೆಯೊಂದಿಗೆ ಆಟವಾಡುತ್ತಿದ್ದಾಗ ತಮಾಷೆಗಾಗಿ ಆಕೆಯ ಕಪಾಳಕ್ಕೆ ಹೊಡೆದಿದ್ದೆ. ಅದು ಆಕೆ ಅಡುಗೆ ಮನೆಯ ಸ್ಲ್ಯಾಬ್‌ಗೆ ಡಿಕ್ಕಿ ಹೊಡೆದು ಸಾವಿಗೆ ಕಾರಣವಾಯಿತು. ಭಯದಿಂದ, ಅವಳನ್ನು ಸುಟ್ಟು ಸಾಕ್ಷ್ಯ ನಾಶ ಮಾಡಲು ನಾಶಮಾಡಲು ಪ್ರಯತ್ನಿಸಿದ್ದು, ಬಳಿಕ ಶವವನ್ನು ಪೊದೆಗೆ ಎಸೆದಿರುವುದಾಗಿ ಹೇಳಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ

ಪ್ರಮುಖ ಸುದ್ದಿ :-   ಬೆಂಗಳೂರು ಬಳಿ ಯುವತಿಗೆ ಕಿರುಕುಳ ನೀಡಿ, ಹಲ್ಲೆಗೈದ ಗ್ಯಾಂಗ್ ; ಕೃತ್ಯ ಸಿಸಿಟಿವಿಯಲ್ಲಿ ಸೆರೆ

4.7 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement