ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದ ಪರಿಣಾಮದಿಂದ ಹಿಂದೂ ಮಹಾಸಾಗರದಲ್ಲಿ ಚಂಡಮಾರುತದ ಪರಿಚಲನೆ ಉಂಟಾಗಿದ್ದು, ಿದರ ಪರಿನಾಮದಿಂದ ಕರ್ನಾಟಕದಲ್ಲಿ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಹಿಂದೂ ಮಹಾಸಾಗರದಲ್ಲಿ ಚಂಡಮಾರುತ ಪರಿಚಲನೆ ಉಂಟಾಗಿದೆ. ಬಂಗಾಳಕೊಲ್ಲಿಯಲ್ಲಿ ಕಡಿಮೆ ಒತ್ತಡ ಪ್ರದೇಶವು ರೂಪುಗೊಳ್ಳುವ ಸಾಧ್ಯತೆ ಇದೆ. ಹೀಗಾಗಿ ಕರ್ನಾಟಕದ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹವಾಮಾನ ಇಲಾಖೆ ಮೂಲಗಳ ಪ್ರಕಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ಅಲ್ಲದೆ ಜಾಗತಿಕ ಮುನ್ಸೂಚನೆ ವ್ಯವಸ್ಥೆ (GFS) ಪ್ರಕಾರ, ಹವಾಮಾನ ವ್ಯವಸ್ಥೆಯು ಶುಕ್ರವಾರ, ನವೆಂಬರ್ 29 ರಂದು ಬೆಂಗಳೂರಿನ ಮೇಲೆ ನೇರವಾಗಿ ಹಾದುಹೋಗುವ ಸಾಧ್ಯತೆ ಇದೆ. ಈ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಅಲ್ಲದೆ, ದಕ್ಷಿಣ ಕನ್ನಡ ಘಟ್ಟಗಳ ಉದ್ದಕ್ಕೂ ಮಳೆ ಆಗಬಹುದಾಗಿದೆ. GFS ಮುನ್ಸೂಚನೆಗಳು ನವೆಂಬರ್ 29 ಮತ್ತು 30 ರಂದು ಕೊಡಗು, ಚಿಕ್ಕಮಗಳೂರು, ಉಡುಪಿ ಮತ್ತು ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡದ ಕೆಲವು ಕಡೆ ಮಳೆಯಾಗುವ ಸಾಧ್ಯತೆ ಬಗ್ಗೆ ಹೇಳಿದೆ. ಉಳಿದಂತೆ ಉತ್ತರ ಒಳನಾಡಿನಲ್ಲಿ ಒಣ ಹವೆ ಮುಂದುವರಿಯುವ ಸಾಧ್ಯೆಯಿದೆ ಎಂದು ಹೇಳಿದೆ.
ನಿಮ್ಮ ಕಾಮೆಂಟ್ ಬರೆಯಿರಿ