ಬೆಂಗಳೂರು: ಇತ್ತೀಚೆಗಷ್ಟೇ ತರಬೇತಿ ಮುಗಿಸಿದ್ದ ಕರ್ನಾಟಕದ ಯುವ ಐಪಿಎಸ್ ಅಧಿಕಾರಿಯೊಬ್ಬರು ಭಾನುವಾರ ಹಾಸನ ಜಿಲ್ಲೆಯಲ್ಲಿ ಮೊದಲ ಪೋಸ್ಟಿಂಗ್‌ಗೆ ತೆರಳುತ್ತಿದ್ದ ವೇಳೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.
ಹಾಸನ ತಾಲೂಕಿನ ಕಿತ್ತಾನೆಗಡಿ ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿ ಜೀಪ್ ಪಲ್ಟಿಯಾದ ಪರಿಣಾಮ ಗಂಭೀರ ಗಾಯಗೊಂಡಿದ್ದ ಪ್ರೊಬೆಷನರಿ ಐಪಿಎಸ್ ಅಧಿಕಾರಿ ಹರ್ಷವರ್ಧನ್ (26) ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ರಾತ್ರಿ 9:30ರ ವೇಳೆಗೆ ಮೃತಪಟ್ಟಿದ್ದಾರೆ. 26 ವರ್ಷದ ಹರ್ಷ ಬರ್ಧನ್ ಮಧ್ಯಪ್ರದೇಶದ ನಿವಾಸಿಯಾಗಿದ್ದು, 2023ರ ಬ್ಯಾಚ್‌ನ ಕರ್ನಾಟಕ ಕೇಡರ್‌ನ ಐಪಿಎಸ್ ಅಧಿಕಾರಿಯಾಗಿದ್ದರು. ಹರ್ಷವರ್ಧನ್ ಸಿವಿಲ್ ಇಂಜಿನಿಯರಿಂಗ್ ಪದವಿಧರರಾಗಿದ್ದು, ಸರ್ಕಾರಿ ಕೆಲಸಕ್ಕೂ ಸೇರಿಕೊಂಡಿದ್ದರು. 2022ರಲ್ಲಿ ಮೊದಲ ಬಾರಿಗೆ ಪರೀಕ್ಷೆ ಬರೆದ ಅವರು 153ನೇ ರ‍್ಯಾಂಕ್ ಪಡೆದು ಉತ್ತೀರ್ಣರಾಗಿದ್ದಾರೆ.
ಅವರು ಪ್ರಯಾಣಿಸುತ್ತಿದ್ದ ಪೊಲೀಸ್ ವಾಹನದ ಟೈರ್ ಒಡೆದು ಚಾಲಕನ ನಿಯಂತ್ರಣ ತಪ್ಪಿ ಈ ಅವಘಡ ಸಂಭವಿಸಿದೆ ಎಂದು ವರದಿಯಾಗಿದೆ. ವಾಹನದ ಟೈರ್ ಒಡೆದು ರಸ್ತೆ ಬದಿಯ ಮನೆ ಹಾಗೂ ಮರಕ್ಕೆ ವಾಹನ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಹರ್ಷ ಬರ್ಧನ್ ಅವರ ತಲೆಗೆ ತೀವ್ರ ಗಾಯಗಳಾಗಿದ್ದು, ಕರ್ತವ್ಯಕ್ಕೆ ಹಾಜರಾಗುವ ಮುನ್ನವೇ ಹರ್ಷಬರ್ಧನ್ ಅವರು ಮೃತಪಟ್ಟಿದ್ದಾರೆ. ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟರು. ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ ಮತ್ತು “ವರ್ಷಗಳ ಪರಿಶ್ರಮವು ಫಲ ನೀಡುತ್ತಿರುವಾಗ ಹೀಗಾಗಬಾರದಿತ್ತು” ಎಂದು ಹೇಳಿದರು.
ಹಾಸನ-ಮೈಸೂರು ಹೆದ್ದಾರಿಯ ಕಿಟ್ಟಾಣೆ ಸರಹದ್ದಿನ ಬಳಿ ನಡೆದ ಭೀಕರ ಅಪಘಾತದಲ್ಲಿ ಪ್ರೊಬೇಷನರಿ ಐಪಿಎಸ್ ಅಧಿಕಾರಿ ಹರ್ಷ್ ಬರ್ಧನ್ ಅವರು ಐಪಿಎಸ್ ಅಧಿಕಾರಿಯಾಗಿ ಅಧಿಕಾರ ಸ್ವೀಕರಿಸಲು ತೆರಳುತ್ತಿದ್ದಾಗ ಇಂತಹ ಅವಘಡ ಸಂಭವಿಸಿರುವುದು ತುಂಬಾ ಬೇಸರ ತಂದಿದೆ. ವರ್ಷಗಳ ಕಠಿಣ ಪರಿಶ್ರಮಕ್ಕೆ ಫಲ ಸಿಗುತ್ತಿರುವಾಗ ಹೀಗಾಗಬಾರದಿತ್ತು” ಎಂದು ಎಕ್ಸ್‌ನಲ್ಲಿ ಕನ್ನಡದಲ್ಲಿ ಪೋಸ್ಟ್ ಮಾಡಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ