ನಿಖಿಲ್‌ ಕುಮಾರಸ್ವಾಮಿ ಸೋಲಿನಿಂದ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ ಅಭಿಮಾನಿ

ರಾಮನಗರ: ಚನ್ನಪಟ್ಟಣ ಉಪಚುನಾವಣೆಯಲ್ಲಿ (Channapatna Bypoll) ಜೆಡಿಎಸ್‌ ಅಭ್ಯರ್ಥಿ ನಿಖಿಲ್‌ ಕುಮಾರಸ್ವಾಮಿ ಅವರ ಸೋಲಿನಿಂದ ಮನನೊಂದು ಅಭಿಮಾನಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಘಟನೆ ವರದಿಯಾಗಿದೆ.
ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಕೂಡ್ಲೂರು ಸಮೀಪ ಶ್ರೀರಾಮಪುರದಲ್ಲಿ ಈ ಘಟನೆ ನಡೆದಿದ್ದು, ನಿಖಿಲ್‌ ಅಭಿಮಾನಿ ಎಂದು ಹೇಳಿಕೊಂಡ ವ್ಯಕ್ತಿಯೊಬ್ಬ ಪತ್ರ ಬರೆದಿಟ್ಟು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂದು ಹೇಳಲಾಗಿದೆ. ಈತನನ್ನು ಜೆಡಿಎಸ್‌ ಕಾರ್ಯಕರ್ತ ಮಂಜುನಾಥ (35) ಎಂದು ಗುರುತಿಸಲಾಗಿದೆ. ತೀವ್ರ ಅಸ್ವಸ್ಥನಾಗಿರುವ ಈತನನ್ನು ಮಂಡ್ಯದ ಆಸ್ಪತ್ರೆಗೆ ದಾಖಲಿಸಲಾಗಿದೆ. ನಾನು ನಿಖಿಲ್ ಅಭಿಮಾನಿ. ನನ್ನ ಸಾವಿಗೆ ನಾನೇ ಕಾರಣ. ಜೈ ಜೆಡಿಎಸ್ ಎಂದು ಪತ್ರ ಪರೆದಿಟ್ಟು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎನ್ನಲಾಗಿದೆ.
ಚನ್ನಪಟ್ಟಣ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ. ಯೋಗೇಶ್ವರ ಅವರು 25,515 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಯೋಗೇಶ್ವರ ಅವರಿಗೆ 1,12,642 ಮತ ದೊರೆತರೆ, ಎನ್​ಡಿಎ ಅಭ್ಯರ್ಥಿ ನಿಖಿಲ್‌ ಕುಮಾರಸ್ವಾಮಿಗೆ 87,229 ಮತಗಳು ದೊರೆತಿವೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement