ಎಚ್‌ ಎಸ್‌ ಆರ್‌ ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಮತ್ತೆ ಗಡುವು ವಿಸ್ತರಣೆ

ಬೆಂಗಳೂರು : ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಸಲು ನೀಡಿದ್ದ ಗಡುವನ್ನು ಸರ್ಕಾರ ಮತ್ತೆ ವಿಸ್ತರಿಸಿದೆ. ಈಗ ರಾಜ್ಯ ಸರ್ಕಾರ ಡಿಸೆಂಬರ್ 31ರ ವರೆಗೆ ವಿಸ್ತರಿಸಿದೆ.
ಈ ಮೊದಲು ಹೆಚ್‌ಎಸ್‌ಆರ್‌ಪಿ ಅಳವಡಿಕೆಗೆ ಡಿಸೆಂಬರ್ 4 ಕೊನೆ ದಿನವಾಗಿತ್ತು. ಆದರೆ ಇದೀಗ ಡಿ. 31 ರ ವರೆಗೆ ಅವಧಿ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈಗಾಗಲೇ ನಾಲ್ಕೈದು ಬಾರಿ ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಗಡುವು ವಿಸ್ತರಣೆ ಮಾಡಲಾಗಿತ್ತು. ಆದರೆ, ಇನ್ನೂ ಲಕ್ಷಾಂತರ ವಾಹನ ಸವಾರರು ತಮ್ಮ ವಾಹನಗಳಿಗೆ ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆ ಮಾಡಿಕೊಂಡಿಲ್ಲ. ಆದ್ದರಿಂದ ಪುನಃ ಗಡುವು ವಿಸ್ತರಣೆ ಮಾಡಿ ಆದೇಶ ಹೊರಡಿಸಲಾಗಿದೆ. ರಾಜ್ಯದಲ್ಲಿ ಸುಮಾರು 2 ಕೋಟಿಯಷ್ಟು ವಾಹನಗಳು ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಸಿಕೊಳ್ಳಬೇಕಿತ್ತು. ಆದರೆ ಸದ್ಯ 55 ಲಕ್ಷ ವಾಹನಗಳಿಗೆ ಮಾತ್ರ ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆಯಾಗಿದೆ. ಹೀಗಾಗಿ ಸತತ 5ನೇ ಬಾರಿಗೆ ಹೆಚ್‌ಎಸ್‌ಆರ್‌ಪಿ ಅಳವಡಿಕೆಗೆ ಸಾರಿಗೆ ಇಲಾಖೆ ಗಡುವು ವಿಸ್ತರಿಸಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement