ಫೆಂಗಲ್‌ ಚಂಡಮಾರುತದ ಪ್ರಭಾವ ; ಕರ್ನಾಟಕದಲ್ಲಿ 3 ದಿನ ಮಳೆ ; ಹಲವು ಜಿಲ್ಲೆಗಳ ಶಾಲಾ ಕಾಲೇಜಿಗೆ ಇಂದು ರಜೆ ಘೋಷಣೆ

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ಫೆಂಗಲ್‌ ಚಂಡಮಾರುತದಿಂದ ರಾಜ್ಯದಲ್ಲಿ ಮೂರು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೆ, ಜೋರಾಗಿ ಬಳೆ ಬೀಳುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ರಾಜ್ಯದ ಐದು ಜಿಲ್ಲೆಗಳ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಯಾವ್ಯಾವ ಜಿಲ್ಲೆಗಳಿಗೆ ಹೆಚ್ಚು ಮಳೆ
ಚಂಡಮಾರುತದ ಹಿನ್ನೆಲೆಯಲ್ಲಿ ಡಿ. 2 ಮತ್ತು 3 ರಂದು 35 ರಿಂದ 85 ಮಿ.ಮೀ ಮಳೆಯಾಗುವ ಸಾಧ್ಯತೆಯಿದೆ. ಹಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿರಲಿದ್ದು, ಚಾಮರಾಜನಗರ, ಮೈಸೂರು, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಬೆಂಗಲೂರು ಗ್ರಾಮಾಂತರ, ಕೊಡಗು, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ ಇದೆ. ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ, ಮಂಡ್ಯ, ಹಾಸನ, ಚಿಕ್ಕಮಗಳೂರು, ಉಡುಪಿಯಲ್ಲೂ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.
ನಿರಂತರ ಮಳೆ ಬೀಳುತ್ತಿರುವುದರಿಂದ ರಾಜ್ಯದ ಕೋಲಾರ, ಚಿಕ್ಕಬಳ್ಳಾಪುರ, ಮೈಸೂರು, ಚಾಮರಾಜ ನಗರ ಹಾಗೂ ಮಂಡ್ಯದ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಫೆಂಗಲ್ ಚಂಡಮಾರುತದ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆ ಸೋಮವಾರದು(ಡಿ.2) ಜಿಲ್ಲಾದ್ಯಂತ ಶಾಲಾ – ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಡಿ.2ರಂದು ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಮೈಸೂರು ಜಿಲ್ಲೆಯಾದ್ಯಂತ ಜಿಟಿ ಜಿಟಿ ಮಳೆಯಾಗುತ್ತಿದ್ದು, ಭಾನುವಾರ ಸಂಜೆ ಶುರುವಾದ ಮಳೆ ಇಡೀ ರಾತ್ರಿ ಸುರಿದಿದೆ. ಹೀಗಾಗಿ ಮೈಸೂರು ಜಿಲ್ಲೆಯ ಶಾಲೆ ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ನಿರಂತರ ಮಳೆಯಿಂದಾಗಿ ಇಂದು ಸೋಮವಾರ (ಡಿ.2ರಂದು) ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಪರೀಕ್ಷೆ ನಡೆಯುತ್ತಿರುವ ಪದವಿ ಕಾಲೇಜುಗಳಿಗೆ ಹೊರತು ಪಡಿಸಿ ರಜೆ ಘೋಷಣೆ ಮಾಡಲಾಗಿದೆ. ಜಿಲ್ಲಾದ್ಯಂತ ನಿರಂತರ ಮಳೆ ಸುರಿಯುತ್ತಿರುವುದರಿಂದ ಮಂಡ್ಯ ಹಾಗೂ ಚಾಮರಾಜ ನಗರದ ಜಿಲ್ಲೆಗಳ ಶಾಲೆ ಹಾಗೂ ಪದವಿ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ್ದಾರೆ.

ಪ್ರಮುಖ ಸುದ್ದಿ :-   ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement