ಸಂಭಾಲ್ ಹಿಂಸಾಚಾರ | 4 ಸಾವು, ಶಾಲೆಗಳು ಬಂದ್‌, ಇಂಟರ್ನೆಟ್‌ ಸ್ಥಗಿತ ; ಎಫ್‌ಐಆರ್ ನಲ್ಲಿ ಸಮಾಜವಾದಿ ಪಕ್ಷದ ಸಂಸದನ ಹೆಸರು

ಸಂಭಾಲ್: ಉತ್ತರ ಪ್ರದೇಶದ ಸಂಭಾಲ್‌ನಲ್ಲಿ ಭಾನುವಾರ ಮಸೀದಿಯೊಂದರ ಸಮೀಕ್ಷೆಗೆ ಸಂಬಂಧಿಸಿದಂತೆ ನಡೆದ ಹಿಂಸಾಚಾರದಲ್ಲಿ ನಾಲ್ವರು ಸಾವಿಗೀಡಾಗಿದ್ದಾರೆ ಹಾಗೂ 29 ಮಂದಿ ಗಾಯಗೊಂಡಿದ್ದಾರೆ. ಈ ಸಂಬಂಧ ಕನಿಷ್ಠ 25 ಜನರನ್ನು ಬಂಧಿಸಲಾಗಿದದ್ದು, 400 ಜನರ ವಿರುದ್ಧ ಏಳು ಪ್ರಕರಣಗಳನ್ನು ದಾಖಲಿಸಲಾಗಿದೆ. ಸಂಭಾಲ್‌ನ ಸಮಾಜವಾದಿ ಪಕ್ಷದ ಸಂಸದ ಜಿಯಾವುರ್ ರೆಹಮಾನ್ ಬಾರ್ಕ್ ಮತ್ತು ಅವರ ಪಕ್ಷದ ಸಹೋದ್ಯೋಗಿ ಇಕ್ಬಾಲ್ ಮಹಮೂದ್ ಅವರ ಪುತ್ರ ನವಾಬ್ ಸುಹೇಲ್ ಇಕ್ಬಾಲ್ ಅವರ ವಿರುದ್ಧ ಆರೋಪ ಹೊರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹಿಂಸಾಚಾರ, ಜನರನ್ನು ಸೇರಿಸುವುದು ಮತ್ತು ಅಶಾಂತಿಯನ್ನು ಪ್ರಚೋದಿಸಿದ ಆರೋಪವನ್ನು ಇಬ್ಬರ ಮೇಲೆ ಹೊರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸೋಮವಾರ ಶಾಲೆಗಳನ್ನು ಮುಚ್ಚಲಾಗಿದೆ, ಮೊಬೈಲ್ ಇಂಟರ್ನೆಟ್ ಅನ್ನು ಸ್ಥಗಿತಗೊಳಿಸಲಾಗಿದೆ.
ಸಂಭಾಲ್‌ನಲ್ಲಿ 24 ಗಂಟೆಗಳ ಕಾಲ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ ಮತ್ತು 12 ನೇ ತರಗತಿಯವರೆಗಿನ ಎಲ್ಲಾ ವಿದ್ಯಾರ್ಥಿಗಳಿಗೆ ಸೋಮವಾರ ಶಾಲೆಗಳನ್ನು ಮುಚ್ಚಲಾಗಿದೆ. ನವೆಂಬರ್ 30 ರವರೆಗೆ ಅಧಿಕಾರಿಗಳ ಆದೇಶವಿಲ್ಲದೆ ಯಾವುದೇ ಹೊರಗಿನವರು, ಸಾಮಾಜಿಕ ಸಂಸ್ಥೆಗಳು ಅಥವಾ ಸಾರ್ವಜನಿಕ ಪ್ರತಿನಿಧಿಗಳು ಸಂಭಾಲ್‌ಗೆ ಪ್ರವೇಶಿಸುವುದನ್ನು ಅಧಿಕಾರಿಗಳು ನಿರ್ಬಂಧಿಸಿದ್ದಾರೆ.

ಪ್ರಮುಖ ಸುದ್ದಿ :-   ಆಪರೇಷನ್ ಸಿಂಧೂರ ಕಾರ್ಯಾಚರಣೆ ವೇಳೆ ಭಾರತದ ಸೇನೆ ಬಗ್ಗೆ ಪಾಕಿಸ್ತಾನಕ್ಕೆ ಚೀನಾ ಲೈವ್‌ ಮಾಹಿತಿ ನೀಡುತ್ತಿತ್ತು ; ಉನ್ನತ ಸೇನಾ ಜನರಲ್

ಮೊಘಲರ ಕಾಲದ ಶಾಹಿ ಜಾಮಾ ಮಸೀದಿಯಲ್ಲಿ ಭಾನುವಾರ ಬೆಳಗ್ಗೆ ನ್ಯಾಯಾಲಯದ ಆದೇಶದ ನಂತರ ಅಧಿಕಾರಿಗಳು ಸರ್ವೆಗೆ ತೆರಳಿದ್ದರು. ಈ ವೇಳೆ ಗುಂಪು ಮತ್ತು ಪೊಲೀಸರ ನಡುವೆ ಮಾರಣಾಂತಿಕ ಘರ್ಷಣೆಗೆ ಸಂಭಾಲ್ ಸಾಕ್ಷಿಯಾಗಿದೆ. ಮಸೀದಿಯನ್ನು ಹಿಂದೂ ದೇವಾಲಯದ ಸ್ಥಳದಲ್ಲಿ ನಿರ್ಮಿಸಲಾಗಿದೆ ಎಂಬುದು ಕಾನೂನು ಹೋರಾಟದ ಕೇಂದ್ರವಾಗಿದೆ. ಮೊಘಲರ ಕಾಲದ ಮಸೀದಿಯನ್ನು ದೇವಾಲಯವನ್ನು ಕೆಡವಿ ನಿರ್ಮಿಸಲಾಗಿದೆ ಎಂಬ ಅರ್ಜಿ ಸಲ್ಲಿಕೆಯ ನಂತರ ನ್ಯಾಯಾಲಯ ನೇಮಿಸಿದ ವಕೀಲರ ಆಯೋಗವು ನಡೆಸಿದ ಸ್ಥಳೀಯ ಶಾಹಿ ಮಸೀದಿಯ ಸರ್ವೆಯನ್ನು ಪ್ರತಿಭಟನಾಕಾರರು ವಿರೋಧಿಸಿದ ನಂತರ ಭಾನುವಾರ ಹಿಂಸಾಚಾರ ನಡೆಯಿತು. ಗುಂಪು ಪೊಲೀಸರ ಮೇಲೆ ಕಲ್ಲುಗಳನ್ನು ಎಸೆಯಿತು ಮತ್ತು ವಾಹನಗಳಿಗೆ ಬೆಂಕಿ ಹಚ್ಚಿತು, ಪೊಲೀಸರು ಅಶ್ರುವಾಯು ಶೆಲ್‌ಗಳ ಸಿಡಿಸಿದರು. ಬೆಳಗ್ಗೆ 7 ಗಂಟೆಗೆ ಆರಂಭವಾದ ಉದ್ವಿಗ್ನತೆ ಗಂಟೆಗಟ್ಟಲೆ ಮುಂದುವರಿಯಿತು.
ಪ್ರತಿಭಟನಾಕಾರರು ಕೆಲವು ವಾಹನಗಳಿಗೆ ಬೆಂಕಿ ಹಚ್ಚಿದರು ಮತ್ತು ಪೊಲೀಸರ ಮೇಲೆ ಕಲ್ಲು ಎಸೆದರು, ಗುಂಪು ಚದುರಿಸಲು ಪೊಲೀಸರು ಅಶ್ರುವಾಯು ಮತ್ತು ಲಾಠಿಗಳನ್ನು ಬಳಸಿದರು. ಸುಮಾರು 20 ಪೊಲೀಸ್ ಸಿಬ್ಬಂದಿಗೂ ಗಾಯಗಳಾಗಿದ್ದು, ತಲೆಗೆ ಪೆಟ್ಟಾಗಿರುವ ಕಾನ್‌ಸ್ಟೆಬಲ್ ಗಂಭೀರವಾಗಿ ಗಾಯಗೊಂಡಿದ್ದಾರೆ.

ಪ್ರಮುಖ ಸುದ್ದಿ :-   ವೀಡಿಯೊ..| ಗಿರ್‌ ಸೋಮನಾಥದ ಹೆದ್ದಾರಿಯಲ್ಲಿ ವಾಹನಗಳನ್ನು ನಿಲ್ಲಿಸಿದ 2 ಸಿಂಹಿಣಿಗಳು, 8 ಸಿಂಹದ ಮರಿಗಳ ಗುಂಪು-ವೀಕ್ಷಿಸಿ

ಈ ಹಿಂದೆ ಸಂಸದ ಜಿಯಾವುರ್ ರೆಹಮಾನ್ ಬಾರ್ಕ್ ನೀಡಿದ ಹೇಳಿಕೆಯಿಂದಾಗಿ ಇಲ್ಲಿ ಪರಿಸ್ಥಿತಿ ಹದಗೆಟ್ಟಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಕೃಶನ್‌ಕುಮಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪೊಲೀಸರು ಡ್ರೋನ್ ದೃಶ್ಯಗಳನ್ನು ಬಳಸಿಕೊಂಡು ಪ್ರತಿಭಟನಾಕಾರರನ್ನು ಗುರುತಿಸುತ್ತಿದ್ದಾರೆ ಮತ್ತು ಆರೋಪಿಗಳ ವಿರುದ್ಧ ಕಠಿಣ ರಾಷ್ಟ್ರೀಯ ಭದ್ರತಾ ಕಾಯಿದೆ (ಎನ್ಎಸ್ಎ) ಅಡಿಯಲ್ಲಿ ಆರೋಪ ಹೊರಿಸಲಾಗುವುದು ಎಂದು ಅವರು ಹೇಳಿದರು.
ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ ಯಾದವ್ ಅವರು ಸಂಭಾಲ್‌ನಲ್ಲಿ ನಡೆದ ಕಲ್ಲು ತೂರಾಟದ ಘಟನೆಯು “ಸರ್ಕಾರ ಮಾಡಿದ ಗಲಭೆ” ಎಂದು ಆರೋಪಿಸಿದ್ದಾರೆ.
“ಘಟನೆಯ ಸಮಯದಲ್ಲಿ ನಮ್ಮ ಸಂಸದ ಜಿಯಾ ಉರ್ ರೆಹಮಾನ್ ಸಂಭಾಲ್‌ನಲ್ಲಿ ಇರಲಿಲ್ಲ ಮತ್ತು ಅದರ ಹೊರತಾಗಿಯೂ, ಅವರ ವಿರುದ್ಧ ಪ್ರಕರಣವನ್ನು ದಾಖಲಿಸಲಾಗಿದೆ. ನಮ್ಮಲ್ಲಿರುವ ಎಲ್ಲಾ ವೀಡಿಯೊಗಳಿಂದ, ಇದು ಸರ್ಕಾರದ ಗಲಭೆ ಎಂದು ನಮಗೆ ತಿಳಿದಿದೆ ಎಂದು ಯಾದವ್ ಆರೋಪಿಸಿದ್ದಾರೆ.

5 / 5. 4

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement