ಕನ್ನಡ ಧಾರಾವಾಹಿಗಳ ಖ್ಯಾತ ನಟಿ ಶೋಭಿತಾ ಶಿವಣ್ಣ ಆತ್ಮಹತ್ಯೆ

ಹೈದರಾಬಾದ್ : ಕನ್ನಡದ ಬ್ರಹ್ಮಗಂಟು ಸೀರಿಯಲ್ ಖ್ಯಾತಿಯ ನಟಿ ಶೋಭಿತಾ ಶಿವಣ್ಣ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ವರದಿಯಾಗಿದೆ. ಅವರು ಹೈದರಾಬಾದ್‌ನ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಹಾಸನ ಮೂಲದ ಸಕಲೇಶಪುರದವರಾದ ನಟಿ ಶೋಭಿತಾ ಅವರು ಎರಡು ವರ್ಷಗಳ ಹಿಂದೆ ವಿವಾಹವಾಗಿದ್ದು, ಮದುವೆಯ ಬಳಿಕ ಹೈದರಾಬಾದ್‌ನಲ್ಲಿ ವಾಸಿಸುತ್ತಿದ್ದರು. ಶನಿವಾರ ರಾತ್ರಿ ಶೋಭಿತಾ ಅವರು ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮರಣೋತ್ತರ ಪರೀಕ್ಷೆ ನಡೆದ ನಂತರ ದೇಹವನ್ನು ಬೆಂಗಳೂರಿಗೆ ತರುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.
ಬ್ರಹ್ಮಗಂಟು’, ‘ನಿನ್ನಿಂದಲೇ’, ಮೀನಾಕ್ಷಿ ಮದುವೆ’, ‘ಕೋಗಿಲೆ, ‘ಗಾಳಿಪಟ, ಹಾಗೂ ದೀಪವೂ ನಿನ್ನದೇ ಗಾಳಿಯು ನಿನ್ನದೇ’ ಧಾರಾವಾಹಿಯಲ್ಲಿ ಅಭಿನಯಿಸಿದ್ದಾರೆ. ಮತ್ತು ‘ಜಾಕ್‌ಪಾಟ್’, ‘ಎರಡೊಂದ್ಲ ಮೂರು’, ‘ವಂದನಾ’, ‘ಅಟೆಂಪ್ಟ್‌ ಟು ಮರ್ಡರ್’ ಸೇರಿದಂತೆ ಹಲವು ಸಿನಿಮಾಗಳಲ್ಲೂ ನಟಿಸಿದ್ದಾರೆ. ‘ಫಸ್ಟ್ ಡೇ ಫಸ್ಟ್ ಶೋ’ ಎಂಬ ಹೊಸ ಕನ್ನಡ ಸಿನಿಮಾದಲ್ಲಿಯೂ ಪಾತ್ರ ಮಾಡಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement