ಬೆಚ್ಚಿ ಬೀಳಿಸಿದ ಘಟನೆ | ಆಸ್ಪತ್ರೆಯ ಟಾಯ್ಲೆಟ್‌ ಕಮೋಡದಲ್ಲಿ ನವಜಾತ ಶಿಶು ಹಾಕಿ ಫ್ಲಶ್‌ ಮಾಡಿದರು…!

ರಾಮನಗರ: ಆಘಾತಕಾರಿ ಘಟನೆಯೊಂದರಲ್ಲಿ ರಾಜ್ಯದ ರಾಮನಗರ ಜಿಲ್ಲೆಯ ಹಾರೋಹಳ್ಳಿ (Harohalli) ಸಮೀಪದ ಆಸ್ಪತ್ರೆಯೊಂದರ ಶೌಚಾಲಯದ ಗುಂಡಿಯಲ್ಲಿ ನವಜಾತ ಶಿಶುವಿನ ಶವ ಪತ್ತೆಯಾದ ಬಗ್ಗೆ ವರದಿಯಾಗಿದೆ.
ನವಜಾತ ಶಿಶುವನ್ನು ಆಸ್ಪತ್ರೆಯ ಟಾಯ್ಲೆಟ್‌ನಲ್ಲಿ ಹಾಕಿ ಫ್ಲಶ್ ಮಾಡಲಾಗಿದೆ ಎಂದು ಹೇಳಲಾಗಿದೆ. ಸ್ವಚ್ಛತೆ ಸಂಬಂಧ ಆಸ್ಪತ್ರೆಯಲ್ಲಿ ಟಾಯ್ಲೆಟ್ ಪರಿಶೀಲನೆ ಮಾಡುವ ವೇಳೆ ಈ ನವಜಾತ ಶಿಶುವಿನ ದೇಹ ಪತ್ತೆಯಾಗಿದೆ.
ಆಸ್ಪತ್ರೆಯ ರೇಡಿಯಾಲಜಿ ಡಿಪಾರ್ಟ್ಮೆಂಟ್ ಬ್ಲಾಕ್‌ನ ಶೌಚಗುಂಡಿಯಲ್ಲಿ ಮಗು ಶವ ಪತ್ತೆಯಾಗಿದ್ದು, ಶೌಚಾಲಯದಲ್ಲಿ ನೀರು ಹೋಗದೇ ಕಟ್ಟಿಕೊಂಡ ನಂತರ ಹೌಸ್ ಕೀಪಿಂಗ್ ಸಿಬ್ಬಂದಿ ಪರಿಶೀಲನೆ ನಡೆಸಿದಾಗ ಶೌಚಗುಂಡಿಯಲ್ಲಿ ಮಗು ಶವ ಪತ್ತೆಯಾಗಿದೆ.

ಮಗುವನ್ನು ಟಾಯ್ಲೆಟ್ ಕಮೋಡದಲ್ಲಿ ಹಾಕಿ ಫ್ಲಶ್ ಮಾಡಲಾಗಿದೆ.ಇದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಮಗು ಜನನವನ್ನ ಮರೆಮಾಚಲು ಯಾರೋ ಕೃತ್ಯ ಎಗಿರುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.
ಘಟನೆಗೆ ಸಂಬಂಧಿಸಿದಂತೆ ಹಾರೋಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಇದನ್ನು ಯಾರು ಮಾಡಿದರು, ಯಾಕಾಗಿ ಮಾಡಿದರು ಎಂಬ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಈ ಸಂಬಂಧ ಆಸ್ಪತ್ರೆಯಲ್ಲಿ ಹಾಗೂ ಸುತ್ತಮುತ್ತ ಕಳೆದ ಒಂದು ವಾರದಲ್ಲಿ ನಡೆದ ಜನನ ದಾಖಲೆಗಳನ್ನು, ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸುತ್ತಿದ್ದಾರೆ. ಮಗುವಿನ ಡಿಎನ್‌ಎ ಪರೀಕ್ಷೆ ನಡೆಸಿ ಶಿಶುವಿನ ತಾಯಿಯ ಪತ್ತೆಗೆ ಮುಂದಾಗಿದ್ದಾರೆ ಎನ್ನಲಾಗಿದೆ.

ಪ್ರಮುಖ ಸುದ್ದಿ :-   ಏರ್ ಇಂಡಿಯಾ ವಿಮಾನದಲ್ಲಿ 7 ಮಂದಿ ಅಸ್ವಸ್ಥ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement