ಮುಂಬೈ: ಮಹಾರಾಷ್ಟ್ರದ ನೂತನ ಸಚಿವ ಸಂಪುಟದ ಪ್ರಮಾಣ ವಚನ ಸ್ವೀಕಾರ ಸಮಾರಂಭದ ದಿನಾಂಕವನ್ನು ಬಿಜೆಪಿ ಪ್ರಕಟಿಸಿದೆ. ಆದರೆ ಮುಖ್ಯಮಂತ್ರಿ ಹೆದ್ದೆಯನ್ನು ಯಾರು ಅಲಂಕರಿಸುತ್ತಾರೆ ಎಂಬುದರ ಕುರಿತು ಇನ್ನೂ ಯಾವುದೇ ಮಾಹಿತಿ ಇಲ್ಲ. ಪ್ರಮಾಣ ವಚನ ಸ್ವೀಕಾರ ಸಮಾರಂಭ ಡಿಸೆಂಬರ್ 5 ರಂದು ಸಂಜೆ 5 ಗಂಟೆಗೆ ಮುಂಬೈನ ಐಕಾನಿಕ್ ಆಜಾದ್ ಮೈದಾನದಲ್ಲಿ ಸಮಾರಂಭ ನಡೆಯಲಿದೆ.
ಪ್ರಮಾಣ ವಚನ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿದ್ದಾರೆ ಎಂದು ಮಹಾರಾಷ್ಟ್ರ ಬಿಜೆಪಿ ಅಧ್ಯಕ್ಷ ಚಂದ್ರಶೇಖರ ಬವಾಂಕುಲೆ ತಿಳಿಸಿದ್ದಾರೆ.
ಆದರೆ ಚುನಾವಣಾ ಫಲಿತಾಂಶ ಪ್ರಕಟವಾಗಿ ಆರು ದಿನ ಕಳೆದರೂ ಬಿಜೆಪಿ ಇನ್ನೂ ಶಾಸಕಾಂಗ ಪಕ್ಷದ ಕರೆದಿಲ್ಲ ಅಥವಾ ಪಕ್ಷದ ಶಾಸಕಾಂಗ ಪಕ್ಷದ ನಾಯಕನನ್ನು ನೇಮಿಸಿಲ್ಲ.
ನಿಯೋಜಿತ ಮುಖ್ಯಮಂತ್ರಿಯಾಗಿರುವ ಏಕನಾಥ ಶಿಂಧೆ ಅವರು ಸತಾರಾ ಜಿಲ್ಲೆಯ ತಮ್ಮ ಸ್ವಗ್ರಾಮದಲ್ಲಿದ್ದಾರೆ. ಅವರು ಅನಾರೋಗ್ಯಕ್ಕೆ ಒಳಗಾಗಿದ್ದಾರೆ, ಹೊಸ ಸರ್ಕಾರ ರಚನೆಯಾಗುತ್ತಿರುವ ರೀತಿಗೆ ಅವರು ಸಂತೋಷವಾಗಿಲ್ಲ ಎಂದು ವದಂತಿಗಳ ನಡುವೆ ಸಹಾಯಕರೊಬ್ಬರಿಂದ ಅವರ ಅನಾರೋಗ್ಯದ ಹೇಳಿಕೆ ಬಂದಿದೆ.
ಮಹಾರಾಷ್ಟ್ರ ವಿಧಾನಸಭೆಯ 288 ಸದಸ್ಯರಲ್ಲಿ ಬಿಜೆಪಿ 132 ಸ್ಥಾನಗಳೊಂದಿಗೆ ರಾಜ್ಯದಲ್ಲಿ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿತು. ಏಕನಾಥ ಶಿಂಧೆ ನೇತೃತ್ವದ ಶಿವಸೇನೆ ಮತ್ತು ಅಜಿತ್ ಪವಾರ್ ಅವರ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ (NCP) -ಕ್ರಮವಾಗಿ 57 ಮತ್ತು 41 ಸ್ಥಾನಗಳನ್ನು ಗೆದ್ದಿದೆ. ಮಹಾಯುತಿ ಸೀಟುಗಳ ಸಂಖ್ಯೆ 230. ಬಹುಮತಕ್ಕೆ ಬೇಕಾದ ಸಂಖ್ಯೆ 145 ಆಗಿದೆ.
ಬಿಜೆಪಿಯ ಪ್ರತಿಸ್ಪರ್ಧಿಯಾದ ಕಾಂಗ್ರೆಸ್ ಕೇವಲ 16 ಸ್ಥಾನಗಳನ್ನು ಗೆದ್ದುಕೊಂಡಿತು. ಉದ್ಧವ್ ಠಾಕ್ರೆ ನೇತೃತ್ವದ ಸೇನಾ ಬಣ 20 ಸ್ಥಾನಗಳನ್ನು ಮತ್ತು ಶರದ್ ಪವಾರ್ ಅವರ ಎನ್‌ಸಿಪಿ ಬಣ 10 ಸ್ಥಾನಗಳನ್ನು ಗೆದ್ದಿದೆ. ಕಾಂಗ್ರೆಸ್ ಜೊತೆಗೆ ಎರಡು ಪಕ್ಷಗಳು ಮಹಾ ವಿಕಾಸ್ ಅಘಾಡಿ ಮೈತ್ರಿ ಮಾಡಿಕೊಂಡಿವೆ. ಪ್ರತಿಪಕ್ಷಗಳ ಒಟ್ಟು ಸೀಟುಗಳು ಕೇವಲ 46 ಸ್ಥಾನಗಳಲ್ಲಿವೆ.
ಆದರೆ ಮಹಾಯುತಿ ಮೈತ್ರಿಕೂಟಕ್ಕೆ ಇಷ್ಟೊಂದು ಬಹುಮತ ದೊರಕಿದ್ದರೂ ಹೊಸ ಸಮ್ಮಿಶ್ರ ಸರ್ಕಾರದಲ್ಲಿ ಮುಖ್ಯಮಂತ್ರಿ ಹುದ್ದೆಗೆ ಯಾರೆಂಬುದರ ಬಗ್ಗೆ ಇನ್ನೂ ಸ್ಪಷ್ಟತೆ ಇಲ್ಲ.ಅಜಿತ್ ಪವಾರ್ ಅವರ ಪಕ್ಷವು ಫಡ್ನವಿಸ್ ಮುಖ್ಯಮಂತ್ರಿಯಾಗಿ ತನಗೆ ಸ್ವೀಕಾರಾರ್ಹ ಎಂದು ಈಗಾಗಲೇ ಹೇಳಿದೆ.
ನಿಮ್ಮ ಕಾಮೆಂಟ್ ಬರೆಯಿರಿ