ವೀಡಿಯೊಗಳು..| ಮಹಾರಾಷ್ಟ್ರದ ನೂತನ ಸಿಎಂ ಆಗಿ ದೇವೇಂದ್ರ ಫಡ್ನವೀಸ್‌, ಡಿಸೆಂಗಳಾಗಿ ಏಕನಾಥ ಶಿಂಧೆ, ಅಜಿತ ಪವಾರ್ ಪ್ರಮಾಣ ವಚನ

ಮುಂಬೈ: ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವೀಸ್ ಗುರುವಾರ ಸಂಜೆ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಅ ಮೂಲಕ ಸುಮಾರು ಎರಡು ವಾರಗಳ ಸಸ್ಪೆನ್ಸ್ ಮತ್ತು ಬಿಜೆಪಿ ಮತ್ತು ಶಿವಸೇನೆ ನಡುವಿನ ಹಗ್ಗಜಗ್ಗಾಟಕ್ಕೆ ತೆರೆ ಬಿದ್ದಿದೆ. ಏಕನಾಥ ಶಿಂಧೆ ಮತ್ತು ಎನ್‌ಸಿಪಿ ಮುಖ್ಯಸ್ಥ ಅಜಿತ್ ಪವಾರ್ ಅವರು ಉಪಮುಖ್ಯಮಂತ್ರಿಗಳಾಗಿ ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ಸಿಪಿ ರಾಧಾಕೃಷ್ಣನ್‌ ಅವರು ನೂತನ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ದೇವೇಂದ್ರ ಫಡ್ನವೀಸ್ ಮೂರನೇ ಅವಧಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ.

ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರಾದ ಅಮಿತ್ ಶಾ, ಜೆಪಿ ನಡ್ಡಾ ಮತ್ತು ನಿತಿನ್ ಗಡ್ಕರಿ ಉಪಸ್ಥಿತರಿದ್ದರು. ಅಲ್ಲದೆ, ಮಾಜಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್, ಕೈಗಾರಿಕೋದ್ಯಮಿಗಳಾದ ಮುಖೇಶ್ ಅಂಬಾನಿ ಮತ್ತು ಗೌತಮ್ ಅದಾನಿ ಕೂಡ ಭಾಗಿಯಾಗಿದ್ದರು.
ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಭಾಷಣದಲ್ಲಿ ಫಡ್ನವೀಸ್ ಅವರು, ರಾಜ್ಯದ ಬಗ್ಗೆ ತಮ್ಮ ದೂರದೃಷ್ಟಿ ಬಗ್ಗೆ ಮಾತನಾಡಿದ್ದಾರೆ. … ಇಲ್ಲಿಂದ (ಮುಂದೆ) ನಾವು ಮಹಾರಾಷ್ಟ್ರದ ಅಭಿವೃದ್ಧಿಗಾಗಿ ಕೆಲಸ ಮಾಡುತ್ತೇವೆ ಮತ್ತು ನಾವು ನಿಲ್ಲುವುದಿಲ್ಲ” ಎಂದು ಹೇಳಿದ್ದಾರೆ.
‘ದಿಕ್ಕು ಮತ್ತು ವೇಗ ಒಂದೇ… ನಮ್ಮ ಪಾತ್ರಗಳು ಮಾತ್ರ ಬದಲಾಗಿವೆ… ಮಹಾರಾಷ್ಟ್ರದ ಹಿತಾಸಕ್ತಿಗೆ ತಕ್ಕಂತೆ ನಾವು ನಿರ್ಧಾರ ತೆಗೆದುಕೊಳ್ಳುತ್ತೇವೆ’ ಎಂದು ಹೇಳಿದ್ದಾರೆ.

ಪ್ರಮಾಣ ವಚನ ಸ್ವೀಕರಿಸಿದ ಕೆಲವೇ ದಿನಗಳಲ್ಲಿ, ಮಹಾರಾಷ್ಟ್ರ ಸರ್ಕಾರದ ಪ್ರಧಾನ ಕಚೇರಿಯಾದ ಮಂತ್ರಾಲಯದಲ್ಲಿ ಫಡ್ನವೀಸ್‌, ಏಕನಾಥ ಶಿಂಧೆ ಹಾಗೂ ಅಜಿತ ಪವಾರ್‌ ಮರಾಠ ಐಕಾನ್ ಗಳಾದ ಛತ್ರಪತಿ ಶಿವಾಜಿ ಮಹಾರಾಜ ಮತ್ತು ಡಾ. ಬಿ.ಆರ್. ಅಂಬೇಡ್ಕರ್ ಅವರಿಗೆ ಪುಷ್ಪ ನಮನ ಸಲ್ಲಿಸಿದರು. ಫಡ್ನವಿಸ್ ಅವರು ಹೊಸ ಮುಖ್ಯಮಂತ್ರಿಯಾಗಿ ತಮ್ಮ ಮೊದಲ ಫೈಲ್‌ ವೈದ್ಯಕೀಯ ಸಹಾಯದ ಚೆಕ್ ಸಹಿ ಹಾಕಿದರು .
ಫಡ್ನವಿಸ್ ಈಗ ಆರು ಬಾರಿ ಶಾಸಕರಾಗಿ ಮೂರು ಬಾರಿ ಮುಖ್ಯಮಂತ್ರಿಯಾಗಿದ್ದಾರೆ. ಅವರು ಮೊದಲ ಬಾರಿಗೆ ಅಕ್ಟೋಬರ್ 2014 ರಿಂದ ನವೆಂಬರ್ 2019 ರವರೆಗೆ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದರು, 44 ನೇ ವಯಸ್ಸಿನಲ್ಲಿ ರಾಜ್ಯದ ಅತ್ಯಂತ ಕಿರಿಯ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ನಂತರ 2019 ರ ನವೆಂಬರ್ 23 ರಿಂದ 28, ವರೆಗೆ ಕೇವಲ ಐದು ದಿನಗಳ ಕಾಲ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದರು.

ಪ್ರಮುಖ ಸುದ್ದಿ :-   ಪಾಕಿಸ್ತಾನಕ್ಕೆ ತಕ್ಕ ಪ್ರತ್ಯುತ್ತರ: ಲಾಹೋರ್, ಇಸ್ಲಾಮಾಬಾದ್ ಮೇಲೆ ಭಾರತದ ವಾಯು ದಾಳಿ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement