ವಿವಾದಾತ್ಮಕ ಹೇಳಿಕೆ: ವಿಚಾರಣೆಗೆ ಹಾಜರಾಗಲು ಚಂದ್ರಶೇಖರನಾಥ ಸ್ವಾಮೀಜಿಗೆ ನೋಟಿಸ್

ಬೆಂಗಳೂರು : ಮುಸ್ಲಿಮರಿಗೆ ಮತದಾನದ ಹಕ್ಕು ನಿರಾಕರಣೆ ಮಾಡುವ ಕಾನೂನು ತರಬೇಕು ಎಂದು ಹೇಳಿದ್ದ ವಿಶ್ವ ಒಕ್ಕಲಿಗ ಒಕ್ಕಲಿಗ ಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮೀಜಿ ವಿರುದ್ಧ ಎಫ್​ಐಆರ್​ ದಾಖಲಾಗಿದ್ದು, ಈಗ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ನೀಡಲಾಗಿದೆ ಎಂದು ವರದಿಯಾಗಿದೆ.
ಡಿ.2ರಂದು ಬೆಳಗ್ಗೆ 11ಕ್ಕೆ ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರಿನ ಉಪ್ಪಾರಪೇಟೆ ಠಾಣೆ ಪೊಲೀಸರಿಂದ ನೋಟಿಸ್ ಜಾರಿ ಮಾಡಲಾಗಿದೆ. ಚಂದ್ರಶೇಖರನಾಥ ಸ್ವಾಮೀಜಿ ವಿರುದ್ಧ ಬಿಎನ್​​ಎಸ್ ಸೆಕ್ಷನ್ 299 ರ ಅಡಿಯಲ್ಲಿ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ವಕ್ಫ್ ವಿರುದ್ಧ ವಾಗ್ದಾಳಿ ನಡೆಸುವ ಭರದಲ್ಲಿ ಅವರು ಮುಸ್ಲಿಮರಿಗೆ ಮತದಾನದ ಹಕ್ಕಿನ ನಿರಾಕರಣೆ ಬಗ್ಗೆ ಮಾತನಾಡಿದ್ದರು. ಅದು ವಿವಾದಕ್ಕೆ ಕಾರಣವಾಗಿತ್ತು.
ನಂತರ ಈ ಹೇಳಿಕೆ ಕುರಿತು ವಿವಾದ ಸ್ವಾಮೀಜಿ ವಿಷಾದಿಸಿದ್ದರು. ಬಾಯಿ ತಪ್ಪಿ ಆಡಿದ ಮಾತಾಗಿದೆ. ಹಾಗೆ ಹೇಳಬಾರದಾಗಿತ್ತು. ಮುಸ್ಲಿಮರು ಭಾರತೀಯರೇ ಹೊರತು ಬೇರೆ ಯಾರೂ ಅಲ್ಲ. ದಯವಿಟ್ಟು ಈ ವಿಚಾರವನ್ನು ಇಲ್ಲಿಗೇ ಬಿಟ್ಟುಬಿಡಿ ಎಂದು ಸ್ವಾಮೀಜಿ ಮನವಿ ಮಾಡಿದ್ದರು.

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement