ಮಹಾರಾಷ್ಟ್ರ : ಮುಖ್ಯಮಂತ್ರಿ ಹುದ್ದೆ ಬಿಜೆಪಿಗೆ, ಮಿತ್ರಪಕ್ಷಗಳಿಂದ ಇಬ್ಬರು ಉಪಮುಖ್ಯಮಂತ್ರಿಗಳು ; ಅಜಿತ ಪವಾರ್‌

ಮುಂಬೈ : ಮಹಾರಾಷ್ಟ್ರ ಮುಖ್ಯಮಂತ್ರಿ ಬಿಜೆಪಿಯಿಂದ ಆಗುತ್ತಾರೆ ಎಂದು ಬಿಜೆಪಿ ಮಿತ್ರ ಪಕ್ಷ ಎನ್‌ಸಿಪಿ ಮುಖ್ಯಸ್ಥ ಅಜಿತ ಪವಾರ್ ಶನಿವಾರ ಹೇಳಿದ್ದಾರೆ. ಇಬ್ಬರು ಉಪಮುಖ್ಯಮಂತ್ರಿಗಳು ಮೈತ್ರಿಕೂಟದ ಉಳಿದ ಅಂಗಪಕ್ಷಗಳಿಂದ ಆಯ್ಕೆಯಾಗಲಿದ್ದಾರೆ ಎಂದು ಅವರು ಹೇಳಿದರು.
ಅಜಿತ್ ಪವಾರ್ ಅವರ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ, ಏಕನಾಥ ಶಿಂಧೆ ನೇತೃತ್ವದ ಶಿವಸೇನೆ ಮತ್ತು ಬಿಜೆಪಿ ಮಹಾಯುತಿ ಮೈತ್ರಿಕೂಟದಲ್ಲಿ ಮೂರು ಅಂಗ ಪಕ್ಷಗಳಾಗಿವೆ. ಇತ್ತೀಚಿನ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 132 ಸ್ಥಾನಗಳೊಂದಿಗೆ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಪವಾರ್ ಅವರ ಪಕ್ಷವು 41 ಸ್ಥಾನಗಳನ್ನು ಗೆದ್ದರೆ, ಏಕನಾಐ ಶಿಂಧೆ ಅವರ ಪಕ್ಷವು 57 ಸ್ಥಾನಗಳನ್ನು ಪಡೆದುಕೊಂಡಿದೆ. 288 ಸದಸ್ಯ ಬಲದ ವಿಧಾನಸಭೆಯಲ್ಲಿ ಮೂರು ಪಕ್ಷಗಳು ಒಟ್ಟಾಗಿ 230 ಸ್ಥಾನಗಳನ್ನು ಗೆದ್ದಿವೆ, ಬಹುಮತದ ಮಾರ್ಕ್ 145.

“ಸಭೆಯಲ್ಲಿ (ಮಹಾಯುತಿ ನಾಯಕರ ದೆಹಲಿ ಸಭೆ) ಮಹಾಯುತಿಯು ಬಿಜೆಪಿಯವರು ಮುಖ್ಯಮಂತ್ರಿಯಾಗಲಿದ್ದಾರೆ ಮತ್ತು ಉಳಿದ ಎರಡು ಪಕ್ಷದವರು ಉಪಮುಖ್ಯಮಂತ್ರಿಗಳಾಗುವುದರ ಬಗ್ಗೆ ನಿರ್ಧರಿಸಲಾಗಿದೆ ಎಂದು ಅಜಿತ ಪವಾರ್ ಹೇಳಿದರು. ಮಹಾರಾಷ್ಟ್ರ ವಿಧಾನಸಭೆಯ ಅವಧಿ ನವೆಂಬರ್ 26 ರಂದು ಕೊನೆಗೊಂಡಿದೆ. ಆದರೂ ಸರ್ಕಾರ ರಚನೆಯಲ್ಲಿ ವಿಳಂಬ ಯಾಕೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ವಿಳಂಬವಾಗುತ್ತಿರುವುದು ಇದೇ ಮೊದಲಲ್ಲ… ನಿಮಗೆ ನೆನಪಿದ್ದರೆ, 1999 ರಲ್ಲಿ, ಸರ್ಕಾರದ ರಚನೆಗೆ ಒಂದು ತಿಂಗಳು ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದರು.

ಪ್ರಮುಖ ಸುದ್ದಿ :-   75 ಬಾರಿ ಸಂವಿಧಾನ ಬದಲಾಯಿಸಿರುವ ಕಾಂಗ್ರೆಸ್...ಅದಕ್ಕೆ ತುರ್ತು ಪರಿಸ್ಥಿತಿ ಕಳಂಕ ಅಳಿಸಿಹಾಕಲು ಸಾಧ್ಯವಿಲ್ಲ ; ಪ್ರಧಾನಿ ಮೋದಿ ವಾಗ್ದಾಳಿ

ಚುನಾವಣಾ ಫಲಿತಾಂಶ ಪ್ರಕಟವಾಗಿ ಆರು ದಿನ ಕಳೆದರೂ ಬಿಜೆಪಿ ಇನ್ನೂ ತನ್ನ ಚುನಾಯಿತ ಶಾಸಕಾಂಗದ ಸಭೆಯನ್ನು ಕರೆದಿಲ್ಲ ಅಥವಾ ಪಕ್ಷದ ಶಾಸಕಾಂಗ ಪಕ್ಷದ ನಾಯಕನನ್ನು ಆಯ್ಕೆ ಮಾಡಿಲ್ಲ. ಆದರೆ, ಹೊಸ ಸರ್ಕಾರದ ಪ್ರಮಾಣ ವಚನ ಸ್ವೀಕಾರ ಸಮಾರಂಭ ಡಿಸೆಂಬರ್ 5 ರಂದು ಸಂಜೆ 5 ಗಂಟೆಗೆ ಮುಂಬೈನ ಆಜಾದ್ ಮೈದಾನದಲ್ಲಿ ನಡೆಯಲಿದೆ ಎಂದು ಮಹಾರಾಷ್ಟ್ರ ಬಿಜೆಪಿ ಮುಖ್ಯಸ್ಥ ಚಂದ್ರಶೇಖರ ಬವಾಂಕುಲೆ ಶನಿವಾರ ಪ್ರಕಟಿಸಿದ್ದಾರೆ.
ಈ ವಾರದ ಆರಂಭದಲ್ಲಿ, ನಿರ್ಗಮಿತ ಮುಖ್ಯಮಂತ್ರಿ ಏಕನಾಥ ಶಿಂಧೆ ಅವರು ಸರ್ಕಾರದ ರಚನೆಗೆ ಯಾವುದೇ “ಅಡೆತಡೆ” ಆಗುವುದಿಲ್ಲ ಮತ್ತು ಉನ್ನತ ಹುದ್ದೆಗೆ ಸಂಬಂಧಿಸಿದಂತೆ ಬಿಜೆಪಿ ಕೇಂದ್ರ ನಾಯಕತ್ವದ ನಿರ್ಧಾರಕ್ಕೆ ಬದ್ಧರಾಗಿರುವುದಾಗಿ ತಿಳಿಸಿದ್ದರು.

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement