ಬೆಂಗಳೂರು : ಕರ್ನಾಟಕದ ಮೇಲೆ ಬಂಗಾಳ ಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದಿಂದ ಸೃಷ್ಟಿಯಾಗಿ ತಮಿಳುನಾಡಿಗೆ ಅಪ್ಪಳಿಸಲಿರುವ ಚಂಡಮಾರುತ ‘ಫೆಂಗಲ್’ (Cyclone Fengal) ಚಂಡಮಾರುತದ ಪ್ರಭಾವ ಕರ್ನಾಟಕದ ಮೇಲೆಯೂ ಆಗಲಿದೆ.
ಈ ಚಂಡಮಾರುತದ ಪ್ರಭಾವದಿಂದ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಎರಡು ದಿನ ಭರ್ಜರಿ ಮಳೆಯಾಗುವ ಸಾಧ್ಯತೆಯಿದೆ. ಅದರಲ್ಲಿಯೂ ವಿಶೇಷವಾಗಿ ದಕಿಷಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಅನೇಕ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಹಾಗೂ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ 15 ಜಿಲ್ಲೆಗಳಲ್ಲಿ ಡಿಸೆಂಬರ್ 1ರಿಂದ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಡಿಸೆಂಬರ್ 1ರಂದು ಕೋಲಾರ, ಚಿಕ್ಕಬಳ್ಳಾಪುರ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ ಹಾಗೂ ಚಾಮರಾಜನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ಡಿ2ಕ್ಕೆ ಹಾಸನ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಹಾಗೂ ಡಿ.2 ಮತ್ತು ಡಿ.3ಕ್ಕೆ ಕರಾವಳಿಯ ಮೂರು ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ನ ನೀಡಲಾಗಿದೆ. ಉಳಿದಂತೆ ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿಯೂ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಡಿ.5ರ ವರೆಗೆ ರಾಜ್ಯದಲ್ಲಿ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಅಲ್ಲದೆ, ಉಷ್ನಾಂಶ ಕೂಡ ಕುಸಿಯುತ್ತಿದ್ದು, ವಿಜಯಪುರದಲ್ಲಿ ಅತಿ ಕಡಿಮೆ 11.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ