ಚಿಕ್ಕಮಗಳೂರು : ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆಯಲ್ಲಿ ಸೋಲು ಅನುಭವಿಸಿದ ಎನ್.ಡಿ.ಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರ ಸೋಲು ಅವರ ಅಭಿಮಾನಿಗಳಿಗೆ ಆಘಾತ ತಂದಿದೆ.
ನಿಖಿಲಕುಮಾರಸ್ವಾಮಿ ಅವರ ಕಟ್ಟಾ ಅಭಿಮಾನಿಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಬೆನ್ನಲ್ಲೇ ಈಗ ಕಡೂರು ಮೂಲದ ಹರ್ಷಿತ್ ರಕ್ತದಲ್ಲಿ ಪತ್ರ ಬರೆದು ನಿಖಿಲ ಸೋಲಿಗೆ ತಮ್ಮ ನೋವನ್ನು ವ್ಯಕ್ತಪಡಿಸಿದ್ದಾರೆ. ಭಾನುವಾರ ಅವರು ರಕ್ತದಲ್ಲಿ ಪತ್ರ ಬರೆದಿದ್ದಾರೆ.
ಜೆಡಿಎಸ್ ಎಂದು ರಕ್ತದಲ್ಲಿ ಬರೆದ ಪತ್ರದಲ್ಲಿ ನೀವು ಸೋತಿರಬಹುದು, ಆದರೆ ಜನರ ಮನಸ್ಸಿನಲ್ಲಿದ್ದೀರಾ. ಎಷ್ಟೋ ನಮ್ಮಂತ ನಿಷ್ಠಾವಂತ ಕಾರ್ಯಕರ್ತರಲ್ಲಿ ನಮ್ಮ ಪಕ್ಷದ ಉಸಿರಿದೆ. ಒಂದಲ್ಲ ಒಂದು ದಿನ ಒಳ್ಳೆತನ ಗೆದ್ದೇ ಗೆಲ್ಲುತ್ತದೆ. ನಿಮ್ಮ ಜೊತೆ ನಾವಿದ್ದೇವೆ. ಧೈರ್ಯವಾಗಿರಿ. ನನ್ನ ರಕ್ತದಲ್ಲಿ ಜೆಡಿಎಸ್ ಇದೆ ಎಂದು ರಕ್ತದಲ್ಲಿ ಪತ್ರದಲ್ಲಿ ಬರೆಯಲಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ