ಬಾಂಗ್ಲಾದೇಶದಲ್ಲಿ ‘ಹಿಂದೂಗಳ ಮೇಲೆ ದೌರ್ಜನ್ಯ, ಭಾರತಕ್ಕೆ ಅವಮಾನ ; ಆ ದೇಶದ ರೋಗಿಗಳಿಗೆ ಚಿಕಿತ್ಸೆ ನೀಡಲ್ಲ ಎಂದ ಕೋಲ್ಕತ್ತಾ ಆಸ್ಪತ್ರೆ…

ಕೋಲ್ಕತ್ತಾ : ನೆರೆಯ ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂಗಳ ಮೇಲಿನ ದೌರ್ಜನ್ಯ ಹಾಗೂ ಭಾರತದ ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ ಹಿನ್ನೆಲೆಯಲ್ಲಿ ಕೋಲ್ಕತ್ತಾದ ಆಸ್ಪತ್ರೆಯೊಂದು ಬಾಂಗ್ಲಾದೇಶದ ರೋಗಿಗಳಿಗೆ ಚಿಕಿತ್ಸೆ ನೀಡುವುದಿಲ್ಲ ಎಂದು ಹೇಳಿದೆ.
ಬಾಂಗ್ಲಾದೇಶಿ ಪ್ರಜೆಗಳು ಭಾರತೀಯ ಧ್ವಜಕ್ಕೆ ಮಾಡಿದ ಅವಮಾನದಿಂದ ಈ ನಿರ್ಧಾರವನ್ನು ತೆಗೆದುಕೊಳ್ಳುವ ಅನಿವಾರ್ಯತೆ ಬಂದಿದೆ ಎಂದು ಉತ್ತರ ಕೋಲ್ಕತ್ತಾದ ಮಾಣಿಕ್ತಾಲಾ ಪ್ರದೇಶದ ಜೆ.ಎನ್. ರೇ ಆಸ್ಪತ್ರೆಯ ಅಧಿಕಾರಿಯೊಬ್ಬರು ಶುಕ್ರವಾರ ಹೇಳಿದ್ದಾರೆ.
“ನಾವು ಇಂದಿನಿಂದ ಅನಿರ್ದಿಷ್ಟ ಸಮಯದವರೆಗೆ ಯಾವುದೇ ಬಾಂಗ್ಲಾದೇಶದ ರೋಗಿಯನ್ನು ಚಿಕಿತ್ಸೆಗೆ ದಾಖಲಿಸಿಕೊಳ್ಳುವುದಿಲ್ಲ ಎಂದು ನಾವು ಅಧಿಸೂಚನೆಯನ್ನು ಹೊರಡಿಸಿದ್ದೇವೆ. ಇದಕ್ಕೆ ಪ್ರಾಥಮಿಕವಾಗಿ ಬಾಂಗ್ಲಾದೇಶವು ಭಾರತಕ್ಕೆ ಮಾಡಿದ ಅವಮಾನದ ಕಾರಣ” ಎಂದು ಆಸ್ಪತ್ರೆಯ ಅಧಿಕಾರಿ ಸುಭ್ರಾಂಶು ಭಕ್ತ್ ಹೇಳಿದ್ದಾರೆ.

ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ಮೇಲೆ ಆಪಾದಿತ ದೌರ್ಜನ್ಯಗಳ ವಿರುದ್ಧ ಪ್ರತಿಭಟನೆಯ ಸಂಕೇತವಾಗಿ ಇದೇ ರೀತಿಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಅಧಿಕಾರಿಯು ನಗರದ ಇತರ ಆಸ್ಪತ್ರೆಗಳನ್ನು ಒತ್ತಾಯಿಸಿದ್ದಾರೆ.
“ತ್ರಿವರ್ಣ ಧ್ವಜವನ್ನು ಅವಮಾನಿಸಿರುವುದನ್ನು ನೋಡಿ, ನಾವು ಬಾಂಗ್ಲಾದೇಶಿಯರಿಗೆ ಚಿಕಿತ್ಸೆ ನೀಡುವುದನ್ನು ನಿಲ್ಲಿಸಲು ನಿರ್ಧರಿಸಿದ್ದೇವೆ. ಅವರ ಸ್ವಾತಂತ್ರ್ಯದಲ್ಲಿ ಭಾರತವು ಪ್ರಮುಖ ಪಾತ್ರ ವಹಿಸಿದೆ. ಆದರೆ ಅದರ ಹೊರತಾಗಿಯೂ, ನಾವು ಅಲ್ಲಿ ಭಾರತ ವಿರೋಧಿ ಭಾವನೆಗಳನ್ನು ನೋಡುತ್ತಿದ್ದೇವೆ. ಇತರ ಆಸ್ಪತ್ರೆಗಳು ನಮ್ಮನ್ನು ಬೆಂಬಲಿಸುತ್ತವೆ ಮತ್ತು ಇದೇ ರೀತಿಯ ಕ್ರಮಗಳನ್ನು ತೆಗೆದುಕೊಳ್ಳುತ್ತವೆ ಎಂದು ನಾವು ಭಾವಿಸುತ್ತೇವೆ” ಎಂದು ಅವರು ಹೇಳಿದ್ದಾರೆ.

ಪ್ರಮುಖ ಸುದ್ದಿ :-   ಜೈಲಿನಿಂದ ಹೊರಬಂದ ನಟ ಅಲ್ಲು ಅರ್ಜುನ

ಬಾಂಗ್ಲಾದೇಶದ ಜನಸಂಖ್ಯೆಯ ಸರಿಸುಮಾರು 8% ರಷ್ಟಿರುವ ಹಿಂದೂಗಳ ಮೇಲಿನ ದಾಳಿಯ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ ಆಸ್ಪತ್ರೆಯಿಂದ ಈ ಘೋಷಣೆ ಬಂದಿದೆ. ಶೇಖ್ ಹಸೀನಾ ಅವರ ಅವಾಮಿ ಲೀಗ್ ಸರ್ಕಾರವು ಆಗಸ್ಟ್ 5 ರಂದು ಪತನವಾದಾಗಿನಿಂದ, 50 ಜಿಲ್ಲೆಗಳಲ್ಲಿ ಅಲ್ಪಸಂಖ್ಯಾತ ಸಮುದಾಯದ ವಿರುದ್ಧ 200 ಕ್ಕೂ ಹೆಚ್ಚು ದಾಳಿಗಳು ನಡೆದಿವೆ ಎಂದು ವರದಿಗಳು ಸೂಚಿಸುತ್ತವೆ.
ದೇಶದ್ರೋಹ ಪ್ರಕರಣದಲ್ಲಿ ಹಿಂದೂ ಆಧ್ಯಾತ್ಮಿಕ ನಾಯಕ ಚಿನ್ಮಯ ಕೃಷ್ಣ ದಾಸ್ ಬಂಧನದ ನಂತರ ಈ ವಾರ ಪರಿಸ್ಥಿತಿ ಹದಗೆಟ್ಟಿದೆ. ಅವರ ವಿರುದ್ಧ ದೇಶದ್ರೋಹದ ಆರೋಪ ಹೊರಿಸಲಾಗಿದ್ದು, ಅವರಿಗೆ ಜಾಮೀನು ನಿರಾಕರಿಸಲಾಗಿದೆ. ಇದರ ನಂತರ ಢಾಕಾ ಮತ್ತು ಚಟ್ಟೋಗ್ರಾಮ ಮೊದಲಾದಡೆ ನಗರಗಳಲ್ಲಿ ಪ್ರತಿಭಟನೆ ಭುಗಿಲೆದ್ದಿದೆ.

5 / 5. 4

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement