ಹಣ ಸುಲಿಗೆ ಪ್ರಕರಣ ; ದೆಹಲಿ ಎಎಪಿ ಶಾಸಕ ನರೇಶ ಬಲ್ಯಾನ್ ಬಂಧನ

ನವದೆಹಲಿ : ಕಳೆದ ವರ್ಷ ದಾಖಲಾದ ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಎಪಿ ಶಾಸಕ ನರೇಶ ಬಲ್ಯಾನ್ ಅವರನ್ನು ಶನಿವಾರ ದೆಹಲಿಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ದೆಹಲಿಯ ಉತ್ತಮ ನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ನರೇಶ ಬಲ್ಯಾನ್ ಅವರನ್ನು ವಿಚಾರಣೆಗಾಗಿ ಆರ್ ಕೆ ಪುರಂನಲ್ಲಿರುವ ದೆಹಲಿ ಪೊಲೀಸರ ಅಪರಾಧ ವಿಭಾಗದ ಕಚೇರಿಗೆ ಕರೆಸಲಾಯಿತು ಮತ್ತು ನಂತರ ಬಂಧಿಸಲಾಯಿತು ಎಂದು ಪೊಲೀಸರು ಹೇಳಿದ್ದಾರೆ.
ನರೇಶ ಬಲ್ಯಾನ್ ಸುಲಿಗೆ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ ಹಾಗೂ ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರು ನರೇಶ ಬಲ್ಯಾನ್‌ ವಿರುದ್ಧ ಏಕೆ ಕ್ರಮ ಕೈಗೊಂಡಿಲ್ಲ ಎಂದು ಪ್ರಶ್ನಿಸಿದೆ.
ಆಮ್ ಆದ್ಮಿ ಪಕ್ಷವು ನರೇಶ ಬಲ್ಯಾನ್ ಅವರ ಬಂಧನವನ್ನು ಕಾನೂನುಬಾಹಿರ ಎಂದು ಪ್ರತಿಪಾದಿಸಿದೆ. ಬಿಜೆಪಿಯ ಆರೋಪಗಳನ್ನು ತಳ್ಳಿಹಾಕಿದ ಶಾಸಕ ಬಲ್ಯಾನ್‌, ತಮ್ಮ ಬಗ್ಗೆ ಸುಳ್ಳು ಹಬ್ಬಿಸುವವರ ವಿರುದ್ಧ ಪೊಲೀಸ್ ಕೇಸ್ ಹಾಕುವುದಾಗಿ ಹೇಳಿದ್ದಾರೆ.
ನರೇಶ್ ಬಲ್ಯಾನ್ ಮತ್ತು ಪ್ರಸ್ತುತ ವಿದೇಶದಲ್ಲಿರುವ ಗ್ಯಾಂಗ್‌ಸ್ಟರ್ ಕಪಿಲ ಸಾಂಗ್ವಾನ್ ನಡುವಿನ ಸಂಭಾಷಣೆಯ ಆಡಿಯೊ ಕ್ಲಿಪ್ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಉದ್ಯಮಿಗಳಿಂದ ಸುಲಿಗೆ ಹಣವನ್ನು ಸಂಗ್ರಹಿಸುವ ಬಗ್ಗೆ ಸಂಭಾಷಣೆ ನಡೆದಿದ್ದು, ಹೆಚ್ಚಿನ ತನಿಖೆ ಮತ್ತು ವಿಚಾರಣೆ ನಡೆಯುತ್ತಿದೆ ಎಂದು ಅವರು ಹೇಳಿದರು.
ಅರವಿಂದ ಕೇಜ್ರಿವಾಲ್ ಅವರು ದೆಹಲಿಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಮತ್ತು ಹೆಚ್ಚುತ್ತಿರುವ ಅಪರಾಧಗಳ ವಿಷಯವನ್ನು ಪ್ರಸ್ತಾಪಿಸಲು ಪ್ರಾರಂಭಿಸಿದಾಗಿನಿಂದ, ಬಿಜೆಪಿ ಮತ್ತು ಕೇಂದ್ರ ಸರ್ಕಾರವು “ತಮ್ಮ ಪಕ್ಷದ ನಾಯಕರ ವಿರುದ್ಧ ಕಿರುಕುಳ ಮತ್ತು ಪಿತೂರಿ ಮಾಡಲು ಪ್ರಯತ್ನಿಸುತ್ತಿದೆ. ಈ ಸಂಚಿನ ಅಡಿಯಲ್ಲಿ ನರೇಶ ಬಲ್ಯಾನ್ ಅವರನ್ನು ಬಂಧಿಸಲಾಗಿದೆ ಮತ್ತು ಅವರ ವಿರುದ್ಧದ ಆರೋಪಗಳು ಆಧಾರರಹಿತವಾಗಿವೆ ಎಂದು ಎಎಪಿ ಸಂಸದ ಸಂಜಯ ಸಿಂಗ್ ಆರೋಪಿಸಿದ್ದಾರೆ.
“ಹೈಕೋರ್ಟ್ ಆದೇಶದ ವಿರುದ್ಧ ಬಿಜೆಪಿ ನಾಯಕರು ನಕಲಿ ಆಡಿಯೋವನ್ನು ಪ್ಲೇ ಮಾಡಿದ್ದಾರೆ. ನರೇಶ ಬಲ್ಯಾನ್ ಅವರೇ ದರೋಡೆಕೋರ ಕಪಿಲ್ ಸಾಂಗ್ವಾನ್ ಅವರಿಂದ ಬಂದ ಹಲವಾರು ಬೆದರಿಕೆಗಳ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾರೆ” ಎಂದು ಅವರು ಹೇಳಿದ್ದಾರೆ.

ಪ್ರಮುಖ ಸುದ್ದಿ :-   ವೀಡಿಯೊ..| ತರಗತಿಯಲ್ಲಿ ಪಾಠ ಕೇಳುತ್ತಿದ್ದಾಗಲೇ ಕುಸಿದು ಬಿದ್ದು ವಿದ್ಯಾರ್ಥಿನಿ ಸಾವು ; ಶಾಕಿಂಗ್‌ ದೃಶ್ಯ ಸಿಸಿಟಿವಿಯಲ್ಲಿ ಸೆರೆ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement