ಫೆಂಗಲ್‌ ಚಂಡಮಾರುತ : ಪುದುಚೇರಿಯಲ್ಲಿ ಸುರಿಯಿತು 30 ವರ್ಷಗಳಲ್ಲೇ ಅಧಿಕ ಮಳೆ…!

ಪುದುಚೇರಿ : ಫೆಂಗಲ್‌ ಚಂಡಮಾರುತದಿಂದಾಗಿ ಕೇಂದ್ರಾಡಳಿತ ಪ್ರದೇಶವಾದ ಪುದುಚೇರಿಯಲ್ಲಿ ರಾತ್ರಿಯಿಡೀ 50 ಸೆಂಟಿಮೀಟರ್ ಮಳೆಯಾಗಿದೆ. ಇದು ಕಳೆದ 30 ವರ್ಷಗಳಲ್ಲಿ ಪುದುಚೇರಿಯಲ್ಲಿ ದಾಖಲಾದ ಅತ್ಯಧಿಕ ಮಳೆಯಾಗಿದೆ.
ಚಂಡಮಾರುತ ಪ್ರಭಾವದಿಂದ ಪುದುಚೇರಿಯಲ್ಲೂ ಅಧಿಕ ಮಳೆಯಾಗುತ್ತಿದೆ. ಪುದುಚೇರಿಯಲ್ಲಿ 50 ಸೆಂ.ಮೀ ಮಳೆಯಾಗಿದ್ದು, ತೀವ್ರ ಪ್ರವಾಹ ಉಂಟಾಗಿದೆ. ನಾನು ಪ್ರಸ್ತುತ ಪ್ರವಾಹ ಪೀಡಿತ ಪ್ರದೇಶಗಳನ್ನು ಪರಿಶೀಲಿಸುತ್ತಿದ್ದೇನೆ. ಪ್ರವಾಹದಲ್ಲಿ ಸಿಲುಕಿರುವವರನ್ನು ಸ್ಥಳಾಂತರಿಸಲು ರಕ್ಷಣಾ ತಂಡಗಳು ಅವಿರತವಾಗಿ ಶ್ರಮಿಸುತ್ತಿವೆ” ಎಂದು ಮುಖ್ಯಮಂತ್ರಿ ಎನ್ ರಂಗಸಾಮಿ ತಿಳಿಸಿದ್ದಾರೆ.
ಕೇಂದ್ರಾಡಳಿತ ಪ್ರದೇಶದಲ್ಲಿ ಡಿಸೆಂಬರ್ 1 ರಂದು ಬೆಳಿಗ್ಗೆ 8:30 ರವರೆಗೆ 24 ಗಂಟೆಗಳಲ್ಲಿ 48.4 ಸೆಂಟಿಮೀಟರ್ ಮಳೆಯನ್ನು ದಾಖಲಿಸಿದೆ, ಇದು 1995 ರಿಂದ 2024 ರ ನಡುವಿನ ದಾಖಲಾದ ಅತಿ ಹೆಚ್ಚು ಮಳೆಯಾಗಿದೆ.

ಫೆಂಗಲ್ ಚಂಡಮಾರುತವು ತಮಿಳುನಾಡು ಹಾಗೂ ಪುದುಚೇರಿಯಲ್ಲಿ ಭಾರೀ ಮಳೆಯನ್ನು ಉಂಟುಮಾಡಿತು. ಚಂಡಮಾರುತದ ಪ್ರಭಾವಕ್ಕೆ ವಿವಿಧೆಡೆ ಮರಗಳು ಧರೆಗುರುಳಿವೆ.
ಫೆಂಗಲ್ ಚಂಡಮಾರುತವು ಉತ್ತರ ತಮಿಳುನಾಡು ಮತ್ತು ಪುದುಚೇರಿ ಕರಾವಳಿಯನ್ನು ದಾಟಿದ ನಂತರ, ಬಲವಾದ ಗಾಳಿ ಮತ್ತು ಭಾರೀ ಮಳೆಯಿಂದಾಗಿ ಕಾರ್ಯಾಚರಣೆ ಸ್ಥಗಿತಗೊಳಿಸಿದ ಚೆನ್ನೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನ ಕಾರ್ಯಾಚರಣೆಗಳು ಪುನರಾರಂಭಗೊಂಡಿವೆ.
ಎಲೆಕ್ಟ್ರಿಕ್ ಮಲ್ಟಿಪಲ್ ಯುನಿಟ್ (ಇಎಂಯು) ರೈಲು ಸೇವೆಗಳು ಡಿಸೆಂಬರ್ 1 ರಿಂದ ಎಲ್ಲಾ ಉಪನಗರ ಜಿಲ್ಲೆಗಳಲ್ಲಿ ಸಾಮಾನ್ಯ ಕಾರ್ಯಾಚರಣೆಗಳನ್ನು ಪುನರಾರಂಭಿಸಿದೆ.

ಪ್ರಮುಖ ಸುದ್ದಿ :-   ವೀಡಿಯೊ...| ವಂದೇ ಭಾರತ ರೈಲಿನಲ್ಲಿ ಬಿಜೆಪಿ ಶಾಸಕನ ಜೊತೆ ತನ್ನ ಸೀಟು ಬದಲಾಯಿಸಿಕೊಳ್ಳಲು ಒಪ್ಪದ ಪ್ರಯಾಣಿಕನ ಮೇಲೆ ಹಲ್ಲೆ

ಸೇನೆ, ಎನ್‌ಡಿಆರ್‌ಎಫ್ ನಿಂದ ಪರಿಹಾರ ಕಾರ್ಯಾಚರಣೆ
ಚೆನ್ನೈ ಗ್ಯಾರಿಸನ್ ಬೆಟಾಲಿಯನ್‌ನ ಭಾರತೀಯ ಸೇನಾ ಪಡೆಗಳನ್ನು ಭಾನುವಾರ ಮುಂಜಾನೆ ಪುದುಚೇರಿಯ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ರಕ್ಷಣಾ ಕಾರ್ಯಾಚರಣೆಯಲ್ಲಿ ಸಹಾಯ ಮಾಡಲು ಸಜ್ಜುಗೊಳಿಸಲಾಯಿತು. ಪುದುಚೇರಿಯಲ್ಲಿ, ಅರಕೋಣಂನಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ಪರಿಹಾರ ಮತ್ತು ಪುನರ್ವಸತಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿದೆ.
ತಮಿಳುನಾಡು ಕರಾವಳಿಗೆ ಫೆಂಗಲ್ ಚಂಡಮಾರುತ ಅಪ್ಪಳಿಸಿದ್ದು, ಮುಂದಿನ 24 ಗಂಟೆಗಳಲ್ಲಿ ಆಂಧ್ರಪ್ರದೇಶ ಹಾಗೂ ಕರ್ನಾಟಕದ ಕೆಲವೆಡೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement