ವಿಧಾನಸಭೆ ಚುನಾವಣೆ ಮತ ಎಣಿಕೆ : ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಬಹುದೊಡ್ಡ ಲೀಡ್‌ ; ಜಾರ್ಖಂಡದಲ್ಲಿ ಇಂಡಿಯಾ ಬಣಕ್ಕೆ ಮುನ್ನಡೆ

ನವದೆಹಲಿ: ದೇಶಾದ್ಯಂತ ತೀವ್ರ ಕುತೂಹಲ ಕೆರಳಿಸಿರುವ ಮಹಾರಾಷ್ಟ್ರ ಹಾಗೂ ಜಾರ್ಖಂಡ್‌ (Maharashtra, Jharkhand Election Result) ರಾಜ್ಯ ವಿಧಾನಸಭಾ ಚುನಾವಣೆಗಳ ಮತ ಎಣಿಕೆ ನಡೆಯುತ್ತಿದ್ದು, ಎರಡೂ ರಾಜ್ಯಗಳಲ್ಲಿ ಬಿಜೆಪಿ ನೇತೃತ್ವದ ಎನ್‌ಡಿ ಮೈತ್ರಿಕೂಟ ಮುನ್ನಡೆ ಸಾಧಿಸಿದೆ.
288 ಸ್ಥಾನಗಳ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ, ಬಿಜೆಪಿ, ಶಿವಸೇನೆ ಮತ್ತು ಎನ್‌ಸಿಪಿ (ಅಜಿತ್ ಪವಾರ್ ಬಣ) ಮಹಾಯುತಿ ಮೈತ್ರಿಕೂಟವು 205 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಕಾಂಗ್ರೆಸ್, ಶಿವಸೇನೆ(ಯುಬಿಟಿ) ಮತ್ತು ಎನ್‌ಸಿಪಿ (ಶರದ್ ಪವಾರ್ ಬಣ) ಪ್ರತಿಪಕ್ಷಗಳ ಮಹಾ ವಿಕಾಸ ಅಘಾಡಿ (MVA) ಮೈತ್ರಿಕೂಟವು 78 ಕ್ಷೇತ್ರಗಳಲ್ಲಿ ಮಾತ್ರ ಮುನ್ನಡೆ ಸಾಧಿಸಿದೆ. ಮಹಾರಾಷ್ಟ್ರದ ವಿಧಾನಸಭೆಯಲ್ಲಿ ಸರಳ ಬಹುಮತ ಪಡೆಯಲು 145 ಸ್ಥಾನಗಳನ್ನು ಗೆಲ್ಲಬೇಕು. ಆದರೆ ಬಿಜೆಪಿ ಪಕ್ಷವೊಂದೇ 120 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಮುಖ್ಯಮಂತ್ರಿ ಏಕನಾಥ ಶಿಂಧೆ ನೇತೃತ್ವದ ಶಿವಸೇನೆ 45 ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.
ಜಾರ್ಖಂಡ್‌ನಲ್ಲಿ ನೆಕ್‌ ಟೊ ನೆಕ್‌ ಫೈಟ್‌
81 ಸ್ಥಾನಗಳ ಜಾರ್ಖಂಡ್ ವಿಧಾನಸಭಾ ಚುನಾವಣೆಯಲ್ಲಿ, ಆಡಳಿತಾರೂಢ ಜೆಎಂಎಂ ನೇತೃತ್ವದ ಇಂಡಿಯಾ ಬ್ಲಾಕ್ 40 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದೆ. ಆದರೆ ಬಿಜೆಪಿ ನೇತೃತ್ವದ ಎನ್‌ಡಿಎ ಸಮೀಪದಲ್ಲಿಯೇ ಇದೆ. ಅದು 38 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದೆ, ಇತರರು ಮೂರು ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದ್ದಾರೆ.

ಪ್ರಮುಖ ಸುದ್ದಿ :-   ಆಪರೇಶನ್‌ ಸಿಂಧೂರ : ಪಾಕಿಸ್ತಾನದ ವಾಯುನೆಲೆಗಳ ಮೇಲಿನ ದಾಳಿಯಲ್ಲಿ 20% ಮೂಲಸೌಕರ್ಯ; ಹಲವಾರು ಯುದ್ಧ ವಿಮಾನಗಳು ನಾಶ...!

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement